ಹೋಟೆಲಿನ ಕಾಫಿ-ಟೀ, ತಿಂಡಿ-ತಿನಿಸುಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯ: ಪಿ ಸಿ ರಾವ್

Date:

  • ವಿದ್ಯುತ್ ದರ ಏರಿಕೆಯಿಂದ ಎಲ್ಲ ಉದ್ಯಮಿಗಳಿಗೂ ಶಾಕ್
  • ಹಾಲು ಮತ್ತು ಅಕ್ಕಿಯ ಬೆಲೆ ದುಬಾರಿಯಾಗುವ ಸಂಭವ

ವಿದ್ಯುತ್ ದರ ಏರಿಕೆಯಿಂದ ಉದ್ಯಮಗಳಿಗೆ ತೊಂದರೆಯಾಗಿದ್ದು, ಹೋಟೆಲ್ ನಡೆಸುವುದು ತುಂಬಾ ಕಷ್ಟಕರವಾಗಿದೆ. ಮುಂದಿನ ದಿನಗಳಲ್ಲಿ ದೈನಂದಿನ ಬಳಕೆಯ ವಸ್ತುಗಳ ಬೆಲೆಗಳನ್ನು ಹತೋಟಿಗೆ ತರದಿದ್ದರೆ ಹೋಟೆಲಿನ ಕಾಫಿ, ತಿಂಡಿ-ತಿನಿಸುಗಳ ಬೆಲೆಗಳನ್ನು ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಪಿ ಸಿ ರಾವ್ ಹೇಳಿದ್ದಾರೆ.

“ವಿದ್ಯುತ್ ದರ ಏರಿಕೆಯಿಂದ ಎಲ್ಲ ಉದ್ಯಮಿಗಳಿಗೂ ಹಾಗೂ ಜನಸಾಮಾನ್ಯರಿಗೂ ಬಹುದೊಡ್ಡ ಶಾಕ್ ಕೊಟ್ಟಿದೆ. ಇತ್ತೀಚೆಗೆ ಹೋಟೆಲ್ ಉದ್ಯಮಕ್ಕೆ ಅಗತ್ಯವಾಗಿರುವ ಕಾಫಿಪುಡಿ, ಬೇಳೆಕಾಳು, ಮೆಣಸಿನಕಾಯಿ, ತರಕಾರಿ ಬೆಲೆ ಗಗನಕ್ಕೇರಿದೆ. ಜತೆಗೆ ಹಾಲು ಮತ್ತು ಅಕ್ಕಿಯ ಬೆಲೆ ದುಬಾರಿಯಾಗುವ ಸಂಭವವಿದೆ” ಎಂದರು.

“ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಕ್ಷಣ ಸ್ಪಂದಿಸಿ ಸಮಂಜಸವಾದ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ಒಂದು ವಾರದಿಂದ ನಗರದ ಕೆಲವು ಹೋಟೆಲ್‌ಗಳಲ್ಲಿ ತಿಂಡಿ ಮತ್ತು ಕಾಫೀ, ಟೀ ದರ ಏರಿಕೆಯಾಗಿದೆ. ಈ ಹಿಂದೆ ಇದ್ದ ₹50 ಇದ್ದ ಮಸಾಲೆ ದೋಸೆ ದರ ಇದೀಗ ₹60 ರಿಂದ 70 ಆಗಿದೆ. ಟೀ, ಕಾಫಿ, ಲೆಮನ್ ಟೀ ಮೊದಲಿಗೆ ₹10 ರಿಂದ ₹12 ಇತ್ತು. ಈಗ ₹15 ರಿಂದ ₹20 ಏರಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬಸ್ ನಿಲುಗಡೆಗಾಗಿ ನಿರ್ವಾಹಕ ಮತ್ತು ಚಾಲಕರ ಮೇಲೆ ಮಹಿಳೆಯಿಂದ ಹಲ್ಲೆ, ದೂರು ದಾಖಲು

ನೂತನ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ್​ ಅವರು ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ಸಮ್ಮತಿ ನೀಡಿದರೆ, ಹಾಲಿನ ಉತ್ಪನ್ನಗಳ ಜತೆಗೆ ಹೋಟೆಲ್ ತಿಂಡಿ ದರ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್ಐಆರ್ ದಾಖಲು

ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್...

ಬೆಂಗಳೂರು | ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್; ತಪ್ಪಿದ ಅನಾಹುತ

ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ...

ಬೆಂಗಳೂರು | ಈ ರಸ್ತೆಯಲ್ಲಿ 4 ದಿನ ಸಂಚಾರ ನಿರ್ಬಂಧ; ಪರ್ಯಾಯ ಮಾರ್ಗ ಪ್ರಕಟ

ಬೆಂಗಳೂರಿನ ವೈಟ್​ ಫೀಲ್ಡ್​​ನ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್‌ವರೆಗಿನ ರಸ್ತೆಯಲ್ಲಿ...

ಬೆಂಗಳೂರು | ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಪಶ್ಚಿಮ ಬಂಗಾಳ‌ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ...