ಜಯದೇವ ಆಸ್ಪತ್ರೆ ನಿರ್ದೇಶಕ ಅವಧಿ ಅಂತ್ಯ: ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದ ಡಾ.ಮಂಜುನಾಥ್

Date:

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಮಂಜುನಾಥ್ ಅವರನ್ನು ಮುಂದುವರೆಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದ್ದು, ಜನವರಿ 31ಕ್ಕೆ ಮಂಜುನಾಥ್ ಅವರ ಅವಧಿ ಮುಕ್ತಾಯವಾಗಲಿದೆ.

ಈ ಬಗ್ಗೆ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಯದೇವ ಆಸ್ಪತ್ರೆ ನಿರ್ದೇಶಕ ಮಂಜುನಾಥ್ ಅವರು, “16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈ ತಿಂಗಳು ನನ್ನ ಅವಧಿ ಮುಕ್ತಾಯವಾಗಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವುದು ನನ್ನ ಮೊದಲ ಆಯ್ಕೆ, ರಾಜಕೀಯದಲ್ಲಿ ಆಸಕ್ತಿಯಿಲ್ಲ ಹಾಗೂ ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ” ಎಂದು ಹೇಳಿದ್ದಾರೆ.

“ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ನನ್ನ ಮುಂದುವರೆಸುವ ಅಂತಿಮ ತೀರ್ಮಾನ ಸರ್ಕಾರ ಕೈಗೊಳ್ಳಲಿದೆ. ನನ್ನನ್ನು ಮುಂದುವರೆಸುವ ಬಗ್ಗೆ ನನ್ನ ಅಭಿಪ್ರಾಯ ಪಡೆದಿಲ್ಲ. ನನ್ನ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಶೇ.500 ರಷ್ಟು ಅಭಿವೃದ್ಧಿ ಕೆಲಸಗಳು ಆಗಿದೆ. 300 ಹಾಸಿಗೆ ಇದ್ದ ಆಸ್ಪತ್ರೆ ಇದೀಗ 2,000ಕ್ಕೆ ಏರಿಕೆ ಆಗಿದೆ. ಅಲ್ಲದೇ, ವಿಶ್ವಭೂಪಟದಲ್ಲಿ ಜಯದೇವ ಆಸ್ಪತ್ರೆಗೆ ಮಾನ್ಯತೆ ಸಿಕ್ಕಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು 400ಮೀಟರ್ ದೂರಕ್ಕೆ ಎಳೆದೊಯ್ದ ಕಾರು ಚಾಲಕ

“ನನ್ನ ಆಸ್ಪತ್ರೆಯ ಸಿಬ್ಬಂದಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಜನ ಸಾಮಾನ್ಯರು ಗೌರವಯುತವಾಗಿ ನಿವೃತ್ತಿ ಕೊಡುತ್ತಿದ್ದಾರೆ. ನನ್ನ ಅವಧಿಯ ಬಳಿಕ ಇನ್ನೊಂದು ವಾರದಲ್ಲಿ ಹೊಸ ನಿರ್ದೇಶಕರು ಬರುತ್ತಾರೆ. ಅವರು ಯಾರೆಂದು ನನಗೆ ತಿಳಿದಿಲ್ಲ. ಸರ್ಕಾರ ಈಗಾಗಲೇ ಹೊಸ ನಿರ್ದೇಶಕರನ್ನು ನಿರ್ಧಾರ ಮಾಡಿದೆ. ನಿರ್ದೇಶಕರನ್ನು ಆಯ್ಕೆ ಮಾಡುವ ಕಮಿಟಿಯಲ್ಲಿ ನಾನು ಇರಲಿಲ್ಲ. ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಆಸ್ಪತ್ರೆಗಾಗಿ ನಾನು ತುಂಬಾ ಕೆಲಸ ಮಾಡಿದ್ದೇನೆ. ಅದರ ಉದ್ಘಾಟನೆಗೆ ನಾನು ಇರಬೇಕಿತ್ತು ಎಂಬ ಆಸೆ ಇತ್ತು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...