ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯ ಅಡಗಿವೆ: ಕೋಟಿಗಾನಹಳ್ಳಿ ರಾಮಯ್ಯ

Date:

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಗಿವೆ. ಇದೀಗ, ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲದಂತಾಗಿದೆ. ಹೀಗಿರುವಾಗ ಅವರಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯ. ಆ ಅರ್ಹತೆಯನ್ನೇ ನಾವು ಕಳೆದುಕೊಂಡಿದ್ದೇವೆ ಎಂದು ಹಿರಿಯ ಲೇಖಕ ಕೋಟಿಗಾನಹಳ್ಳಿ ರಾಮಯ್ಯ ವಿಷಾದಿಸಿದರು.

ಬಹುರೂಪಿ ಪ್ರಕಾಶನ ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಪರಾಗ್, ಪರಿ, ಕರಡಿ ಟೇಲ್ಸ್, ಕಲ್ಪವೃಕ್ಷ, ಏಕತಾರದ ಸಹಯೋಗದಲ್ಲಿ ಮಕ್ಕಳ 10 ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

10 ಮಕ್ಕಳ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “ನಮ್ಮ ದೇಶದಲ್ಲಿ ಪಠ್ಯ ಪುಸ್ತಕಗಳು, ಕಥೆ ಪುಸ್ತಕಗಳ ಮೂಲಕ ಬಹು ಹಿಂದಿನಿಂದಲೂ ಮೈಕ್ರೋ ಫ್ಯಾಸಿಸಂ ಅನ್ನು ಬಿತ್ತಲಾಗುತ್ತಿದೆ. ಆದನ್ನು ಇಂದಿಗೂ ಮುಂದುವರಿಸಿಕೊಂಡು ಹೋಗಲಾಗುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಕ್ಕಳು ಏನು ಓದಬೇಕು, ಏನನ್ನು ಓದಬಾರದು ಎಂಬುದನ್ನು ತೀರ್ಮಾನಿಸುವವರು ಯಾರು? ಇಂಥ ತೀರ್ಮಾನ ಕೈಗೊಳ್ಳಲು ನಮಗೆ ಅರ್ಹತೆ ಇದೆಯೇ? ಈ ಬಗ್ಗೆ ಮಕ್ಕಳಿಂದ ಅಭಿಪ್ರಾಯಗಳನ್ನು ಪಡೆಯಲಾಗಿದೆಯೇ ಎಂಬ ಸಂಕೀರ್ಣ ಪ್ರಶ್ನೆಗಳಿಗೆ ತ್ವರಿತವಾಗಿ ಉತ್ತರ ಕಂಡುಕೊಳ್ಳುವ ಅನಿವಾರ್ಯತೆ ಇದೆ” ಎಂದು ತಿಳಿಸಿದರು.

ಖ್ಯಾತ ಗಾಯಕಿ ಎಂ ಡಿ ಪಲ್ಲವಿ ಅವರು ಮಾತನಾಡಿ, “ಮಕ್ಕಳ ಎಳೆ ಮನಸ್ಸಿನಲ್ಲಿ ಜಾತಿ, ಬಡವ, ಶ್ರೀಮಂತ ಇತ್ಯಾದಿ ಭೇದಭಾವಗಳು ಯಾವುದೂ ಇರುವುದಿಲ್ಲ. ಆದರೆ, ಮಕ್ಕಳನ್ನು ಬೆಳೆಸುವ ಹಾದಿಯಲ್ಲಿ ಈ ರೀತಿಯ ತಾರತಮ್ಯ ಮೂಡಿಸುತ್ತಿದ್ದೇವೆ. ಅವರ ಮನಸ್ಸನ್ನು ಸಂಕೀರ್ಣಗೊಳಿಸುವ ಬದಲು ಹಿಗ್ಗಿಸಲು ಪ್ರಯತ್ನಿಸಿದಾಗ ಉತ್ತಮ ಹಾಗೂ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

“ಕನ್ನಡ ಭಾಷೆಯಲ್ಲಿ ಮಕ್ಕಳ ಪುಸ್ತಕಗಳು ತುಂಬಾ ಕಡಿಮೆ ಇವೆ. ಈ ವಿಷಯದಲ್ಲಿ ಸಾಕಷ್ಟು ಕೆಲಸಗಳು ಆಗಬೇಕಿದೆ. ಹಾಗಾಗಿ, ಬರವಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಕೊಡುಗೆ ನೀಡುವ ಆಸೆ ಇದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆ ಮಧ್ಯೆ ನಿಂತ ಹೆಲಿಕಾಪ್ಟರ್: ಮತ್ತಷ್ಟು ಹೆಚ್ಚಾದ ಸಂಚಾರ ದಟ್ಟಣೆ

