ಅಂತರರಾಜ್ಯ ಡ್ರಗ್ ದಂಧೆ | ₹12 ಕೋಟಿ ಮೌಲ್ಯದ 1,500 ಕೆಜಿ ಗಾಂಜಾ ವಶ

Date:

Advertisements
  • ಅಸಲಿ ಚಾಸಿಯ ಕೆಳಗೆ ಒಂದು ಅಡಿ ಎತ್ತರದ ರಹಸ್ಯ ಕಂಪಾರ್ಟ್‌ಮೆಂಟ್‌ ನಿರ್ಮಾಣ
  • ನಕಲಿ ನೋಂದಣಿ ಫಲಕ ಅಳವಡಿಸಿಕೊಂಡು ಕೃತ್ಯ ಎಸಗುತ್ತಿದ್ದ ಆರೋಪಿಗಳು

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಅಂತರರಾಜ್ಯ ಗಾಂಜಾ ದಂಧೆ ಭೇದಿಸಿ ಎಂಬಿಎ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಬಂಧಿಸಿ, ಅವರಿಂದ ₹12 ಕೋಟಿ ಮೌಲ್ಯದ 1,500 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ರಾಜಸ್ಥಾನದ ಎಂಬಿಎ ಪದವೀಧರ ಚಂದ್ರಬಾನು ಬಿಷ್ಣೋಯ್, ಆಂಧ್ರಪ್ರದೇಶದ ಬಿಎ ಪದವೀಧರ ಲಕ್ಷ್ಮಿ ಮೋಹನ್ ದಾಸ್ ಹಾಗೂ ಸಲ್ಮಾನ್‌ ಪಾಶಾ ಬಂಧಿತರು.

ಚಾಮರಾಜಪೇಟೆ ಪೊಲೀಸರು ಗಾಂಜಾ ದಂಧೆ ನಡೆಯುತ್ತಿರುವ ಬಗ್ಗೆ ಸುಳಿವು ಪಡೆದು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ, ಪೊಲೀಸರಿಗೆ ಸಲ್ಮಾನ್‌ ಪಾಶಾ ಎಂಬುವವನು ಸಿಕ್ಕಿಬಿದ್ದಿದ್ದ. ಆತ ನೀಡಿದ ಸುಳಿವು ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಬಳಿಕ ಕಾರ್ಯಾಚರಣೆಗೆ ಇಳಿದ ಪೊಲೀಸರು ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಗುಡ್ಡಗಾಡು ಪ್ರದೇಶವು ದಂಧೆಯ ಮೂಲವೆಂದು ತಿಳಿದುಕೊಂಡರು.

Advertisements

ಆರೋಪಿಗಳು ಪೊಲೀಸರಿಗೆ ಯಾವುದೇ ರೀತಿಯ ಸುಳಿವು ಸಿಗಬಾರದು ಎಂದು ಗೂಡ್ಸ್‌ ವಾಹನದ ಚಾಸಿಯ ವಿನ್ಯಾಸವನ್ನು ಬದಲು ಮಾಡಿದ್ದರು. ಅಸಲಿ ಚಾಸಿಯ ಕೆಳಗೆ ಒಂದು ಅಡಿ ಎತ್ತರದ ರಹಸ್ಯ ಕಂಪಾರ್ಟ್‌ಮೆಂಟ್‌ ನಿರ್ಮಾಣ ಮಾಡಿದ್ದರು. ಕಂಪಾರ್ಟ್‌ಮೆಂಟ್‌ ಒಳಗಡೆ ಗಾಂಜಾ ತುಂಬಿಸಿದ ರಟ್ಟಿನ ಪೆಟ್ಟಿಗೆಗಳನ್ನು ಪ್ಯಾಕ್ ಮಾಡುತ್ತಿದ್ದರು. ಮೇಲೆ ಖಾಲಿ ಕಾಟನ್ ಬಾಕ್ಸ್‌ಗಳನ್ನು ಹಾಕಿಕೊಂಡು ಬರುತ್ತಿದ್ದರು. ಅಲ್ಲದೇ, ಆರೋಪಿಗಳು ನಕಲಿ ನೋಂದಣಿ ಫಲಕ ಅಳವಡಿಸಿಕೊಂಡು ಕೃತ್ಯ ಎಸಗುತ್ತಿದ್ದರು.

“ನಗರದಲ್ಲಿ ಗಾಜಾ ವಶಪಡಿಸಿಕೊಂಡ ಪ್ರಕರಣಗಳಲ್ಲಿ ಅತಿ ಹೆಚ್ಚು ಗಾಂಜಾ ಈ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾಗಿದೆ. 2020ರ ಸೆಪ್ಟೆಂಬರ್‌ನಲ್ಲಿ ಕಲಬುರಗಿಯಿಂದ 1,200 ಕೆಜಿ ಗಾಂಜಾವನ್ನು ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದರು. ಆ ಬಳಿಕದ ಪ್ರಕರಣಗಳಲ್ಲಿ ಈಗ ಹೆಚ್ಚಿನ ಗಾಂಜಾ ವಶಪಡಿಸಿಕೊಳ್ಳಲಾಗಿದೆ” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

“ಜೂನ್ 22 ರಂದು ಮೈಸೂರು ರಸ್ತೆಯ ಟೋಲ್‌ಗೇಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಲ್ಮಾನ್ ಪಾಶಾ (22) ಎಂಬಾತನನ್ನು ಬಂಧಿಸಿದಾಗ, ಈ ದಂಧೆ ಬೆಳಕಿಗೆ ಬಂದಿದೆ. ಪೊಲೀಸರು ಗಾಂಜಾ ಮೂಲದ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಸಿಸಿಬಿಯ ಅಧಿಕಾರಿಗಳು ಮೂರು ವಾರಗಳ ಕಾಲ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಂಗಾರು ಆರಂಭವಾಗುತ್ತಿದ್ದಂತೆ ಜ್ವರ ಲಸಿಕೆಗಳಿಗೆ ಬೇಡಿಕೆ ಹೆಚ್ಚಳ

ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಸಿಸಿಬಿ ಬಂಧಿಸಿದೆ. ಆರೋಪಿಗಳು ಅಂತರರಾಜ್ಯ ಜಾಲವನ್ನು ಹೊಂದಿದ್ದು, ವಿಶಾಖಪಟ್ಟಣಂ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶ ಮತ್ತು ಆಂಧ್ರಪ್ರದೇಶ, ಒಡಿಶಾ ಗಡಿಯ ಅರಣ್ಯ ಪ್ರದೇಶಗಳಲ್ಲಿ ಗಾಂಜಾವನ್ನು ಖರೀದಿಸುತ್ತಿದ್ದರು.

ಆರೋಪಿಗಳು ವ್ಯಾಪಕ ಜಾಲವನ್ನು ಹೊಂದಿದ್ದು, ಕೇರಳ, ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X