ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

Date:

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನವಶ್ಯಕವಾಗಿ ಅನುತ್ತೀರ್ಣರಾಗುತ್ತಿದ್ದಾರೆ. ಕನ್ನಡ ನಾಡಿನ ಮಕ್ಕಳು ಅನವಶ್ಯಕವಾಗಿ ಹಿಂದಿ ಕಲಿಯುತ್ತಿರುವುದು, ಇದರಿಂದ ನಯಾಪೈಸೆ ಪ್ರಯೋಜನ ಇಲ್ಲ. ತಾಯ್ನುಡಿಯಾಗಿ ಕನ್ನಡ, ಸಂಪರ್ಕ ನುಡಿಯಾಗಿ ಇಂಗ್ಲಿಷ್ – ಎರಡು ನುಡಿ ಪದ್ಧತಿಯನ್ನು ಶಾಲಾ ಹಂತದಲ್ಲಿ ಜಾರಿಗೊಳಿಸಬೇಕು. ಆದ ಕಾರಣ ಕನ್ನಡಪರ ಸಂಘಟನೆಗಳು ಒಂದುಗೂಡಿ ಹಿಂದಿ ವಿರೋಧಿ ಕರ್ನಾಟಕ ವೇದಿಕೆಯ ಮುಖಾಂತರ ಸರ್ಕಾರದ ಮೇಲೆ ಈ ವಿಷಯ ಕುರಿತು ಒತ್ತಡ ತರಲು ಎಸ್‌ಎಸ್‌ಎಲ್‌ಸಿ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿದರು.

- Advertisement -

ಕಳೆದ ಎರಡು ತಿಂಗಳಿಗಳಿಂದಲೂ ಪಾಸ್ ವಿಥೌಟ್ ಹಿಂದಿ ಮತ್ತು ಶಾಲಾ ಶಿಕ್ಷಣದಲ್ಲಿ ಹಿಂದಿ ಕೈಬಿಡುವಂತೆ ವ್ಯವಸ್ಥಿತವಾಗಿ ಕನ್ನಡಪರ ಸಂಘಟನೆಗಳಿಂದ ಹೋರಾಟ ನಡೆಯುತ್ತಿದೆ, ರಾಜ್ಯ ಸರ್ಕಾರ ಈ ವಿಷಯದ ಕಡೆ ಗಮನ ಹರಿಸುತ್ತಿಲ್ಲ, ಆದಕಾರಣ ಎಸ್ ಎಸ್ ಎಲ್ ಸಿ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ಮುತ್ತಿಗೆ ಹಾಕಲಾಯಿತು. ಹಾಗಾಗಿ ಇಲಾಖೆಯ ನಿರ್ದೇಶಕರಾದ ಮಹೇಶ್ ರವರು ಸ್ಪಂದಿಸಲೇಬೇಕಾದ ಸಂದರ್ಭ ಉಂಟಾಗಿ ಮಹೇಶ್ ರವರಿಗೆ ಹಿಂದಿ ವಿರೋಧಿ ಕರ್ನಾಟಕ ವೇದಿಕೆ ಕಡೆಯಿಂದ ಸರ್ಕಾರಕ್ಕೆ 5 ಬೇಡಿಕೆಗಳಿರುವ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

