ಶಿಕ್ಷಕರ ನೇಮಕಾತಿಯಲ್ಲಿ ಅನ್ಯಾಯ: ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ತೀವ್ರ ಹೋರಾಟದ ಎಚ್ಚರಿಕೆ

Date:

ಕರ್ನಾಟಕದ ಶಿಕ್ಷಕರ ನೇಮಕಾತಿಯಲ್ಲಿ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿರ್ಲಕ್ಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಕೆಎಂಡಿಸಿ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಶಿಕ್ಷಕ ಅಭ್ಯರ್ಥಿಗಳು ಆಗಮಿಸಿ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

- Advertisement -

ಸಭೆಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಇಲಾಖೆಯ ಸಚಿವ ಯು ಟಿ ಖಾದರ್ ಮತ್ತು ವಿಧಾನ ಪರಿಷತ್ ಸದಸ್ಯೆ ಬಿಲ್ಕಿಸ್ ಬಾನು ಅವರು ಭಾಗವಹಿಸಿ, ಉರ್ದು ಹಾಗೂ ಮರಾಠಿ ಶಿಕ್ಷಕ ಅಭ್ಯರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಶಿಕ್ಷಕ ಅಭ್ಯರ್ಥಿಗಳ ಎಲ್ಲ ಸಮಸ್ಯೆಗಳನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪನವರ ಗಮನಕ್ಕೆ ತಂದು, ಅಗತ್ಯ ಚರ್ಚೆ ನಡೆಸಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್‌‌ ಸದಸ್ಯೆ ಬಿಲ್ಕಿಸ್ ಬಾನು ಹಾಗೂ ಅಬ್ದುಲ್ ಜಬ್ಬಾರ್ ಅವರು ಶಿಕ್ಷಕ ಅಭ್ಯರ್ಥಿಗಳ ಸಮಸ್ಯೆಯನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ, ಸರ್ಕಾರದ ಗಮನ ಸೆಳೆದರು.

ನಂತರ ಶಿಕ್ಷಕ ಅಭ್ಯರ್ಥಿಗಳ ನಿಯೋಗವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಾದ ಅಜಯ್ ಸಿಂಗ್, ಶಿವರಾಜ್ ತಂಗಡಗಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಇದನ್ನೂ ಓದಿದ್ದೀರಾ? ಈ ದಿನ ಇಂಪ್ಯಾಕ್ಟ್ | ಅಲೆಮಾರಿಗಳ ಮೂಲಸೌಕರ್ಯ ಪರಿಶೀಲನೆಗೆ ತಹಶೀಲ್ದಾರ್‌ ಸೂಚನೆ: ಅಧಿಕಾರಿಗಳ ಭೇಟಿ

ಹೋರಾಟವನ್ನು ಮತ್ತಷ್ಟು ಸಂಘಟಿತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಿಂದ ತಲಾ ಒಬ್ಬೊಬ್ಬರಂತೆ ಮಹಿಳೆ ಮತ್ತು ಪುರುಷ ಶಿಕ್ಷಕ ಅಭ್ಯರ್ಥಿಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿ ರಚಿಸಲಾಯಿತು. ಒಂದು ವೇಳೆ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರ ನ್ಯಾಯ ಒದಗಿಸದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಮಿತಿ ನಿರ್ಧರಿಸಿದೆ.

ಈ ಹೋರಾಟದಲ್ಲಿ ಹಲವು ಸಂಘಟನೆಗಳೊಂದಿಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್(SYM) ಕರ್ನಾಟಕದ ರಾಜ್ಯ ತಂಡ ಸಕ್ರಿಯವಾಗಿ ಭಾಗವಹಿಸಿ, ಶಿಕ್ಷಕ ಅಭ್ಯರ್ಥಿಗಳ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಸಹಕಾರ ನೀಡಿತು. ನಮ್ಮ ಹಕ್ಕುಗಳಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸಲಿದ್ದೇವೆ ಎಂದು ಭಾಷಾ ಅಲ್ಪಸಂಖ್ಯಾತ ಶಿಕ್ಷಕ ಅಭ್ಯರ್ಥಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...