ಮೆಟ್ರೋ ನಿಲ್ದಾಣಗಳಲ್ಲಿ 8 ‘ನಂದಿನಿ’ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್‌ಸಿಎಲ್‌ಗೆ ಅರ್ಜಿ ಹಾಕಲು ಕೆಎಂಎಫ್‌ಗೆ ಸೂಚನೆ ನೀಡಿದ್ದು, 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾ‌ರ್‌ ತಿಳಿಸಿದರು.

ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಬುಧವಾರ ಮಾಧ್ಯಮಗಳು ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆ ತೆರೆಯುತ್ತಿರುವ ಬಗ್ಗೆ ಕೇಳಿದಾಗ, “ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್ ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮೂಲ್ ಅವರು ಜಾಗತಿಕ ಟೆಂಡರ್ ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆ” ಎಂದು ತಿಳಿಸಿದರು.

“ಇಂದು ಬೆಂಗಳೂರು ನಗರದಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಪಕ್ಷ ಸಂಘಟನೆ ವಿಚಾರ ಹಾಗೂ ಪಾಲಿಕೆ ಚುನಾವಣೆ ಸೇರಿದಂತೆ ಇಂದು ನಮ್ಮ ಪಕ್ಷದ ಶಾಸಕರ ಜತೆ ಚರ್ಚೆ ಮಾಡಿದ್ದೇನೆ. ಜಿಬಿಎಯಲ್ಲಿ ಎಷ್ಟು ಪಾಲಿಕೆ ರಚನೆ ಮಾಡಬೇಕು ಎನ್ನುವ ವಿಚಾರವಾಗಿ ಎಲ್ಲಾ ನಾಯಕರ ಜತೆ ಚರ್ಚೆ ಮಾಡಿದ್ದು, ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಬಾಕಿ ಇದೆ. ಅವರ ವಿಶ್ವಾಸ ಪಡೆದು ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.

Advertisements

“ಸ್ವಚ್ಛ ಬೆಂಗಳೂರು ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕಸವಿರುವ ಜಾಗದ ಫೋಟೋ ತೆಗೆದು ಅದನ್ನು ಈ ಸಂಖ್ಯೆಗೆ ರವಾನಿಸಿದರೆ ಒಂದು ವಾರದಲ್ಲಿ ಆ ಜಾಗದಲ್ಲಿರುವ ಕಸ ವಿಲೇವಾರಿ ಮಾಡಲಾಗುವುದು. ಇನ್ನು ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ ಶಾಸಕರು ತಮ್ಮ ಕ್ಷೇತ್ರಗಳ ವಾರ್ಡ್ ಗಳ ಬಗ್ಗೆ ಗಮನಹರಿಸಿ ರಸ್ತೆ ಕಾಮಗಾರಿಗೆ ಅನುದಾನವನ್ನು ನೀಡುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೆಟ್ರೋ ನಿಲ್ದಾಣಗಳಲ್ಲಿ ‘ಅಮುಲ್’ ಮಳಿಗೆ ಸ್ಥಾಪನೆ, ರಾಜ್ಯದಲ್ಲೇ ಅವಕಾಶ ಕೈ ಚೆಲ್ಲಿದ ‘ನಂದಿನಿ’

ಆಸ್ತಿ ಖಾತಾ ದಾಖಲೆ ವಿತರಣೆ ಆಂದೋಲನ

“ಇನ್ನು ಬೆಂಗಳೂರಿನಲ್ಲಿ ಆಸ್ತಿ ಖಾತಾ ದಾಖಲೆ ಆಂದೋಲನ ರೂಪಿಸಲಾಗಿದ್ದು, ಜುಲೈ ತಿಂಗಳಿನಿಂದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದ್ದು, 25 ಸಾವಿರ ಆಸ್ತಿಗಳ ಖಾತಾ ದಾಖಲೆಗಳು ಸಿದ್ಧಗೊಂಡಿದ್ದು, ಜುಲೈ ಒಂದರಿಂದ ಇಡೀ ತಿಂಗಳು ಈ ಆಸ್ತಿ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಮನೆಗಳು ಆಸ್ತಿಗಳಿದ್ದು, ಈ ಪೈಕಿ 5 ಲಕ್ಷ ಮಂದಿ ದಾಖಲೆ ಅಪ್ ಲೋಡ್ ಮಾಡಿದ್ದಾರೆ. ಇನ್ನು 20 ಲಕ್ಷ ಆಸ್ತಿಗಳ ದಾಖಲೆ ಬಾಕಿ ಇದೆ” ಎಂದು ತಿಳಿಸಿದರು.

“ಇ-ಖಾತಾ ವಿಚಾರವಾಗಿ ಅಭಿಯಾನ ಮಾಡಲಾಗುವುದೇ ಎಂದು ಕೇಳಿದಾಗ, “ಜುಲೈ 1 ರಿಂದ ಇ ಖಾತಾ ವಿಚಾರವಾಗಿ ಆಂದೋಲನ ಮಾಡಲಾಗುವುದು. ಆಮೂಲಕ ಖಾಸಗಿ ಆಸ್ತಿ ಮಾಲೀಕರು ಜಾಗೃತಿ ವಹಿಸಿ, ತಮ್ಮ ದಾಖಲೆಗಳನ್ನು ನೀಡಿ ಇ ಖಾತಾ ಮಾಡಿಸಿಕೊಳ್ಳಲು ಒಂದು ತಿಂಗಳ ಕಾಲ ಆಂದೋಲನ ಹಮ್ಮಿಕೊಳ್ಳಲಾಗುವುದು. ಈ ವಿಚಾರವಾಗಿ ಮನೆ ಮನೆ ಪ್ರಚಾರ, ಜಾಹೀರಾತು ಸೇರಿದಂತೆ ಪ್ರಚಾರ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X