ಐಪಿಎಲ್ | ಬೆಂಗಳೂರಿನಲ್ಲಿ ಆರ್‌ಸಿಬಿ – ಲಕ್ನೋ ಹಣಾಹಣಿ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

Date:

  • ಏ.10ರಂದು ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಐಪಿಎಲ್ ಪಂದ್ಯ
  • ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏ.10ರಂದು ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ಕಾರಣ ವಾಹನ ಸವಾರರ ಸುಗಮ ಸಂಚಾರಕ್ಕಾಗಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸ್ ಇಲಾಖೆ ಹೇಳಿದೆ.

ಏ. 10ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಮಾರ್ಗ ಬದಲಾವಣೆ ಇರಲಿದೆ. ನಂತರ ಎಂದಿನಂತೆ ಎಲ್ಲ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶವಿದೆ ಎಂದು ತಿಳಿಸಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ

  • ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  • ಕಸ್ತೂರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ,
  • ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‌ನ್ನು ನಿರ್ಬಂಧಿಸಲಾಗಿದೆ.

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು (ಸ್ಥಳ ಲಭ್ಯತೆಯ ಮೇಲೆ)

ಕಿಂಗ್ಸ್ ರಸ್ತೆ, ಬಿ.ಆರ್.ವಿ ಮೈದಾನ ಮೇಟ್ರೋ ಲೇನ್ ಕೆಳಗೆ, ಕಂಠೀರವ ಸ್ಟೇಡಿಯಂ ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆಜಿಐಡಿ ಬಿಲ್ಡಿಂಗ್ ಸಮೀಪ ವಾಹನಗಳನ್ನು ಪಾರ್ಕ್‌ ಮಾಡಲು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಒಂಟಿ ಮಹಿಳೆ ಹತ್ಯೆ

ಮಾರ್ಗದಲ್ಲಿ ಸಂಚಾರಕ್ಕೆ ನಿರ್ಬಂಧ

ಎಂಜಿ ರೋಡ್, ಕ್ವೀನ್ಸ್ ರೋಡ್, ಎಂಜಿ ರೋಡ್​ನಿಂದ ಕಬ್ಬನ್ ರೋಡ್, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರೋಡ್, ಕಬ್ಬನ್ ರೋಡ್, ಸೆಂಟ್ ಮಾರ್ಕ್ಸ್ ರೋಡ್, ಮ್ಯೂಸಿಯಂ ರೋಡ್, ಕಸ್ತೂರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರೋಡ್, ವಿಠಲ್ ಮಲ್ಯ ರೋಡ್, ನೃತತುಂಗ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಸಿದು ಬಿದ್ದ ಶಾಲಾ ಕಟ್ಟಡ; ಸಮಗ್ರ ತನಿಖೆ ನಡೆಯಲಿ ಎಂದ ಎಸ್‌ಐಒ

ಕಳೆದ ಎರಡು ದಿನಗಳ ಹಿಂದೆ ಶಿವಾಜಿನಗರದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಬಿಬಿಎಂಪಿ | ಸಾರ್ವಜನಿಕ ಶೌಚಾಲಯ ನಿರ್ಮಿಸಲು ಸ್ಥಳಗಳ ಪಟ್ಟಿ ಸಿದ್ಧಪಡಿಸಿ: ತುಷಾರ್ ಗಿರಿನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು....

ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಮುದುವೆಯಾಗುವುದಾಗಿ ನಂಬಿಸಿ 7 ತಿಂಗಳ ಗರ್ಭಿಣಿಯಾದ...