ಕಾರ್ಮಿಕರು ಕೆಲಸದ ಸ್ಥಳದಲ್ಲಿ ಕಿರುಕುಳ ಅನುಭವಿಸುತ್ತಿದ್ದರೆ, ಈ ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

Date:

ಕೆಲಸದ ಸ್ಥಳದಲ್ಲಿ ಕಾರ್ಮಿಕರ ಮೇಲೆ ನಡೆಯುವ ಹಿಂಸೆಗಳಿಗೆ ನೆರವು ನೀಡುವ ಉದ್ದೇಶದಿಂದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹೆಲ್ಪ್‌ಲೈನ್ ಆರಂಭಿಸಿದ್ದು, ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಸುಮಾರು 2,780 ದೂರುಗಳು ದಾಖಲಾಗಿದ್ದು, ಈ ಪೈಕಿ 1,160 ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಸಂಘಟನೆ ಹೇಳಿದೆ.

- Advertisement -

“ಇಂಡಿಯಾ ಲೇಬರ್ ಲೈನ್ ವಲಸೆ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಕೂಲಿ ವಂಚನೆ, ಪಿ.ಎಫ್. ಗ್ರಾಚ್ಯುಟಿ, ಕೆಲಸದ ಸ್ಥಳದಲ್ಲಿ ಕಾರ್ಮಿಕರ ಮೇಲೆ ನಡೆಯುವ ಹಿಂಸೆಗೆ ಸಂಬಂಧಿಸಿದಂತೆ ಮಧ್ಯಸ್ಥಿಕೆಯ ಮೂಲಕ ಕಾರ್ಮಿಕರಿಗೆ ನೆರವು ನೀಡುವ ಉದ್ದೇಶದಿಂದ ಈ ಹೆಲ್ಪ್‌ಲೈನ್ ಆರಂಭವಾಗಿದೆ. ಈ ಕೆಲಸವು ಜುಲೈ 2021 ರಿಂದ ಪ್ರಾರಂಭವಾಗಿದ್ದು, ಪ್ರಸ್ತುತ ಬೆಂಗಳೂರು, ಹುಬ್ಬಳಿ-ಧಾರವಾಡ, ಮುಂಬೈ, ದೆಹಲಿ ಸೇರಿದಂತೆ ದೇಶದ 16 ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬೆಂಗಳೂರಿನಲ್ಲಿ ದಾಖಲಾದ ದೂರಗಳನ್ನು ಇತ್ಯರ್ಥಪಡಿಸಿ ಕಾರ್ಮಿಕರಿಗೆ ₹2.62 ಕೋಟಿ ಕೊಡಿಸಲಾಗಿದೆ. ಇದರಿಂದ ಸುಮಾರು 3,068 ವಲಸೆ ಕಾರ್ಮಿಕ ಕುಟುಂಬಗಳಿಗೆ ಅನುಕೂಲವಾಗಿದೆ” ಎಂದು ತಿಳಿಸಿದೆ.

ದೇಶದ ಬೇರೆ ಬೇರೆ ರಾಜ್ಯಗಳಿಂದ ಹಾಗೂ ಕರ್ನಾಟಕದ ನಾನಾ ಜಿಲ್ಲೆಗಳಿಂದ ಜೀವನ ನಡೆಸಲು ಕೆಲಸಕ್ಕಾಗಿ ಲಕ್ಷಾಂತರ ಕಾರ್ಮಿಕರು ವಲಸೆ ಬರುತ್ತಾರೆ. ಇವರು ಅಸಂಘಟಿತ ವಲಯಗಳಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ, ಮನೆಗೆಲಸ, ಹೌಸ್‌ ಕೀಪಿಂಗ್, ಗಾರ್ಮೆಂಟ್, ಸಣ್ಣ-ಸಣ್ಣ ಕಾರ್ಖಾನೆಗಳು, ಸೆಕ್ಯೂರಿಟಿ ಗಾರ್ಡ್, ಸೇವಾ ವಲಯಗಳಾದ ನರ್ಸಿಂಗ್, ಹೋಮ್ ನರ್ಸಿಂಗ್, ಟ್ರಾನ್ಸ್‌ಪೋರ್ಟ್, ಗಿಗ್ ವರ್ಕರ್ಸ್‌ ಹೀಗೆ ಇನ್ನಿತರ ಅಸಂಘಟಿತ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಂಗಳವಾರ ಬೆಳ್ಳಂಬೆಳಿಗ್ಗೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಇಂತಹ ಕಾರ್ಮಿಕರು ಮಾಲೀಕರಿಂದ/ಗುತ್ತಿಗೆದಾರರ ಕಡೆಯಿಂದ ಕೂಲಿ ವಂಚನೆ, ಪಿ.ಎಫ್, ಅಪಘಾತ ಪರಿಹಾರ ಕೆಲಸದ ಸ್ಥಳದಲ್ಲಿ ಕಿರುಕುಳ ಅನುಭವಿಸುತ್ತಿದ್ದಲ್ಲಿ, ಅವರು ಇಂಡಿಯಾ ಲೇಬರ್ ಲೈನ್ ಉಚಿತ ಸಹಾಯವಾಣಿ ಸಂಖ್ಯೆ 1-800-833-9020 ಕರೆ ಮಾಡಿ ದೂರು ಸಲ್ಲಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...