ಭಾರತ-ಆಸ್ಟ್ರೇಲಿಯಾ ಟಿ-20 | ಡಿ. 3ರಂದು ನಮ್ಮ ಮೆಟ್ರೋ ಸಂಚಾರ ಸಮಯ ವಿಸ್ತರಣೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸೆಂಬರ್‌ 3ರಂದು ಭಾರತ–ಆಸ್ಟ್ರೇಲಿಯಾ ನಡುವೆ ಟಿ-20 ಪಂದ್ಯಾವಳಿಯ 5ನೇ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ.

- Advertisement -

“ಡಿ. 3ರಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿರುವ ನಾಲ್ಕು ಟರ್ಮಿನಲ್‌ ಮೆಟ್ರೋ ನಿಲ್ದಾಣಗಳಿಂದ ಹೊರಡುವ ರೈಲು ಸೇವೆಗಳನ್ನು ರಾತ್ರಿ 11.45 ರವರೆಗೆ ವಿಸ್ತರಿಸಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಜತೆಗೆ, ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಡಿ. 3ರಂದು ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯವಿದೆ. ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತೃತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತವಾಗಿರುತ್ತದೆ” ಎಂದು ತಿಳಿಸಿದೆ.

“ಪೇಪರ್ ಟಿಕೆಟ್ ದರ ₹50 ಇರಲಿದೆ. ಜೊತೆಗೆ, ಕ್ಯೂಆರ್ ಕೋಡ್ ಟಿಕೆಟ್‌ಗಳು ಸಾಮಾನ್ಯ ದರದ ಶೇ.5 ರಿಯಾಯಿತಿಯೊಂದಿಗೆ ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ. ಅನುಕೂಲಕರ ಪ್ರಯಾಣಕ್ಕೆ, ಕ್ರಿಕೆಟ್ ಪಂದ್ಯದ ಪ್ರಾರಂಭದ ಮೊದಲು ವಾಟ್ಸ್‌ ಆಪ್, ನಮ್ಮ ಮೆಟ್ರೋ ಆಪ್ ಅಥವಾ ಪೇಟಿಎಂ ಆಪ್‌ನಲ್ಲಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಲು ಪ್ರಯಾಣಿಕರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಕಾರ್ಡ್ ಮತ್ತು ಎನ್‌ಸಿಎಮ್‌ಸಿ ಕಾರ್ಡ್‌ಗಳನ್ನು ಸಹ ಎಂದಿನಂತೆ ಬಳಸಬಹುದು” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಮತದಾರ ಪಟ್ಟಿಗೆ ಸೇರ್ಪಡೆ; ಬಿಬಿಎಂಪಿ ವಿಶೇಷ ನೋಂದಣಿ ಅಭಿಯಾನ

ವಿಸ್ತೃತ ಸಮಯದಲ್ಲಿ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಪೇಪರ್ ಟಿಕೆಟ್‌ಗಳನ್ನು ಮಾತ್ರ ಅನುಮತಿಸಲಾಗಿದೆ ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಖರೀದಿ ಜನಸಂದಣಿಯನ್ನು ತಪ್ಪಿಸಲು, ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...