ಜಿಲ್ಲಾ ಚುನಾವಣಾಧಿಕಾರಿಯಿಂದ ಮತ ಎಣಿಕೆ ಕೇಂದ್ರಗಳ ಪರಿಶೀಲನೆ

Date:

  • ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ: ತುಷಾರ್ ಗಿರಿನಾಥ್
  • ಮೇ 13ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ

ಬೆಂಗಳೂರು ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಮತ ಎಣಿಕೆ ಕಾರ್ಯವು 4 ನಾನಾ ಸ್ಥಳಗಳಲ್ಲಿ ನಡೆಯಲಿದೆ. ಈ ಪೈಕಿ ನಾಲ್ಕು ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ರವರು ತಿಳಿಸಿದರು.

ನಗರದಲ್ಲಿರುವ ಸೆಂ. ಜೋಸೆಫ್ ಇಂಡಿಯನ್ ಹೈಸ್ಕೂಲ್ ನಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್‌ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ. ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಅದರಲ್ಲಿ 2 ಟೇಬಲ್‌ಗಳನ್ನು ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿಡಲಾಗಿರುತ್ತದೆ” ಎಂದು ಹೇಳಿದರು.

ಬೆಂಗಳೂರು ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ನಗರ ಜಿಲ್ಲಾಧಿಕಾರಿಯಾದ ಡಾ. ದಯಾನಂದ್ ರವರು ಮಾತನಾಡಿ, “ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 13 ರಂದು ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ಟೇಬಲ್‌ಗಳಿಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆಯಿರುತ್ತದೆ. ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ನಮ್ಮ ಸಂವಿಧಾನ ನೀಡಿರುವ ಮತದಾನದ ಅಧಿಕಾರವನ್ನು ಮಹಿಳೆಯರು ಚಲಾಯಿಸಬೇಕು: ಶಾಲಿನಿ ರಜನೀಶ್

“ಮೇ 12 ರಂದು, ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಯಕರಿಗೆ ಮತ್ತೊಂದು ಬಾರಿ ತರಬೇತಿ ನೀಡಲಾಗುವುದು. ಎಲ್ಲ ಕಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿದ್ದು, ಮೂರು ಹಂತದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದರು.

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಯಲಹಂಕ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದರಿಂದ 2 ಬ್ಯಾಲೆಟ್ ಯುನಿಟ್‌ಗಳು ಬರಲಿವೆ. ಉಳಿದ ವಿಧಾನಸಭಾ ಕ್ಷೇತ್ರಗಳಿಗೆ 1 ಬ್ಯಾಲೆಟ್ ಯುನಿಟ್‌ಗಳು ಬರಲಿವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...

ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ....

ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಪ್ರಚಾರದ ವೇಳೆ ಓರ್ವ ಗನ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಾರ...