ಎಕ್ಸ್‌ಪ್ರೆಸ್‌ ವೇ: 25 ಅಪಘಾತ ಸ್ಥಳಗಳ ಗುರುತಿಸುವಿಕೆ, ಅಪಘಾತ ತಡೆಗಟ್ಟಲು ಸುರಕ್ಷತಾ ಕ್ರಮ: ಎಡಿಜಿಪಿ

Date:

  • ಕಾಮಗಾರಿ ಪೂರ್ಣಗೊಳ್ಳುವ ಮುನ್ನ ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ
  • ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮ ಕೈಗೊಳ್ಳಬೇಕು

“ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸಾಕಷ್ಟು ಅಪೂರ್ಣ ಕಾಮಗಾರಿಗಳನ್ನು ಹೊಂದಿದ್ದು, ಅಪಘಾತಗಳು ಮತ್ತು ಸಾವುಗಳನ್ನು ಕಡಿಮೆ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಧಿಕಾರಿಗಳು ತಕ್ಷಣ ಕ್ರಮಕೈಗೊಳ್ಳಬೇಕು” ಎಂದು ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಹೇಳಿದ್ದಾರೆ.

- Advertisement -

ಮೈಸೂರು ಜಿಲ್ಲಾ ಪೊಲೀಸ್, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಎನ್‌ಎಚ್‌ಎಐ ಅಧಿಕಾರಿಗಳೊಂದಿಗೆ ಬುಧವಾರ ಮೈಸೂರಿನಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಕ್ಸ್‌ಪ್ರೆಸ್‌ ವೇಯಲ್ಲಿನ ಬಹಳಷ್ಟು ಕೆಲಸಗಳು ಇನ್ನೂ ಅಪೂರ್ಣವಾಗಿವೆ. ಬೆಂಗಳೂರಿನಿಂದ ಮೈಸೂರುವರೆಗಿನ 118.6 ಕಿಮೀ ವ್ಯಾಪ್ತಿಯಲ್ಲಿ 20ರಿಂದ 25 ಅಪಘಾತ ಸ್ಥಳಗಳನ್ನು ಗಮನಿಸಿದ್ದೇನೆ. ಎನ್‌ಎಚ್‌ಎಐ ಪ್ರಾಯೋಗಿಕ ಆಧಾರದ ಮೇಲೆ ಸ್ವಯಂಚಾಲಿತ ಸಂಖ್ಯೆ-ಪ್ಲೇಟ್ ಗುರುತಿಸುವಿಕೆ ಕ್ಯಾಮೆರಾವನ್ನು ಸ್ಥಾಪಿಸಿದೆ. ಆದರೆ, ಅದು ಸಾಕಾಗುವುದಿಲ್ಲ. ಅಪಘಾತಗಳನ್ನು ತಡೆಗಟ್ಟಲು ಅವರು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

“ಇತ್ತೀಚೆಗೆ ಮೂರು ದಿನಗಳ ಕಾಲ ಎಕ್ಸ್‌ಪ್ರೆಸ್‌ ವೇ ಪರಿಶೀಲಿಸಿದ ಎನ್‌ಎಚ್‌ಐಎ ತಜ್ಞರ ತಂಡವು ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಎನ್‌ಎಚ್‌ಎಐ ಕಾಮಗಾರಿ ಕೈಗೆತ್ತಿಕೊಳ್ಳಲಿದೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇನ್ಸ್‌ಪೆಕ್ಟರ್‌ ಮೇಲೆ ಜಾತಿ ದೌರ್ಜನ್ಯ ಆರೋಪ; ಡಿಸಿಪಿ ವಿರುದ್ಧ ಕ್ರಮಕ್ಕೆ ಆಗ್ರಹ

“ಎಕ್ಸ್‌ಪ್ರೆಸ್‌ ವೇಯಲ್ಲಿ ಕನಿಷ್ಠ ಅವಶ್ಯಕತೆಗಳನ್ನು ಪೂರೈಸಲು ಎನ್‌ಎಚ್‌ಎಐ ಅಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದೇವೆ. ಅವರು ವಿಫಲವಾದರೆ ಮತ್ತೆ ದೊಡ್ಡ ಅಪಘಾತ ಸಂಭವಿಸಿದಲ್ಲಿ ಅವರನ್ನು ನಿರ್ಲಕ್ಷ್ಯದ ಅಡಿಯಲ್ಲಿ ಬಂಧಿಸಲಾಗುತ್ತದೆ” ಎಂದು ಹೇಳಿದರು.

“ಎಕ್ಸ್‌ಪ್ರೆಸ್‌ ವೇ ಉದ್ಘಾಟನೆಗೂ ಮುನ್ನವೇ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು. ಆದರೆ, ಈ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶವಿರುವುದರಿಂದ ಎನ್‌ಎಚ್‌ಎಐ ಕೂಡಲೇ ಕಾಮಗಾರಿ ಆರಂಭಿಸಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...