ಕರ್ನಾಟಕಕ್ಕೆ ಲಗ್ಗೆಯಿಟ್ಟ ಜೆಎನ್‌ 1 : ಎಂಟು ಜನರಲ್ಲಿ ಪಾಸಿಟಿವ್

Date:

ಮಾರಿ ಕೊರೋನಾ ವೈರಸ್​ನ ರೂಪಾಂತರಿ ಜೆಎನ್‌ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ ಜೆಎನ್‌ 1 ಪ್ರಕರಣಗಳ ಸಂಖ್ಯೆ 63ಕ್ಕೆ ಏರಿದೆ. ಗೋವಾ ಮಹಾರಾಷ್ಟ್ರದ ಬಳಿಕ ಇದೀಗ ಕರ್ನಾಟಕದ ಎಂಟು ಜನರಲ್ಲಿ ಜೆಎನ್‌ 1 ಪ್ರಕರಣ ಪಾಸಿಟಿವ್ ಬಂದಿದೆ.

ಜೆಎನ್‌ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿತ್ತು. ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಗೋವಾ ಮಹಾರಾಷ್ಟ್ರದ ಬಳಿಕ ಇದೀಗ ಕರ್ನಾಟಕದಲ್ಲಿಯೂ ಎಂಟು ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಈವರೆಗೂ 63 ಜೆಎನ್‌ 1 ಪ್ರಕರಣಗಳು ಪತ್ತೆಯಾಗಿವೆ. ದೇಶದ ಒಟ್ಟು 6 ರಾಜ್ಯಗಳಲ್ಲಿ (ಗೋವಾ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ) ರೂಪಾಂತರಿ ವೈರಸ್ ಜೆಎನ್‌ 1 ಪತ್ತೆಯಾಗಿದ್ದು, ಗೋವಾದಲ್ಲಿ 34, ಕೇರಳ 6, ಮಹಾರಾಷ್ಟ್ರ 4, ತಮಿಳುನಾಡು 4 ಹಾಗೂ ತೆಲಂಗಾಣ 2 ಪತ್ತೆಯಾಗಿವೆ. ಈ ಪೈಕಿ ಗೋವಾದಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೆಎನ್‌ 1 ಸೋಂಕಿನ ಲಕ್ಷಣಗಳು

ಜ್ವರ, ಕೆಮ್ಮು, ಚಳಿ, ನೆಗಡಿ, ಗಂಟಲು ನೋವು, ಉಸಿರಾಟದ ಸಮಸ್ಯೆ, ವಾಂತಿ, ನಾಲಿಗೆ ರುಚಿ ಕಳೆದುಕೊಳ್ಳುವುದು, ಅತಿಸಾರ, ತಲೆನೋವು, ಮೂಗು ಸೋರುವಿಕೆ, ಸುಸ್ತು ಇವು ಜೆಎನ್‌ 1 ಸೋಂಕಿನ ಲಕ್ಷಣಗಳಾಗಿವೆ.

ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 4,054ಕ್ಕೆ ಏರಿದೆ. ಕೇರಳದಿಂದ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಮಾಹಿತಿ ನೀಡಿವೆ.

ಈ ಸುದ್ದಿ ಓದಿದ್ದೀರಾ? ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ತೆರಳಿದ ಪ್ರಯಾಣಿಕನ ಮೇಲೆ ಹಲ್ಲೆ: ಎಫ್‌ಐಆರ್‌ ದಾಖಲು

ಕೋವಿಡ್-19 ಸೋಂಕು ಆರಂಭವಾದಾಗಿನಿಂದ ಈವರೆಗೆ ಒಟ್ಟು 4.50 ಕೋಟಿ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ಈವರೆಗೆ 5.33 ಲಕ್ಷ ಮಂದಿ ಮೃತಪಟ್ಟಿದ್ದು, 4.44 ಕೋಟಿ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಗುಣಮುಖ ಪ್ರಮಾಣ ಶೇ 98.81 ಇದೆ. ಮೃತರ ಪ್ರಮಾಣ ಶೇ 1.19ರಷ್ಟಿದೆ. ಈವರೆಗೂ ದೇಶದಲ್ಲಿ 220.67 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ...