ಒಳಮೀಸಲಾತಿ ಹೋರಾಟ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನ; ಪ್ರತಿಭಟನಾಕಾರರ ಬಂಧನ

Date:

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ. ತ್ವರಿತವಾಗಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡಬೇಕೆಂದು ಒಳಮೀಸಲಾತಿ ಹೋರಾಟಗಾರರು ಒತ್ತಾಯಿಸಿದ್ದಾರೆ. ಸರ್ಕಾರವನ್ನು ಎಚ್ಚರಿಸಲು ಶುಕ್ರವಾರ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ, ಅವರ ಮನೆಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಮುಂದಾಗಿದ್ದರು. ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

- Advertisement -

“25-08-2025ರಂದು ಸರ್ಕಾರ ಹೊರಡಿಸಿದ ಆದೇಶದ ಒಳಸಂಚನ್ನು ವಿಫಲಗೊಳಿಸಲು ಒಳಮೀಸಲಾತಿ ಹೋರಾಟಗಾರರು ಪ್ರಯತ್ನಗಳು ನಡೆಸುತ್ತಿರುವಾಗಲೇ, ಸಮಾಜ ಕಲ್ಯಾಣ ಇಲಾಖೆ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ಮಣಿವಣ್ಣನ್, ಆಯುಕ್ತರಾದ ರಾಕೇಶ್ ಕುಮಾರ್, ಸಲಹೆಗಾರರಾದ ವೆಂಕಟಯ್ಯ ಅವರು ಸರ್ಕಾರದಿಂದ ಬಂದ ಕಡತಕ್ಕೆ ಒಪ್ಪಿಗೆ ಸೂಚಿಸಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ಹೋರಾಟಗಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಒಳಮೀಸಲಾತಿ ಆದೇಶವು ಕೇವಲ ನೇರ ನೇಮಕಾತಿಗೆ ಮಾತ್ರ ಅನ್ವಯಿಸುತ್ತದೆ, ಬಡ್ತಿ ಮತ್ತು ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸುವುದಿಲ್ಲವೆಂದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ನೇರ ನೇಮಕಾತಿ, ಬಡ್ತಿ ನೇಮಕಾತಿ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದ ಕರ್ನಾಟಕ ರಾಜ್ಯದ ಆದೇಶಗಳನ್ನು ಉಲ್ಲಂಘಿಸಿ ಸರ್ಕಾರವನ್ನು ದಾರಿತಪ್ಪಿಸುತ್ತಿದ್ದಾರೆ. ಸರ್ಕಾರ ಆದೇಶದ ಪ್ಯಾರಾ-2ನ್ನು ತಯಾರಿಸಿದವರೂ ಇವರೇ ಆಗಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...