ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ ಕಷ್ಟವಾಗಿದೆ. ಇವೆಲ್ಲವುದರ ನಡುವೆ ಹಲವು ಐಟಿ ಸಂಸ್ಥೆಗಳು ವರ್ಕ್ ಫ್ರಮ್ ಹೋಮ್ ಘೋಷಿಸಿದೆ.
ಈಗಾಗಲೇ ಮೇ 21ರ ಸುಮಾರಿಗೆ ಕರ್ನಾಟಕ ಕರಾವಳಿಯ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಮೇಲ್ಪಟ್ಟದ ವಾಯು ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ. ಇದರ ಪ್ರಭಾವದಿಂದಾಗಿ ಮೇ 22ರ ಸುಮಾರಿಗೆ ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳಲಿದೆ. ನಂತರ ಅದು ಉತ್ತರದ ಕಡೆಗೆ ಚಲಿಸುವ ಮತ್ತು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಪರಿಣಾಮವಾಗಿ ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಇದನ್ನು ಓದಿದ್ದೀರಾ? ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ
ಮಳೆ ಕಾರಣ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಲ್ಲೇ ಕೆಲಸ ಮಾಡಲು ಐಟಿ ಸಂಸ್ಥೆಗಳು ಸೂಚಿಸಿದೆ. ಕಚೇರಿಗೆ ಬರಲು ಸಾಧ್ಯವಾದರೆ ಮಾತ್ರ ಬರುವಂತೆ, ಇಲ್ಲವಾದರೆ ವರ್ಕ್ ಫ್ರಮ್ ಹೋಮ್ ಮಾಡುವಂತೆ ಸೂಚಿಸಿದೆ ಎಂದು ವರದಿಯಾಗಿದೆ.
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) May 20, 2025
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, IMD ಯಿಂದ #ರೆಡ್ಅಲರ್ಟ್ ನೀಡಲಾಗಿದೆ. ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. pic.twitter.com/wuXiuBAjP9
ದಕ್ಷಿಣ ಕೊಂಕಣ, ಗೋವಾ ಕರಾವಳಿಗಳು, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಪ್ರದೇಶಗಳ ಕರಾವಳಿಗಳು, ದಕ್ಷಿಣ ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗಳು, ನೈಋತ್ಯ ಬಂಗಾಳ ಕೊಲ್ಲಿಯ ಉತ್ತರ ಭಾಗಗಳು ಮತ್ತು ಪಕ್ಷದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಪಕ್ಕದ ಪ್ರದೇಶಗಳಲ್ಲಿ ಗಂಟೆಗೆ 35 ಕಿ.ಮೀ. ನಿಂದ 45 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಹವಾಮಾನ ಇಲಾಖೆ ಇಂದು ಮತ್ತೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನುಳಿದ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
