ಕನ್ನಡ ನಾಮಫಲಕ | ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಪೊಲೀಸ್‌ ವಶಕ್ಕೆ

Date:

ಅಂಗಡಿ, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ ಹಲವು ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಉದ್ಯಾನ ನಗರಿ ಬೆಂಗಳೂರಿನಲ್ಲಿರುವ ಬಹುತೇಕ ವಾಣಿಜ್ಯ ಅಂಗಡಿಗಳ ನಾಮಫಲಕ ಅನ್ಯ ಭಾಷೆಗಳಲಿದ್ದು, ಕನ್ನಡ ಕಣ್ಮರೆಯಾಗಿದೆ. ಈ ಹಿನ್ನೆಲೆ, ಕನ್ನಡಕ್ಕೆ ಶೇ.60 ರಷ್ಟು ಆದ್ಯತೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗಡುವು ನೀಡಿತ್ತು. ಆದರೆ, ನಗರದ ಬಹುತೇಕ ವ್ಯಾಪಾರ, ಉದ್ಯಮಗಳ ನಾಮಫಲಕಗಳಲ್ಲಿ ಅನ್ಯ ಭಾಷೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ಕರವೇ ಬೃಹತ್ ರ‍್ಯಾಲಿ ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

ಈ ರ‍್ಯಾಲಿ ಬೆಂಗಳೂರು ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್ ಬಳಿಯ ಟೋಲ್ ಪ್ಲಾಜಾದಿಂದ ಆರಂಭವಾಗಿ ಕಬ್ಬನ್ ಪಾರ್ಕ್ ವರೆಗೆ ಸಾಗಿದೆ. ಈ ನಡುವೆಯೇ ಪೊಲೀಸರು ಪ್ರತಿಭಟನಾನಿರತ ಮಹಿಳೆಯರು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಕೆ.ಆರ್.ಪುರಂ, ಹೆಬ್ಬಾಳ, ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ನಗರದ ಯುಬಿ ಸಿಟಿಯಲ್ಲಿ ಕರವೇ ಕಾರ್ಯಕರ್ತರು ಅಂಗಡಿಗಳಿಗೆ ಹಾಕಿದ್ದ ಇಂಗ್ಲಿಷ್‌ ನಾಮಫಲಕಗಳನ್ನು ಒಡೆದು ಹಾಕುತ್ತಿದ್ದು, ಬೋರ್ಡ್‌ಗಳಿಗೆ ಮಸಿ ಬಳಿಯುತ್ತಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ ಬಳಿ ಸೇರಿರುವ ಕಾರ್ಯಕರ್ತರು, ಇಂಗ್ಲಿಷ್ ಬೋರ್ಡ್‌ಗಳನ್ನು ಧ್ವಂಸಗೊಳಿಸಿದ್ದಾರೆ. ಸಾದಹಳ್ಳಿಯ ಬ್ಲೂಮ್ ಹೋಟೆಲ್ ಬಳಿ ಲೈಟಿಂಗ್ ಬೋರ್ಡ್ ಒಡೆದು ಹಾಕಿದ್ದಾರೆ.

ಹೆದ್ದಾರಿ ಬದಿಯ ದೊಡ್ಡ ದೊಡ್ಡ ಹೋಲ್ಡರ್‌ಗಳ ಮೇಲೆ ಹತ್ತಿದ ಕಾರ್ಯಕರ್ತರು ಇಂಗ್ಲಿಷ್‌ನಲ್ಲಿ ಹಾಕಲಾಗಿರುವ ಫಲಕಗಳನ್ನು ಧ್ವಂಸಗೊಳಿಸಿದ್ದಾರೆ. ಮಾಲ್‌ಗಳ ಮುಂದೆ ಇರುವ ಇಂಗ್ಲಿಷ್ ಬೋರ್ಡ್ ಇರೋ ಕಾರಣ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಪೊಲೀಸರು ಬರುತ್ತಿದ್ದಂತೆ ಕೆಲ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿದ ಪ್ರಸಂಗ ನಡೆದಿದೆ.

ಕಾರ್ಯಕರ್ತರು ಇಂಗ್ಲಿಷ್ ಭಾಷೆಯಲ್ಲಿದ್ದ ಜಾಹೀರಾತು ಫಲಕಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಕರ್ತರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ: 30 ಜನರಿಗೆ ಗಾಯ

ಚಿಕ್ಕಜಾಲ ವ್ಯಾಪ್ತಿಯಲ್ಲಿರುವ ಅಂಗಡಿ- ಮಳಿಗೆಗಳ ಮೇಲಿದ್ದ ಇಂಗ್ಲಿಷ್ ಫಲಕಗಳನ್ನು ಕಿತ್ತು ಹಾಕಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ನಗರದಲ್ಲಿ ಏಕಕಾಲಕ್ಕೆ ಪ್ರತಿಭಟನೆ ಆರಂಭವಾದ ಹಿನ್ನೆಲೆಯಲ್ಲಿ, ವಿವಿಧ ಭಾಗಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...