ಮೋಚಾ ಚಂಡಮಾರುತ | ರಾಜ್ಯದಲ್ಲಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

  • ಸೋಮವಾರ ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ
  • ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ ಮಳೆ ತಂಪೆರೆದಿದೆ

ಕಳೆದ ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ ಮಳೆ ತಂಪೆರಿದಿದ್ದು, ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ನೈಋತ್ಯ ಭಾಗದಲ್ಲಿ ಮಾರುತಗಳು ಮುಂದಿನ 24 ಗಂಟೆಯಲ್ಲಿ ತೀವ್ರಗೊಂಡು ಮೋಚಾ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರ ಪರಿಣಾಮ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಒಡಿಶಾ, ಅಂಡಮಾನ್, ನಿಕೋಬಾರ್‌ಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿಯೂ ಮೋಚಾ ಚಂಡಮಾಡುತ ಬೀಸಲಿದ್ದು, ರಾಜ್ಯದ ಹಲವೆಡೆ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ಎಲ್ಲೆಲ್ಲಿ ಮಳೆಯಾಗಲಿದೆ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಮನಗರ, ಮಾಲೂರು, ಹೊಸಕೋಟೆ, ಕನಕಪುರ, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರ, ಸೈದಾಪುರ, ಕುಣಿಗಲ್, ಕೆಐಎಎಲ್​, ಖಜೂರಿ, ತಿರುಮಲ, ಕೃಷ್ಣರಾಜಪೇಟೆ, ಗೋಣಿಕೊಪ್ಪಲು, ಹರದನಹಳ್ಳಿ, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರಿನಲ್ಲಿ ಮಳೆಯಾಗಲಿದೆ.

ಸೋಮವಾರ ಗುಡುಗು ಸಹಿತ ಮಳೆ ಸಾಧ್ಯತೆ

ಸೋಮವಾರ ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ನಗರದಲ್ಲಿ ಸಾಯಂಕಾಲದ ವೇಳೆಗೆ ಸಾಧಾರಣ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ರೋಡ್‌ ಶೋ | ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಭಾನುವಾರ ಎಲ್ಲೆಲ್ಲಿ ಮಳೆಯಾಗಿದೆ?

ಭಾನುವಾರ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 7 ಸೆಂ.ಮೀ, ರಾಮನಗರದಲ್ಲಿ 6 ಸೆಂ.ಮೀ, ಕೋಲಾರ ಜಿಲ್ಲೆಯ ಮಾಲೂರು, ತುಮಕೂರಿನ ವೈ.ಎನ್‌.ಹೊಸಕೋಟೆ, ಕನಕಪುರದಲ್ಲಿ 5, ರಾಯಚೂರು, ಮೈಸೂರಿನ ಸರಗೂರು, ಚಿತ್ರದುರ್ಗದ ಪರಶುರಾಂಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚುನಾವಣೆಯ ಹೊತ್ತಿನಲ್ಲೇ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದೆ. ಚುನಾವಣೆಯ ಹೊತ್ತಿನಲ್ಲೇ ಮೋಚಾ ಚಂಡಮಾರುತ ಬೀಸುತ್ತಿದ್ದು, ಈ ಮಳೆ ಮತದಾನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...