ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

Date:

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5 ಲಕ್ಷ ನಗದು ಹಾಗೂ ಆಭರಣಗಳನ್ನು ದೋಚಿ, ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ನಗರದ ಜೆ.ಸಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಪ್ಪ ಗಾರ್ಡನ್‌ನಲ್ಲಿ ನಡೆದಿದೆ. ಈ ಸಂಬಂಧ ಜೆ.ಸಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಮಾರಪ್ಪ ಗಾರ್ಡನ್‌ನ 3ನೇ ಕ್ರಾಸ್ ನಿವಾಸಿ ಆರ್‌. ಹಂಸರಾಜ್ ಸಿಂಗ್ (67) ಅವರು ಕಳೆದ 67 ವರ್ಷಗಳಿಂದ ಅದೇ ಮನೆಯಲ್ಲಿ ವಾಸಿಸುತ್ತಿದ್ದಾರೆ. ಸೆಪ್ಟೆಂಬರ್ 3ರಂದು ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ತಮ್ಮ ಮಗಳ ಮನೆಗೆ ತೆರಳಿದ್ದ ಸಂದರ್ಭದಲ್ಲಿ, ಬೆಳಿಗ್ಗೆ ಸುಮಾರು 10 ಗಂಟೆಗೆ ನೆರೆಹೊರೆಯವರು ಕರೆ ಮಾಡಿ ಅವರ ಮನೆಯನ್ನು ಕೆಡವಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ‘

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ, ಆರೋಪಿಗಳಾದ ಸೈಯದ್ ಫರಹಾಜ್ ಅಹ್ಮದ್ ಮತ್ತು ಮೊಹಮ್ಮದ್ ಇರ್ಫಾನ್ ಎಂಬುವರು ಸೇರಿಕೊಂಡು ಮನೆ ಕಟ್ಟಡವನ್ನು ಧ್ವಂಸ ಮಾಡಿರುವುದು ಕಂಡುಬಂದಿದೆ. ಅಲ್ಲದೆ ಮನೆಯಲ್ಲಿದ್ದ ಸೋಫಾ, ವಾಷಿಂಗ್ ಮೆಷಿನ್, ಬಟ್ಟೆ ಹಾಗೂ ಅಡುಗೆ ಪಾತ್ರೆಗಳು ಸೇರಿದಂತೆ ಗೃಹಬಳಕೆ ವಸ್ತುಗಳನ್ನು ನಾಶಪಡಿಸಲಾಗಿದೆ.

ಮನೆಯಲ್ಲಿ ಇರಿಸಲಾಗಿದ್ದ ಸುಮಾರು 5 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳು ಕಳುವಾಗಿದ್ದು, ಬೆಸ್ಕಾಂ (BESCOM) ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ, ಆರೋಪಿಗಳು ಕಲ್ಲಿನಿಂದ ಹೊಡೆದು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದು, ಅಸಭ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಸಂತ್ರಸ್ತ ಆರ್‌. ಹಂಸರಾಜ್ ಸಿಂಗ್ ನೀಡಿದ ದೂರಿನ ಮೇರೆಗೆ ಜೆ.ಸಿ. ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ಗಳಾದ 303(2), 324(4), 351(2), 352 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...