ಭಾರೀ ಮಳೆ | ಬೆಂಗಳೂರು ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್, ರೆಡ್‌ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ ಕಷ್ಟವಾಗಿದೆ. ಇವೆಲ್ಲವುದರ ನಡುವೆ ಹಲವು ಐಟಿ ಸಂಸ್ಥೆಗಳು ವರ್ಕ್ ಫ್ರಮ್ ಹೋಮ್ ಘೋಷಿಸಿದೆ.

- Advertisement -

ಈಗಾಗಲೇ ಮೇ 21ರ ಸುಮಾರಿಗೆ ಕರ್ನಾಟಕ ಕರಾವಳಿಯ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಮೇಲ್ಪಟ್ಟದ ವಾಯು ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ. ಇದರ ಪ್ರಭಾವದಿಂದಾಗಿ ಮೇ 22ರ ಸುಮಾರಿಗೆ ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳಲಿದೆ. ನಂತರ ಅದು ಉತ್ತರದ ಕಡೆಗೆ ಚಲಿಸುವ ಮತ್ತು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಪರಿಣಾಮವಾಗಿ ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ

ಮಳೆ ಕಾರಣ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಲ್ಲೇ ಕೆಲಸ ಮಾಡಲು ಐಟಿ ಸಂಸ್ಥೆಗಳು ಸೂಚಿಸಿದೆ. ಕಚೇರಿಗೆ ಬರಲು ಸಾಧ್ಯವಾದರೆ ಮಾತ್ರ ಬರುವಂತೆ, ಇಲ್ಲವಾದರೆ ವರ್ಕ್‌ ಫ್ರಮ್ ಹೋಮ್ ಮಾಡುವಂತೆ ಸೂಚಿಸಿದೆ ಎಂದು ವರದಿಯಾಗಿದೆ.

ದಕ್ಷಿಣ ಕೊಂಕಣ, ಗೋವಾ ಕರಾವಳಿಗಳು, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಪ್ರದೇಶಗಳ ಕರಾವಳಿಗಳು, ದಕ್ಷಿಣ ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗಳು, ನೈಋತ್ಯ ಬಂಗಾಳ ಕೊಲ್ಲಿಯ ಉತ್ತರ ಭಾಗಗಳು ಮತ್ತು ಪಕ್ಷದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಪಕ್ಕದ ಪ್ರದೇಶಗಳಲ್ಲಿ ಗಂಟೆಗೆ 35 ಕಿ.ಮೀ. ನಿಂದ 45 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದು ಮತ್ತು ನಾಳೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಹವಾಮಾನ ಇಲಾಖೆ ಇಂದು ಮತ್ತೆ ನಾಳೆ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನುಳಿದ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...