ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಸುಷ್ಮಾ ಬಿ. ಎಸ್. ಅವರಿಗೆ ಪಿಎಚ್.ಡಿ. ಪದವಿ ಲಭಿಸಿದೆ. ಇವರು ಬೆಂಗಳೂರು ನಗರ ಜಿಲ್ಲೆ, ದಕ್ಷಿಣ ತಾಲೂಕಿನ ಸೀಮನಹಳ್ಳಿಯವರು.
ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಟಿ. ಎಚ್. ಮುತ್ತಣಿ ಅವರ ಮಾರ್ಗದರ್ಶನದಲ್ಲಿ ಅವರು ಸಲ್ಲಿಸಿದ “Infrastructural Upgradation of Public Primary Healthcare in Karnataka – A Case Study of Magadi Taluk, Ramanagara District” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡಾ. ಸುಷ್ಮಾ ಬಿ. ಎಸ್. ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬದವರು, ಗುರು-ಹಿರಿಯರು, ಸ್ನೇಹಿತರು, ಬಂಧುಗಳು ಹಾಗೂ ಹಿತೈಷಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.




