ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

Date:

  • ಬಡವರಿಗೆ ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟ
  • ವಾರದಲ್ಲಿ ಮೂರು ದಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೋಳಿ ಮೊಟ್ಟೆ ನೀಡಲು ಚಿಂತನೆ

ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಮಲತಾಯಿ ಧೋರಣೆಗೆ ಒಳಗಾಗಿದ್ದ ಇಂದಿರಾ ಕ್ಯಾಂಟೀನ್‌ ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜೀವ ಬಂದಂತಾಗಿದೆ. ಆಹಾರ ತಜ್ಞರು ಕ್ಯಾಂಟೀನ್‌ಗಳಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದು, ಈ ಹಿನ್ನೆಲೆ ಕ್ಯಾಂಟೀನ್‌ಗಳಲ್ಲಿ ಊಟದ ಜತೆಗೆ ಮೊಟ್ಟೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

- Advertisement -

ದುಡಿಯುವ ವರ್ಗ, ಕಾರ್ಮಿಕ ವರ್ಗ, ಬಡವರಿಗೆ ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟ ನೀಡಲಾಗುತ್ತದೆ. ಇದು ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದು, ಬೆಂಗಳೂರಿನ 250 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜತೆಗೆ ಕ್ಯಾಂಟೀನ್‌ನ ಊಟದ ಮೆನು ಬದಲಾವಣೆಯಾಗಲಿದೆ. ಮೆನುವನ್ನು ಬಹುತೇಕ ಮುಖ್ಯಮಂತ್ರಿಗಳೇ ಅಂತಿಮಗೊಳಿಸಲಿದ್ದಾರೆ.

ಜತೆಗೆ ಸಾರ್ವಜನಿಕರು ಕ್ಯಾಂಟೀನ್‌ನಲ್ಲಿ ಚಪಾತಿ, ರಾಗಿ ಮುದ್ದೆ, ಟೀ ಸೇರಿದಂತೆ ಮಾಂಸಾಹಾರವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು.

ವಾರದಲ್ಲಿ ಮೂರು ದಿನವಾದರೂ ಕೋಳಿ ಮೊಟ್ಟೆಯನ್ನು ನೀಡಬೇಕು ಇದರಿಂದ ಜನರಲ್ಲಿ ಪೌಷ್ಠಿಕಾಂಶ ಕೊರತೆಯನ್ನು ಸ್ವಲ್ಪಮಟ್ಟಿಗೆ ಆದರೂ ನೀಗಿಸಬಹುದು. ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರ ನೀಡಲು ಕೋಳಿ ಮೊಟ್ಟೆ ಅತ್ಯುತ್ತಮವಾದ ಆಹಾರ ಎಂದು ಆಹಾರ ತಜ್ಞರು ಹಾಗೂ ಬಿಬಿಎಂಪಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ವಾರದಲ್ಲಿ ಮೂರು ದಿನ ಕೋಳಿ ಮೊಟ್ಟೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಮನವಿ ಮಾಡಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಜೂನ್‌ 30 ರವರೆಗೆ ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ : ಕೆಎಸ್‌ಆರ್‌ಟಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜಧಾನಿಯಲ್ಲಿ ಇದ್ದ 198 ಇಂದಿರಾ ಕ್ಯಾಂಟೀನ್‌ಗಳ ಸಂಖ್ಯೆಯನ್ನು 250ಕ್ಕೆ ಏರಿಸಲು ಮುಂದಾಗಿದೆ. ಇದರಲ್ಲಿ 24 ಮೊಬೈಲ್ ಕ್ಯಾಂಟೀನ್‌ಗಳು ಸೇರಿವೆ. ಉತ್ತಮ ಗುಣಮಟ್ಟದ ಆಹಾರ ಸೇರಿದಂತೆ ಕ್ಯಾಂಟೀನ್‌ ಹೈಟೆಕ್ ಮಾಡಲು ಹೆಚ್ಚುವರಿಯಾಗಿ ಪಾಲಿಕೆ 15 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...