ಬೆಂ-ಮೈ ಹೆದ್ದಾರಿ | ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿದ ಚಾಲಕ

Date:

ಬೆಂಗಳೂರು-ಮೈಸೂರು ಹೆದ್ದಾರಿ ಆರಂಭವಾದಾಗಿನಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಇದೀಗ, ಹೆದ್ದಾರಿಯಲ್ಲಿ ಸಿಮೆಂಟ್‌ ತುಂಬಿದ ಕಂಟೇನರ್ ಟೈರ್ ಸ್ಫೋಟಗೊಂಡು ಪಲ್ಟಿಯಾಗಿದೆ. ಇದರಡಿ ಕಂಟೇನರ್‌ನ ಚಾಲಕ ಸಿಲುಕಿ ಒದ್ದಾಡಿದ ಘಟನೆ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮದ ಬಳಿ ಕಂಟೇನರ್ ಪಲ್ಟಿಯಾಗಿದೆ. ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಕಂಟೇನರ್ ಉರುಳಿ ಬಿದ್ದಿದೆ. ಈ ವೇಳೆ, ಕಂಟೇನರ್‌ ಕೆಳಗೆ ಚಾಲಕ ಸಿಲುಕಿ ಬಿದ್ದಿದ್ದು, ಸ್ಥಳೀಯರು ಹಾಗೂ ಪೊಲೀಸರು ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿ ಚಾಲಕನನ್ನು ರಕ್ಷಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಜಾ ದಿನಗಳೆಂದರೆ ಖಾಸಗಿ ಬಸ್‌ಗಳಿಗೆ ಹಬ್ಬ; ದುಪ್ಪಟ್ಟಾಗುವ ಟಿಕೆಟ್‌ ದರ; ಕ್ರಮ ಕೈಗೊಳ್ಳದ ಸಾರಿಗೆ ಇಲಾಖೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿಮೆಂಟ್‌ ತುಂಬಿದ ಕಂಟೇನರ್ ವೊಂದು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ, ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಕಂಟೇನರ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ಲಾರಿ ಇಂಜಿನ್ ಮತ್ತು ಕಂಟೇನರ್ ಇಬ್ಬಾಗವಾಗಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಸ್‌ವೈ ಭೇಟಿಯಾದ ಸೋಮಣ್ಣ- ಚರ್ಚೆಗೆ ಗ್ರಾಸ

ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ...

ಬಿಬಿಎಂಪಿ | ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಹೆಸರು ಪ್ರಕಟ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಸುಸ್ತಿದಾರರ ಪಟ್ಟಿಯನ್ನು ಬೃಹತ್ ಬೆಂಗಳೂರು ಮಹಾನಗರ...

ಅನ್ನ, ಆರೋಗ್ಯ, ಆಶ್ರಯ, ಅಕ್ಷರವೇ ನಮ್ಮ ಸರ್ಕಾರದ ಮೂಲಮಂತ್ರ: ಸಿಎಂ ಸಿದ್ಧರಾಮಯ್ಯ

“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ...

ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ...