ಅಂತಾರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ: ಬೆಳ್ಳಿ ಪದಕ ಗೆದ್ದ ಬೆಂಗಳೂರಿನ ಪರಿನಿಧಿ ಭಾರ್ಗವ ಮಂಡಲಂ

Date:

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ 2026ರ ಮೇ 29 ರಿಂದ 31ರವರೆಗೆ ನಡೆದ ಅಂತಾರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಬೆಂಗಳೂರಿನ ಕುವರಿ ಪರಿನಿಧಿ ಭಾರ್ಗವ ಮಂಡಲಂ 400 ಮೀಟರ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.

- Advertisement -

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ವಿಬ್‌ಗ್ಯೋರ್(VIBGYOR) ಹೈ ಸ್ಕೂಲ್‌ನ 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಪರಿನಿಧಿ, ತನ್ನ ಅದ್ಭುತ ಪ್ರದರ್ಶನದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಸರನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪರಿನಿಧಿ ಈಗಾಗಲೇ ಸ್ಕೇಟಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದ್ದು, 2025ರಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ರಿಲೇ ವಿಭಾಗದಲ್ಲಿ ಭಾಗವಹಿಸಿ ಬಂಗಾರದ ಪದಕವನ್ನು ಗೆದ್ದಿದ್ದರು. ಇದೀಗ 400 ಮೀಟರ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸುವ ಮೂಲಕ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಈ ವರ್ಷ ಜಿಲ್ಲಾಮಟ್ಟ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ವಿವಿಧ ಸ್ಕೇಟಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ತನ್ನದಾಗಿಸಿಕೊಂಡಿರುವ ಪರಿನಿಧಿ, 12 ವರ್ಷದೊಳಗಿನ(Under-12) ವಿಭಾಗದಲ್ಲಿ ಕರ್ನಾಟಕ ರಾಜ್ಯದ ಒಟ್ಟಾರೆ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನೂ ಗಳಿಸಿದ್ದಾರೆ.

ಸ್ಕೇಟಿಂಗ್‌ ಸ್ಪರ್ಧೆ

ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಪರಿಣಾಮ, ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದರು. ಅಲ್ಲಿ ಕೂಡ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದು ದೇಶದ ಗೌರವವನ್ನು ಹೆಚ್ಚಿಸಿದ್ದಾರೆ.

ಮಗಳ ಈ ಸಾಧನೆಯಿಂದ ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದ್ದು, “ಪರಿನಿಧಿಯ ಈ ಸಾಧನೆ ನಮಗೆ ಅಪಾರ ಹೆಮ್ಮೆ ಮತ್ತು ಸಂತೋಷವನ್ನು ತಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಲಿ ಎಂಬುದು ನಮ್ಮ ಆಶಯ” ಎಂದು ಪೋಷಕರಾದ ಸಾಯಿಶಿಲ್ಪಾ ಹಾಗೂ ಭಾರ್ಗವ ಮಂಡಲಂ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ? ಸಂಪತ್ತಿಗೆ ಸವಾಲ್ ನಾಟಕದ ಕವಿ: ಧುತ್ತರಗಿ ಎಂಬ ಅಮೂಲ್ಯ ಸಂಪತ್ತು

ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಪರಿನಿಧಿ ಭವಿಷ್ಯದಲ್ಲಿ ಮತ್ತಷ್ಟು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿ ದೇಶಕ್ಕೆ ಮತ್ತಷ್ಟು ಕೀರ್ತಿ ತರುವ ವಿಶ್ವಾಸ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...