ಸತತ ಮಳೆ, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಬುಧವಾರ ಶಾಲೆಗಳಿಗೆ ರಜೆ: ಡಿಸಿ ಜಗದೀಶ್ ಆದೇಶ

Date:

Advertisements

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ (ಅ.23)ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠಕ್ಕೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.

Advertisements

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X