ಬೆಂಗಳೂರಿನಲ್ಲಿ 500 ಕೋಟಿ ರೂ. ಅರಣ್ಯ ಭೂಮಿ ಒತ್ತುವರಿ ತೆರವು ಜಾಗದಲ್ಲಿ ವೃಕ್ಷೋಧ್ಯಾನ: ಈಶ್ವರ್ ಖಂಡ್ರೆ

Date:

Advertisements

ರಾಜ್ಯ ರಾಜಧಾನಿಯಲ್ಲಿ ಒತ್ತುವರಿ ತೆರವು ಮಾಡಿಸಲಾದ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬುಧವಾರ ಭೂಮಿಪೂಜೆ ನೆರವೇರಿಸಿದರು.

ಇಲಾಖೆ ಮರುವಶ ಪಡಿಸಿಕೊಂಡಿರುವ 17 ಎಕರೆ ಜಮೀನಿನ ಖುದ್ದು ಪರಿಶೀಲನೆಗೆ ಆಗಮಿಸಿದ್ದ ಸಚಿವರು, ಗಿಡ ನೆಡುವ ಮೂಲಕ ವೃಕ್ಷೋಧ್ಯಾನದಲ್ಲಿ 1800 ಸ್ಥಳೀಯ ಪ್ರಭೇದದ ಸಸಿ ನೆಡುವ ಕಾರ್ಯಕ್ರಮಕ್ಕೆ ಹಾಗೂ ಜಮೀನಿನ ಸುತ್ತಲೂ ತಂತಿ ಬೇಲಿ ಹಾಕುವ ಕಾಮಗಾರಿಗೂ ಚಾಲನೆ ನೀಡಿದರು.

“ಬೆಂಗಳೂರು ನಗರ ಬೃಹದಾಕಾರವಾಗಿ ಬೆಳೆಯುತ್ತಿದ್ದು, ನಗರ ಪ್ರದೇಶದಲ್ಲಿ ಉಸಿರಾಡಲು ಹಸಿರು ಪ್ರದೇಶ (ಲಂಗ್ ಸ್ಪೇಸ್) ಇರಬೇಕು. ಐ.ಟಿ., ಬಿ.ಟಿ. ಕಂಪನಿಗಳಿರುವ ಈ ಪ್ರದೇಶ ಕಾಂಕ್ರೀಟ್ ಕಾಡಿನಂತಿದ್ದು, 17 ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ವೃಕ್ಷೋಧ್ಯಾನ ಬೆಳಗಿನ ವಾಯು ವಿಹಾರಕ್ಕೆ ಬರುವವರಿಗೆ ಮತ್ತು ವಾರಾಂತ್ಯದಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು ಮಾಹಿತಿ ಮತ್ತು ಮನರಂಜನೆಯ ತಾಣವಾಗುವಂತೆ ಅಭಿವೃದ್ಧಿ ಪಡಿಸಲಾಗುವುದು” ಎಂದರು.

Advertisements

“ಇಲ್ಲಿ ಪಕ್ಷಿಲೋಕ ನಿರ್ಮಿಸಲಾಗುವುದು. ಎತ್ತರದ ಬೃಹತ್ ಪಂಜರದೊಳಗೆ ಮರಗಳನ್ನು ಬೆಳೆಸಿ ಅದರಲ್ಲಿ ವಿವಿಧ ಬಗೆಯ ಪಕ್ಷಿಗಳನ್ನು ಬಿಡಲಾಗುವುದು. ಈ ಹಕ್ಕಿಗಳ ಕಲರವ, ಸ್ವಚ್ಛಂದ ಹಾರಾಟವನ್ನು ಸ್ಥಳೀಯರಷ್ಟೇ ಅಲ್ಲ, ಪ್ರವಾಸಿಗರೂ ಕಣ್ತುಂಬಿಕೊಳ್ಳುವಂತೆ ಮಾಡಲಾಗುವುದು” ಎಂದು ಈಶ್ವರ ಖಂಡ್ರೆ ತಿಳಿಸಿದರು.

500 ಕೋಟಿ ರೂ. ಬೆಲೆಯ ಭೂಮಿ ಮರು ವಶ

“ಬೆಂಗಳೂರು ಹೊರವಲಯ ಕೆ.ಆರ್.ಪುರಂ ಹೋಬಳಿಯ ಕೊತ್ತನೂರಿನ ಸರ್ವೆ ನಂಬರ್ 47ರಲ್ಲಿನ 17 ಎಕರೆ 34 ಗುಂಟೆ ಜಮೀನನ್ನು ಬೆಂಗಳೂರು ನಗರ ಅಂದಿನ ಜಿಲ್ಲಾಧಿಕಾರಿಗಳು 2006ರ ಜೂನ್ ನಲ್ಲಿ ಅರಣ್ಯ ಎಂದು ಘೋಷಿಸಿದ್ದರು. ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ಈ ಆದೇಶ ಪ್ರಶ್ನಿಸಲಾಗಿತ್ತು, ನ್ಯಾಯಾಲಯ ಅರಣ್ಯ ಎಂದು ಘೋಷಿಸಲಾಗಿದ್ದ ಜಿಲ್ಲಾಧಿಕಾರಿಯವರ ಆದೇಶ ಎತ್ತಿ ಹಿಡಿದಿತ್ತು. ಆದರೆ, ಇದಾದ 17 ವರ್ಷಗಳ ತರುವಾಯ 2023ರ ಜನವರಿಯಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ಅರಣ್ಯ ಪ್ರದೇಶ ಎಂದು ಇಂಡೀಕರಣ ಆಗಿದ್ದ ಭೂಮಿಯನ್ನು ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದರು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X