ಏಕರೂಪ ಶಿಕ್ಷಣಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

Date:

ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಿ, ಬಡವರು ಮತ್ತು ಶ್ರೀಮಂತರ ಮಕ್ಕಳೆನ್ನದೆ ಎಲ್ಲರಿಗೂ ಸಮಾನ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘಟನೆಗಳ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.

- Advertisement -

ಮಂಡ್ಯದ ಇಂಡುವಾಳು ಚಂದ್ರಶೇಖರ್, ಬನ್ನೂರು ನಾರಾಯಣ್ ಸೇರಿದಂತೆ ಹಲವು ಹೋರಾಟಗಾರರ ನೇತೃತ್ವದಲ್ಲಿ ರೂಪುಗೊಂಡಿರುವ ಈ ಹೋರಾಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತ, ಶಿಕ್ಷಣ, ಕನ್ನಡಪರ, ಸಾಮಾಜಿಕ ಹಾಗೂ ಪ್ರಜಾಪ್ರಭುತ್ವಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಸರ್ಕಾರಿ ಶಿಕ್ಷಣ ವ್ಯವಸ್ಥೆಯಲ್ಲಿನ ಅಸಮಾನತೆಗಳನ್ನು ನಿವಾರಿಸಿ, ಶಿಕ್ಷಣವನ್ನು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕನ್ನಾಗಿ ಖಾತ್ರಿಪಡಿಸಬೇಕೆಂಬುದು ಹೋರಾಟದ ಪ್ರಮುಖ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಹೋರಾಟಗಾರರ ಪ್ರಕಾರ, ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಆರ್ಥಿಕವಾಗಿ ಸಬಲರಾದವರ ಮಕ್ಕಳು ಖಾಸಗಿ ಮತ್ತು ದುಬಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದರೆ, ಬಡವರು, ರೈತರು, ಕಾರ್ಮಿಕರು ಹಾಗೂ ಗ್ರಾಮೀಣ ಕುಟುಂಬಗಳ ಮಕ್ಕಳು ಮೂಲಸೌಕರ್ಯ ಮತ್ತು ಶಿಕ್ಷಕರ ಕೊರತೆಯಿರುವ ಸರ್ಕಾರಿ ಶಾಲೆಗಳಲ್ಲಿ ಓದುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಈ ಅಸಮಾನತೆಯನ್ನು ಹೋಗಲಾಡಿಸಿ ಎಲ್ಲ ವರ್ಗದ ಮಕ್ಕಳಿಗೂ ಒಂದೇ ರೀತಿಯ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ಏಕರೂಪ ಸಮಾನ ಶಿಕ್ಷಣ ನೀತಿಯ ಆಶಯವಾಗಿದೆ.

ಈ ಹಿನ್ನೆಲೆಯಲ್ಲಿ ಹೋರಾಟಗಾರರು ಸರ್ಕಾರದ ಮುಂದೆ ಆರು ಪ್ರಮುಖ ಬೇಡಿಕೆಗಳನ್ನು ಮಂಡಿಸಿದ್ದಾರೆ.

1. ರಾಜ್ಯದ 41,905 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿಯಿಂದ 5ನೇ ತರಗತಿಯವರೆಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.

2. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ 6ರಿಂದ 12ನೇ ತರಗತಿಯವರೆಗೆ ನವೋದಯ ಮಾದರಿಯ ಸಿಬಿಎಸ್‌ಇ ಗುಣಮಟ್ಟದ ವಸತಿ ಶಾಲೆಗಳನ್ನು ಆರಂಭಿಸಬೇಕು.

3. ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 80 ಸಾವಿರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಸರ್ಕಾರಿ ಶಾಲಾ ಶಿಕ್ಷಕರನ್ನು ಬೋಧಕೇತರ ಕೆಲಸಗಳಿಗೆ ನಿಯೋಜಿಸುವುದನ್ನು ನಿಲ್ಲಿಸಬೇಕು.

4. ಸರ್ಕಾರಿ ನೌಕರರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಸಕರು, ಸಂಸದರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲೇ ಶಿಕ್ಷಣ ಪಡೆಯುವ ವ್ಯವಸ್ಥೆ ಜಾರಿಗೊಳಿಸಬೇಕು.

5. ರಾಜ್ಯದ ಸರ್ಕಾರಿ ಶಾಲೆಗಳ ಕಟ್ಟಡ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿನ ಕಳಪೆ ಕಾಮಗಾರಿಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ಮೂಲಕ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು ಹಾಗೂ ಅಕ್ರಮಗಳಲ್ಲಿ ಭಾಗಿಯಾಗಿರುವ ಜನಪ್ರತಿನಿಧಿಗಳ ಬೆಂಬಲಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

6. 6ರಿಂದ 10ನೇ ತರಗತಿಯವರೆಗೆ ಸಮಾಜ ವಿಜ್ಞಾನ ವಿಷಯವನ್ನು ದ್ವಿಭಾಷೆಯಲ್ಲಿ ಬೋಧಿಸಬೇಕು. ವಿದ್ಯಾರ್ಥಿಗಳು ಕನ್ನಡ ಅಥವಾ ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಮಾಧ್ಯಮದ ಪಿಯು ಮತ್ತು ಪದವಿ ಕಾಲೇಜುಗಳ ಅಸ್ತಿತ್ವಕ್ಕೆ ಧಕ್ಕೆಯಾಗುವ ಆತಂಕವಿದೆ ಎಂದು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಶೇಷ ವರದಿ ಓದಿದ್ದೀರಾ? ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ, ಸಹಬಾಳ್ವೆ-ಅರಣ್ಯ ಸಂರಕ್ಷಣೆಯ ಭವಿಷ್ಯ

ಈ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ಎಸ್‌ಡಿಎಂಸಿ ಸಂಘ, ಸರ್ಕಾರಿ ಶಾಲೆಗಳ ಹಿರಿಯ ವಿದ್ಯಾರ್ಥಿಗಳ ಬಳಗ ಸೇರಿದಂತೆ ವಿವಿಧ ಸಂಘಟನೆಗಳು ಕೈಜೋಡಿಸಿವೆ. ರಾಜ್ಯದ ವಿವಿಧ ಜಿಲ್ಲೆಗಳ ರೈತಪರ, ಕನ್ನಡಪರ, ಸಾಮಾಜಿಕ ಹಾಗೂ ಶಿಕ್ಷಣದ ಹಿತಾಸಕ್ತಿಗಾಗಿ ಹೋರಾಡುತ್ತಿರುವ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರೂ ಸತ್ಯಾಗ್ರಹದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.

ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಉಪವಾಸ ಸತ್ಯಾಗ್ರಹದಲ್ಲಿ ಸಂತೋಷ್ ಗೌಡ, ಕೂರ್ಗಳ್ಳಿ ರೇವಣ್ಣ, ಧನುಷ್ ಕನ್ನಡಿಗ, ಅಣ್ಣಯ್ಯ, ಮಂಜು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

ಉಡುಪಿ | ಹಾರ್ದಳ್ಳಿ ಮಂಡಳ್ಳಿಯಲ್ಲಿ ಪ್ರಜಾಸೇವೆ ಆಂದೋಲನ: 103ಕ್ಕೂ ಅಧಿಕ ಅರ್ಜಿ ಸ್ವೀಕಾರ

ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾಲೂಕು ಆಡಳಿತ ಕುಂದಾಪುರ ಹಾಗೂ...