ಗಣ್ಯರಿಗೆ ಐಎಎಸ್ ಅಧಿಕಾರಿಗಳು ಸ್ವಾಗತ ಕೋರುವುದರಲ್ಲಿ ಯಾವುದೇ ತಪ್ಪಿಲ್ಲ: ಬ್ರಿಜೇಶ್ ಕಾಳಪ್ಪ

Date:

  • ಉಪ ಸಭಾಪತಿಗಳ ವಿರುದ್ಧ ನಡೆಸುತ್ತಿರುವ ಅನುಚಿತ ವರ್ತನೆ ಖಂಡನೀಯ
  • ಗಣ್ಯ ವ್ಯಕ್ತಿಗಳು ರಾಜ್ಯಕ್ಕೆ ಬಂದಾಗ ಐಎಎಸ್ ಅಧಿಕಾರಿಗಳು ಸ್ವಾಗತ ಕೋರುವುದರಲ್ಲಿ ತಪ್ಪಿಲ್ಲ 

“ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಇಂಡಿಯಾ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ದೇಶದ ಅನೇಕ ರಾಜ್ಯಗಳ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರುಗಳಿಗೆ ಸ್ವಾಗತವನ್ನು ನೀಡಲು ರಾಜ್ಯದ ಐಎಎಸ್ ಅಧಿಕಾರಿಗಳನ್ನು ನೇಮಿಸಿದ ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಉಪ ಸಭಾಪತಿಗಳ ವಿರುದ್ಧ ನಡೆಸುತ್ತಿರುವ ಅನುಚಿತ ವರ್ತನೆಯು ಇವರುಗಳ ಹತಾಶ ಭಾವನೆಯನ್ನು ತೋರಿಸುತ್ತದೆ” ಎಂದು ಆಮ್ ಆದ್ಮಿ ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ ತಿಳಿಸಿದರು.

- Advertisement -

“ಅರವಿಂದ ಕೇಜ್ರಿವಾಲ್, ಭಗವತ್ ಸಿಂಗ್ ಮಾನ್, ನಿತೀಶ್ ಕುಮಾರ್, ಸ್ಟಾಲಿನ್, ಹೇಮಂತ್ ಸುರೇನ್, ಮಮತಾ ಬ್ಯಾನರ್ಜಿ ಪ್ರಸ್ತುತ ದೇಶದ ನಾನಾ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ತೇಜಸ್ವಿ ಯಾದವ್ ಹಾಲಿ ಉಪ ಮುಖ್ಯಮಂತ್ರಿಗಳಾಗಿದ್ದಾರೆ. ಲಾಲು ಪ್ರಸಾದ್ ಯಾದವ್, ಶರತ್ ಯಾದವ್, ಉದ್ದವ್ ಠಾಕ್ರೆ, ಅಖಿಲೇಶ್ ಯಾದವ್, ಮೆಹಬೂಬ ಮುಫ್ತಿ, ಉಮರ್ ಅಬ್ದುಲ್ಲಾ, ಸೀತಾರಾಮ್ ಯಚೂರಿ, ಡಿ.ರಾಜ ಇವರುಗಳೆಲ್ಲರೂ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದವರು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದವರು. ಇವರು ಯಾರು ಸಾಮಾನ್ಯ ವ್ಯಕ್ತಿಗಳು ಅಲ್ಲ ಅಥವಾ ಹಾದಿಬೀದಿಯಲ್ಲಿ ಹೋಗುವವರು ಅಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಇವರುಗಳ ಸ್ವಾಗತಕ್ಕೆ ಸಾಮಾನ್ಯವಾಗಿ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಹೋದಾಗ ಅಲ್ಲಿನ ಮುಖ್ಯಮಂತ್ರಿಗಳ ಸ್ವಾಗತ ಕೋರುವುದು ನಮ್ಮ ದೇಶದ ಪರಿಪಾಠ ಹಾಗೂ ಸಂಪ್ರದಾಯ. ಇಂತಹ ಗಣ್ಯಾತಿಗಣ್ಯ ವ್ಯಕ್ತಿಗಳು ರಾಜ್ಯಕ್ಕೆ ಬಂದಾಗ ಹಿರಿಯ ಐಎಎಸ್ ಅಧಿಕಾರಿಗಳು ಸ್ವಾಗತ ಕೋರುವುದರಲ್ಲಿ ಯಾವುದೇ ತಪ್ಪಿಲ್ಲ ಹಾಗೂ ಈ ಅಧಿಕಾರಿಗಳೇನು ಸ್ವರ್ಗದಿಂದ ಬಂದವರಲ್ಲ. ಹೀಗಿರುವಾಗ ಸುಖಾಸುಮ್ಮನೇ ರಾಜಕೀಯವನ್ನು ಬೆರೆಸಿ ವಿಧಾನಸಭೆಯ ಕಲಾಪಗಳನ್ನು ಹಾಳು ಮಾಡುವುದು ಸರಿಯಲ್ಲ” ಎಂದು ಬ್ರಿಜೇಶ್ ಕಾಳಪ್ಪ ತಿಳಿಸಿದರು.

“ಇಂಡಿಯಾ ವಿಪಕ್ಷಗಳ ಸಭೆ ನಡೆಯುವಾಗಲೇ ದೆಹಲಿಯಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ 38 ಪಕ್ಷಗಳಲ್ಲಿ 26 ಪಕ್ಷಗಳಲ್ಲಿ ಯಾರು ಸಹ ಲೋಕಸಭಾ ಸದಸ್ಯರು ಇಲ್ಲ. ಇವುಗಳಲ್ಲಿ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯಲ್ಲಿ  ಭಾಗವಹಿಸೇ ಇಲ್ಲ. ಇವುಗಳಲ್ಲಿ 8 ಪಕ್ಷಗಳಿಗೆ ಸೇರಿಸಿ ಕೇವಲ 9 ಎಂಪಿಗಳು ಮಾತ್ರ ಇದ್ದಾರೆ. ಇವುಗಳಲ್ಲಿ 11 ಪಕ್ಷಗಳು  ಮಾನ್ಯತೆಯನ್ನೇ ಪಡೆದಿಲ್ಲ. ಇಂತಹವರೊಂದಿಗೆ ಪ್ರಧಾನಮಂತ್ರಿಗಳು ಭಾಗವಹಿಸುವುದು ಅಗೌರವ ಎಂದು ಹೇಳಲು ಸಾಧ್ಯವೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಉಪಸಭಾಧ್ಯಕ್ಷರು ದಲಿತರು ಎನ್ನುವ ಟ್ರಂಪ್ ಕಾರ್ಡ್‌ ತೇಲಿಬಿಟ್ಟ ಸರ್ಕಾರ: ಕುಮಾರಸ್ವಾಮಿ ಕಿಡಿ

“ರಾಜ್ಯದಲ್ಲಿ ಬರಗಾಲದಂತಹ ತೀವ್ರ ಸಮಸ್ಯೆಗಳು, ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳು, ಮಾವು ಬೆಳೆಗಾರರ ಸಂಕಷ್ಟ ಹಾಗೂ ಅನೇಕ ಸಮಸ್ಯೆಗಳು ಇದ್ದಾಗಲೂ ಇವುಗಳ ಬಗ್ಗೆ ಚರ್ಚಿಸದೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರುಗಳು ಸದನವನ್ನು ಹಾಳು ಮಾಡುತ್ತಿರುವುದು ಸಂವಿಧಾನ ವಿರೋಧಿ ಕೃತ್ಯ” ಎಂದು ಖಂಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...