ಬೆಂಗಳೂರು ವಿವಿ ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಹೈಕೋರ್ಟ್‌ನಿಂದ ವಿವಿಗೆ ನೋಟಿಸ್ ಜಾರಿ

Date:

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿವಿಗೆ ನೋಟಿಸ್‌ ಜಾರಿ ಮಾಡಿದೆ.

ಅಧಿಸೂಚಿಸಲಾದ ಕಾಲೇಜುಗಳಲ್ಲಿ ಜೂನ್‌ 16, 2023ರಂದು ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಯಾಗಲಿ ಅಥವಾ ಪ್ರವೇಶ ಪತ್ರವನ್ನು ಪರಿಶೀಲಿಸದೆ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಕೆಲವು ವಿದ್ಯಾರ್ಥಿಗಳು ಮೊಬೈಲ್ ಗಳನ್ನು ತೆಗೆದುಕೊಂಡು ಹೋಗಿದ್ದು, ಮೊಬೈಲ್ ಮೂಲಕ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿಕೊಂಡು ಬರೆದಿದ್ದರು. ಹಾಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿಗಳು, ಪಿಹೆಚ್‌ಡಿ ಪಡೆದಿರುವ ವಿದ್ಯಾರ್ಥಿಗಳು ಹಾಗೂ ಕೆಲವು ಸ್ವಯಂ ಘೋಷಿತ ನಾಯಕರು ಪ್ರವೇಶ ಪರೀಕ್ಷೆಯ ಕೇಂದ್ರಗಳಲ್ಲಿ ಅನಧಿಕೃತವಾಗಿ ಪ್ರವೇಶಿಸಿ ಪರೀಕ್ಷಾ ಅಕ್ರಮ ನಡೆಯಲು ಸಹಾಯ ಮಾಡಿದ್ದರು ಎಂದು ಅರ್ಜಿದಾರರಾದ ಎಸ್‌ ಆದಿ ಮಂಜುನಾಥ್‌ ಅವರು ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಪರೀಕ್ಷೆಗೆ ಸಂಬಂಧಿಸಿದಂತೆ ವಿವಿ ಕುಲಪತಿ, ಮೌಲ್ಯಮಾಪನ ಕುಲಸಚಿವರು, ಪಿಹೆಚ್‌ಡಿ ಪರೀಕ್ಷೆಯ ವಿಶೇಷ ಅಧಿಕಾರಿಗಳಿಗೆ ಪರೀಕ್ಷೆ ರದ್ದುಗೊಳಿಸುವಂತೆ ಅರ್ಜಿದಾರರ ನೇತೃತ್ವದಲ್ಲಿ ವಿದ್ಯಾರ್ಥಿಗಳು ದೂರು ಸಲ್ಲಿಸಿದ್ದರು. ಆದರೆ ವಿವಿಯು ದೂರಿನ ಯಾವುದೇ ಮನವಿ ಪರಿಗಣಿಸದೆ ತರಾತುರಿಯಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು. ತಾತ್ಕಾಲಿಕ ಕೀ ಉತ್ತರಗಳಲ್ಲಿ ಹಲವು ಲೋಪದೋಷಗಳಿರುವ ಕಾರಣ ಪ್ರಕಟಿಸಿದ ಕೀ ಉತ್ತರಗಳನ್ನು ಸರಿಪಡಿಸುವ ನೆಪದಲ್ಲಿ ಮತ್ತೊಂದು ಬಾರಿ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಆಕ್ಷೇಪಣೆಗಳಿಗೆ ಕೇವಲ ಒಂದೇ ದಿನ ಅವಕಾಶವನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ತನಿಖೆ ಮತ್ತು ಮರು ಪರೀಕ್ಷೆ ನಡೆಸುವಂತೆ ಅರ್ಜಿದಾರರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಅಶೋಕ್‌ ಎಸ್‌ ಕಿನಗಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಮೌಲ್ಯಮಾಪನ ಕುಲಸಚಿವರು, ವಿಶೇಷ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿ ಒಂದು ವಾರದೊಳಗೆ ಉತ್ತರವನ್ನು ನೀಡಬೇಕೆಂದು ಆದೇಶಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ಬಿಡಲ್ಲ, ತಿದ್ದುಪಡಿಗೆ ಒಪ್ಪದಿದ್ದರೆ ಹೋರಾಟ: ಆರ್‌ ಅಶೋ‌ಕ್‌

ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು. ಈ ನಗರ ಕನ್ನಡಿಗರಿಗಾಗಿಯೇ ಇರಬೇಕು...

ಬೆಂಗಳೂರು | ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕಾರ್ಯ ನಿಷೇಧಕ್ಕೆ ಸಾಹಿತಿ, ಪ್ರಗತಿಪರರ ಆಗ್ರಹ

ಎಲ್ಲ ಸರ್ಕಾರಿ ಕಚೇರಿ ಮತ್ತು ಶಾಲೆ, ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ಧಾರ್ಮಿಕ ಕಾರ್ಯ,...

ರಾಯಚೂರು | ಗಣೇಶ ವಿಸರ್ಜನೆ ವೇಳೆ ಗಲಾಟೆ: ಓರ್ವ ಸಾವು

ಹಳೆ ದ್ವೇಷದ ಹಿನ್ನೆಲೆ ಇಟ್ಟುಕೊಂಡು ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು,...

ಗದಗ | ಮೌಢ್ಯತೆ ಆಚರಿಸುವ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ: ಡಾ. ಜಯದೇವಿ ಗಾಯಕವಾಡ

ಯಾವ ದೇಶದಲ್ಲಿ ಮೌಢ್ಯ ಸಂಪ್ರದಾಯಗಳ ಆಚರಣೆ ಇರುತ್ತವೆಯೋ, ಅಂತಹ ದೇಶಗಳ ಅಭಿವೃದ್ಧಿ...