ಮೂರು ವಾರಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಹೈಕೋರ್ಟ್‌ ಆದೇಶ

Date:

  • ಮಾ.20ರಂದು ಸಭೆ ನಡೆಸಿದ್ದ ಕಾರ್ಮಿಕ ಇಲಾಖೆ ಆಯುಕ್ತರು
  • ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಮುಷ್ಕರ

ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ, ಮಾ. 24ರಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ, ಮೂರು ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಸಾರಿಗೆ ನೌಕರರ ಮುಷ್ಕರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

ಸಿಜೆ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿ, ಸಂಘಟನೆಗಳಿಗೆ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.

ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ, “ಕಾರ್ಮಿಕ ಇಲಾಖೆ ಆಯುಕ್ತರು ಮಾ.20ರಂದು ಸಭೆ ನಡೆಸಿದ್ದರು. ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಮುಂದಿನ ಸಭೆಯನ್ನು ಏ. 6ರಂದು ನಿಗದಿಪಡಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

“ಸಾರಿಗೆ ಮುಷ್ಕರದಿಂದ ವಿದ್ಯಾರ್ಥಿಗಳು, ನೌಕರರು, ಪ್ರಯಾಣಿಕರಿಗೆ ತೊಂದರೆ ಉಂಟಾಗಲಿದೆ. ವರ್ಷಪೂರ್ತಿ ಓದಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಎದುರಿಸಲು ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತದೆ. ಈ ಮುಷ್ಕರ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ. ಏ. 6ರಂದು ಮುಂದಿನ ಸಭೆಯಿರುವ ಕಾರಣ 3 ವಾರಗಳ ಕಾಲ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಬಾರದು” ಎಂದು ನ್ಯಾಯಾಲಯ ಸೂಚನೆ ನೀಡಿದೆ.

ಹಿನ್ನಲೆ ಏನು?

ರಾಜ್ಯಾದ್ಯಂತ ಮಾರ್ಚ್‌ 24ರಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು.

ಈ ಹಿಂದೆ, ಮಾರ್ಚ್ 21ರಂದು ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆ, ಮಾ. 21ರ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿತ್ತು. ಈಗ ಚಂದ್ರಶೇಖರ್ ನೇತೃತ್ವದ ಸಮಾನ ಮನಸ್ಕರ ವೇದಿಕೆ ಸರ್ಕಾರಿ ನೌಕರರಿಗೆ ನೀಡುವಷ್ಟು ನಮಗೂ ಸಂಬಳ ನೀಡಬೇಕೆಂದು ಪಟ್ಟು ಹಿಡಿದಿದೆ. ಈ ಹಿನ್ನೆಲೆ ನಾಳೆಯಿಂದ ಮುಷ್ಕರಕ್ಕೆ ವೇದಿಕೆ ಕರೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು...

ಎರಡು ಟೆಕ್ ಸಿಟಿ ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ಹೈದರಾಬಾದ್‌ನ ಕಾಚಿಗುಡ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಭಾನುವಾರ ರಾತ್ರಿ 10.53ಕ್ಕೆ...

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯ ಅಂತಿಮ ಪಟ್ಟಿ ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ ಮರುವಿಂಗಡಣೆಗೆ ಸಂಬಂಧಿಸಿದಂತೆ 225...

ವಿಡಿಯೋಗಾಗಿ ಟಿಕೆಟ್ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಿದ ಖ್ಯಾತ ಯೂಟ್ಯೂಬರ್; ಕ್ರಮಕ್ಕೆ ಮುಂದಾದ ಮೆಟ್ರೋ

ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಹೇಗೆ ಪ್ರಯಾಣಿಸಬಹುದು ಎಂದು ತೋರಿಸಿಕೊಟ್ಟ ಖ್ಯಾತ ವಿದೇಶಿ...