‘ಎಲ್ಲರ ಬೆಂಗಳೂರು’ ಆಗಲು ಸವಾಲು, ಸಾಧ್ಯತೆಗಳೇನು? ಆ.2ರಂದು ಜಾಗೃತ ಕರ್ನಾಟಕದಿಂದ ಕಾನ್‌ಕ್ಲೇವ್‌

Date:

ಬೆಂಗಳೂರು ನಗರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರದಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಒಟ್ಟಿಗೆ ಬದುಕು ಕಟ್ಟಿಕೊಳ್ಳುತ್ತಿವೆ. ಆದರೆ, ನಗರದಲ್ಲಿರುವ ಎಲ್ಲರಿಗೂ ಬೆಂಗಳೂರು ನಮ್ಮದು ಅನ್ನಿಸಬಹುದೇ? ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳೇನು- ಅವುಗಳ ಪರಿಹಾರಕ್ಕೆ ಇರುವ ಸಾಧ್ಯತೆಗಳು ಯಾವುದು ಎಂಬುದನ್ನು ಚರ್ಚಿಸಲು ‘ಜಾಗೃತ ಕರ್ನಾಟಕ’ ಸಂಘಟನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಾಗೃತ ಕರ್ನಾಟಕದ ಮುಖಂಡ ರಾಜಶೇಖರ್ ಅಕ್ಕಿ, “‘ಎಲ್ಲರಿಗೂ ಇದು ನಮ್ಮ ಬೆಂಗಳೂರು ಆಗಲು ಇರುವ ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯ ಕುರಿತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ಆಗಸ್ಟ್‌ 2ರ ಶನಿವಾರ ಮಧ್ಯಾಹ್ನ 2.30ರಿಂದ 6.30ವರೆಗೆ, ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆ, Institute of Agricultural Technologies (IAT)ಯಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಬೆಂಗಳೂರಿನಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಎದುರಿಸುತ್ತಿರುವ ನಿಜವಾದ ಸಮಸ್ಯೆಗಳೇನು? ಇಲ್ಲಿ ಬದುಕು ಕಟ್ಟಿಕೊಳ್ಳಲು ಯಾರಿಗೆ ಎಷ್ಟು ಸಾಧ್ಯವಾಗುತ್ತಿದೆ? ಬೆಂಗಳೂರು ಒಂದು ಸಮುದಾಯವಾಗಿದೆಯೇ? ಈ ನಗರಕ್ಕೊಂದು ವ್ಯಕ್ತಿತ್ವವಿದೆಯೇ? ಇಲ್ಲಿ ಖಿನ್ನತೆ, ಅನಾಥಭಾವ, ಅನ್ಯ ಭಾವಗಳು ಹೆಚ್ಚಾಗುತ್ತಿವೆಯೇ, ಕಡಿಮೆಯಾಗುತ್ತಿವೆಯೇ? ಮುಂತಾದ ಮೂಲಭೂತ ಸಮಸ್ಯೆಗಳು. ಸವಾಲುಗಳು ಹಾಗೂ ಸಂಭಾವ್ಯ ಉತ್ತರಗಳ ಬಗ್ಗೆ ಗಹನವಾದ ಚರ್ಚೆಯನ್ನು ನಡೆಸಲಿದ್ದೇವೆ” ಎಂದು ವಿವರಿಸಿದ್ದಾರೆ.

ಬೆಂಗಳೂರು121

“ಕಾರ್ಯಕ್ರಮದಲ್ಲಿ ಮೂರು ಗೋಷ್ಠಿಗಳು ನಡೆಯಲಿದ್ದು, ಮೊದಲ ಗೋಷ್ಠಿಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ವಿವಿಧ ಸಮುದಾಯಗಳ ಕುರಿತ ಚರ್ಚೆ ನಡೆಯಲಿದೆ. ಗೋಷ್ಠಿಯಲ್ಲಿ ವಕೀಲ ವಿನಯ್ ಶ್ರೀನಿವಾಸ್, ಸ್ಲಂ ಜನಾಂದೋಲನ ಕರ್ನಾಟಕದ ನರಸಿಂಹಮೂರ್ತಿ, ಒಳಮೀಸಲಾತಿ ಹೋರಾಟಗಾರ ಬಸವರಾಜ ಕೌತಾಳ, ವಿಷನ್ ಟ್ರಸ್ಟ್‌ನ ಶಾನ್ ಅಹದ್ ವಿಷಯ ಮಂಡನೆ ಮಾಡಲಿದ್ದಾರೆ” ಎಂದು ಅಕ್ಕಿ ತಿಳಿಸಿದ್ದಾರೆ.

“2ನೇ ಗೋಷ್ಠಿಯಲ್ಲಿ ‘ಬೆಂಗಳೂರಿನ ಮಾನಸಿಕ ಆರೋಗ್ಯ, ಸವಾಲುಗಳು ಮತ್ತು ಸಾಧ್ಯತೆಗಳು’ ವಿಷಯದ ಮೇಲೆ ಮಾನಸಿಕ ಆರೋಗ್ಯ ತಜ್ಞರಾದ ಪಾದಸ್ ಶರ್ಮ ವಿಚಾರ ಮಂಡನೆ ಮಾಡಲಿದ್ದಾರೆ. ‘ನಗರ ಯೋಜನೆ ಮತ್ತು ಆಡಳಿತದ ತಜ್ಞರು ನಗರ ಯೋಜನೆ ಹೇಗಿರಬಹುದು’ ಎಂಬುದನ್ನು ಚಂಪಕ ರಾಜಗೋಪಾಲ್ ಮಂಡಿಸಲಿದ್ದಾರೆ. ‘ಎಲ್ಲರಿಗೂ ಆಗುವ ಅಭಿವೃದ್ಧಿ’ ವಿಷಯದ ಮೇಲೆ ನಗರ ನೀತಿ ತಜ್ಞರು ಮತ್ತು ಸಂಶೋಧಕರಾದ ಮ್ಯಾಥ್ ಇಡಿಕುಲ ಮಾತನಾಡಲಿದ್ದಾರೆ” ಎಂದು ವಿವರಿಸಿದ್ದಾರೆ.

“ಮೂರನೇ ಗೋಷ್ಠಿಯಲ್ಲಿ ‘ರಾಜಕೀಯ ಮತ್ತು ಸಾಮಾಜಿಕ ಸಂಘಟಿಸುವಿಕೆ’ ಕುರಿತ ಚರ್ಚೆಗಳು ನಡೆಯಲಿವೆ. ಈ ಸಂವಾದದಲ್ಲಿ ಜಯನಗರ ಮಾಜಿ ಶಾಸಕಿ ಸೌಮ್ಯ ರೆಡ್ಡಿ, ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕುಸುಮ ಹನುಮಂತರಾಯಪ್ಪ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...