“ಮಕ್ಕಳ ಪುಸ್ತಕಗಳನ್ನು ಹೇಗೋ ರೂಪಿಸಬಹುದು. ಆದರೆ, ಅವುಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಹಲವಾರು ಅಡೆತಡೆಗಳು ಸೃಷ್ಟಿಯಾಗಿವೆ. ಒಂದೆಡೆ ಶಾಲೆಗಳೇ ಕಣ್ಮರೆಯಾಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಮಕ್ಕಳೇ ಕಣ್ಮರೆಯಾಗುತ್ತಿದ್ದಾರೆ” ಎಂದು ವಿಜ್ಞಾನ ಬರಹಗಾರರಾದ ನಾಗೇಶ ಹೆಗಡೆ ಹೇಳಿದರು.

“ಮಕ್ಕಳ ಪುಸ್ತಕಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ, ಭಾಷಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸಂಸ್ಥೆಗಳು ಕೆಲಸ ಮಾಡಬೇಕಿತ್ತು. ಆದರೆ, ಈ ವಿಷಯದಲ್ಲಿ ಅವೆಲ್ಲವೂ ವಿಫಲವಾಗಿವೆ” ಎಂದರು.

ಬಹುರೂಪಿಯ ಜಿ ಎನ್ ಮೋಹನ್, ಶ್ರೀಜಾ ವಿ ಎನ್, ಪರಾಗ್ ನ ಲಕ್ಷ್ಮಿ ಕರುಣಾಕರನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

10 ಕೃತಿ

ಬಿಡುಗಡೆಯಾದ ಕೃತಿಗಳು

ಈ ಪಿಕ್ ಯಾರ ಕ್ಲಿಕ್  ಬೆಲೆ: ₹160

ಸೀರೆ ಉಡುವ ರಾಕ್ ಸ್ಟಾರ್  ಬೆಲೆ: ₹160

ಲೇಡಿ ಟಾರ್ಜಾನ್ ಬೆಲೆ: ₹120

ಮರ ಏರಲಾಗದ ಗುಮ್ಮ  ಬೆಲೆ: ₹160

ಸುಂದರಬಾಗ್ ಬೀದಿಯಲ್ಲಿ ನಡೆಯಿತೊಂದು ವಿಸ್ಮಯ ಬೆಲೆ: ₹140 

ಮರಳಿ ಮನೆಗೆ  ಬೆಲೆ: ₹125

ಟಿಕೆಟ್ ಇಲ್ಲ, ಪ್ರಯಾಣ ನಿಲ್ಲಲ್ಲ ಬೆಲೆ: ₹125

ಸ್ನೇಹಗ್ರಾಮದ ಸಂಸತ್ತು ಬೆಲೆ: ₹150

ನಂದಿನಿ ಎಂಬ ಜಾಣೆ ಬೆಲೆ: ₹150

ಗೆದ್ದೇ ಬಿಟ್ಟೆ! ಬೆಲೆ: ₹125

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ: ಡಿ ಕೆ ಶಿವಕುಮಾರ್

"ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ...

ಖಾಸಗಿ ಶಾಲಾ ಶುಲ್ಕ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ

ಖಾಸಗಿ ಶಾಲೆಗಳು ನಿಗದಿಪಡಿಸಿರುವ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಕರಿಗೆ...

‘ಸೇಫ್‌ ಸಿಟಿ’ ಯೋಜನೆ | ಎಐ ಕ್ಯಾಮೆರಾಗಳ ಮೊರೆ ಹೋದ ಪೊಲೀಸ್ ಇಲಾಖೆ; 890 ಎಐ ಕ್ಯಾಮೆರಾ ಕಣ್ಗಾವಲು

ರಾಜಧಾನಿ ಬೆಂಗಳೂರಿನ ಸಂಚಾರ ವ್ಯವಸ್ಥೆಯ ಸುಧಾರಣೆಗಾಗಿ ನಗರ ಪೊಲೀಸರು ‘ಸೇಫ್‌ ಸಿಟಿ’...

ಮತ್ತೆ ಜೀವ ಪಡೆದ ಬೆಂಗಳೂರಿನ ಆನೆ ಪಾರ್ಕ್ ಕೆರೆ; ವೈವಿಧ್ಯಮಯ ಪಕ್ಷಿಗಳಿಗೆ ನೆಲೆ

ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ಆನೆ ಪಾರ್ಕ್‌ನಲ್ಲಿರುವ ಕೆರೆಯೂ ಮಳೆಯಿಲ್ಲದೇ, ಸಂಪೂರ್ಣವಾಗಿ ಬತ್ತಿ...