2026-27ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎರಡು ನುಡಿ ಕಲಿಕಾ ಪದ್ಧತಿಯನ್ನು ಜಾರಿಗೊಳಿಸಬೇಕು. ಥೋರಟ್ ಆಯೋಗದ ವರದಿಯನ್ನು ಶಾಸನಸಭೆಯಲ್ಲಿ ಹಾಗೂ ಸಾರ್ವಜನಿಕ ಚರ್ಚೆಗೆ ಒದಗಿಸಬೇಕು. ದ್ವಿಭಾಷಾ ನೀತಿ ಜಾರಿಯಾಗುವವರೆಗೆ. ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯಗೊಳಿಸದಂತೆ ಸರ್ಕಾರವು ಆದೇಶ ಹೊರಡಿಸಬೇಕು. ಈ ಹಿಂದಿನ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಗಳಲ್ಲಿ ಹಿಂದಿ ಭಾಷೆಯಲ್ಲಿ ನಪಾಸಾದ ಎಲ್ಲ ವಿದ್ಯಾರ್ಥಿಗಳನ್ನೂ ಉತ್ತೀರ್ಣರೆಂದು ಘೋಷಿಸಿ ಅವರ ಶೈಕ್ಷಣಿಕ ಮುನ್ನಡೆಗೆ ಅವಕಾಶ ನೀಡಬೇಕು. ಹಿಂದಿ ಭಾಷಾ ಶಿಕ್ಷಕರ ನೇಮಕಾತಿಯನ್ನು ರದ್ದುಪಡಿಸಬೇಕು ಮತ್ತು ಈಗಾಗಲೆ ನೇಮಕಗೊಂಡಿರುವ ಶಿಕ್ಷಕರನ್ನು ಕನ್ನಡ ಭಾಷಾ ಶಿಕ್ಷಕರಾಗಿ ನಿಯೋಜಿಸಲು ಕ್ರಮವಹಿಸಿ ಅದಕ್ಕೆ ಸೂಕ್ತ ಶೈಕ್ಷಣಿಕ ಅರ್ಹತೆ ಪಡೆಯಲು ನಿಯಮಗಳನ್ನು ರೂಪಿಸಬೇಕು. ಕರ್ನಾಟಕ ರಾಜ್ಯದ ಯಾವುದೇ ಹಂತದ ಶಿಕ್ಷಣ ಪಠ್ಯಕ್ರಮದೊಳಗೆ ‘ಹಿಂದಿ ಭಾಷೆಯು ರಾಷ್ಟ್ರ ಭಾಷೆ ‘ ಎಂಬ ಬಿಂಬಿಸುವ ಕಲ್ಪಿತ ವಿಷಯವನ್ನು ತೆಗೆದು ಹಾಕಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಾಸ್ ವಿತೌಟ್ ಹಿಂದಿʼ ಎಂಬ ನಿಯಮವನ್ನು ಕರ್ನಾಟಕ ಸರ್ಕಾರವು ಈ ತಕ್ಷಣ ಪ್ರಕಟಿಸಬೇಕು. ಇಲ್ಲದಿದ್ದಲ್ಲಿ ಮಾ. 30 ರಂದು ಹಿಂದಿ ಭಾಷಾ ಪರೀಕ್ಷೆ ನಡೆಯುವ ದಿನದಂದು ಎಲ್ಲ ಕನ್ನಡಪರ-ದಲಿತ-ರೈತ-ಜನಪರ ಸಂಘಟನೆಗಳು ಸೇರಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

Advertisements

ಜಾಣಗೆರೆ ವೆಂಕಟರಾಮಯ್ಯ, ಕೋಡಿಹಳ್ಳಿ ಚಂದ್ರಶೇಖರ್, ಸಾರಾ ಗೋವಿಂದು, ಕರವೇ ಶಿವರಾಮೇಗೌಡ, ದ್ರಾವಿಡ ಕನ್ನಡಿಗರು ಅಭಿ ಒಕ್ಕಲಿಗ, ಶೇ ಬೋ ರಾಧಾಕೃಷ್ಣ, ಪಾರ್ವತೀಶ್ ಬಿಳಿದಾಳೆ, ಕದಂಬ ಪಡೆ ಚೇತನ್, ಯುವ ಕನ್ನಡಿಗರ ವೇದಿಕೆ ರಾಮ್ ಪ್ರಸಾದ್, ವಿಜಯ್ ಕುಮಾರ್, ಶಿವಕುಮಾರ್ , ಪದ್ಮ, ಮಂಜುಳ ಇತರರು ಮುಂತಾದವರು ಹೋರಾಟದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...

ಬೆಂಗಳೂರು ಪೊಲೀಸರ ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’- ಏನಿದು ಯೋಜನೆ?

ಹಗಲು-ರಾತ್ರಿಯೆನ್ನದೆ ಸಾರ್ವಜನಿಕರ ರಕ್ಷಣೆಗಾಗಿ ಶ್ರಮಿಸುವ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ದೈಹಿಕ...