ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ

Date:

ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಕಿಕ್‌ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫಾರಸ್ಸು ಮಾಡಲಿಲ್ಲವಾ? ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 2022 ರಲ್ಲಿ 32,457 ಹೃದಯಾಘಾತ 2021ರಲ್ಲಿ 28,413 ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಲಸಿಕೆ ಪಡೆದ ನಂತರ 2022 ರಲ್ಲಿ 30 ವರ್ಷದೊಳಗಿನ 3,329 ಯುವಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶ್ವ ಸಂಸ್ಥೆ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿದೆ. ಇದನ್ನು ಅರಿತ ಅನೇಕ ದೇಶಗಳು ಆ ಲಸಿಕೆಯನ್ನು ನಿಷೇಧಿಸಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ ₹35,000 ಕೋಟಿ ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ಕೋವ್ಯಾಕ್ಸಿನ್ ಅನ್ನು 20 ಪ್ರತಿಶತ ಮಂದಿಗೆ ಮಾತ್ರ ನೀಡಲಾಗಿದೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಶ್ವದ ಅತಿ ದೊಡ್ಡ ಲಸಿಕೆ ಕಾರ್ಯಕ್ರಮದಲ್ಲಿ ಅತಿ ದೊಡ್ಡ ಹಗರಣ ನಡೆದಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕೋವಿಶೀಲ್ಡ್ ಹಾಕಿಸಿಕೊಳ್ಳುವ ಕಾರಣ ರಕ್ತ ಹೆಪ್ಪುಗಟ್ಟುತ್ತದೆ ಎಂದು ಅಸ್ಟ್ರಾಜನಿಕ ಒಪ್ಪಿಕೊಂಡಿದೆ. ಇಷ್ಟು ಗಂಭೀರ ಅಡ್ಡಪರಿಣಾಮ ಇದ್ದಾಗ ಹೇಗೆ ಲಸಿಕೆ ಹಾಕಲು ಒಪ್ಪಿಗೆ ನೀಡಿದಿರಿ? ಇವತ್ತು ತಮ್ಮಿಂದಾದ ತಪ್ಪನ್ನು ಒಪ್ಪಿಕೊಳ್ಳಲು ಕೂಡ ಮೋದಿ ಸಿದ್ದವಾಗಿಲ್ಲ, ಕೆಲವು ವೈದ್ಯರಿಗೆ ಹಣ ನೀಡಿ ಅಡ್ಡ ಪರಿಣಾಮ ಇಲ್ಲ ಎಂದು ಹೇಳಿಸುತ್ತಿದ್ದಾರೆ. ಹೃದಯಾಘಾತದ ಸಂಖ್ಯೆ ಕಣ್ಣು ಮುಂದೆ ಇದೆ. ಸರ್ಕಾರ ತಮ್ಮ ತಪ್ಪು ಒಪ್ಪಿಕೊಂಡು, ಲಸಿಕೆ ಪಡೆದುಕೊಂಡ ಬಳಿಕ, ಹೃದಯಾಘಾತದಿಂದ ಸಾವನ್ನಪ್ಪಿದ ಜನರಿಗೆ ಲಸಿಕಾ ಕಂಪನಿಯಿಂದ ಪರಿಹಾರ ಕೊಡಿಸಬೇಕು ಎಂದು ಮೋಹನ್ ದಾಸರಿ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ಅಷ್ಟು ಆರೋಗ್ಯವಾಗಿದ್ದು, ಸದೃಢರಾಗಿದ್ದ ಪುನೀತ್ ರಾಜ್‌ಕುಮಾರ್ ಕೂಡ ಇದ್ದಕ್ಕಿದ್ದಂತೆ ಹೃದಯಾಘತದಿಂದ ಸಾವನ್ನಪ್ಪುತ್ತಾರೆ ಎಂದರೆ ಇದು ಕೂಡ ಒಂದು ಕಾರಣ ಇರಬಹುದಲ್ಲವಾ ಎಂದು ಅನುಮಾನ ವ್ಯಕ್ತಪಡಿಸಿದರು.

ಎಎಪಿ ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ ಮಾತನಾಡಿ, ಕೋವಿಶೀಲ್ಡ್ ತಯಾರಿಸಿದ್ದ ಅಸ್ಟ್ರಾಜನಿಕಾ ಕಂಪನಿ ಮೇಲೆ ಪ್ರಕರಣ ದಾಖಸಿದ ಬಳಿಕ, ಕಂಪನಿ ಅಂತಿಮವಾಗಿ ತಮ್ಮ ಔಷಧಿಯಿಂದ ಅಡ್ಡ ಪರಿಣಾಮ ಇದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ವಿಶ್ವಸಂಸ್ಥೆಯವರು ಕೂಡ ಲಸಿಕೆಯಿಂದ ಅಡ್ಡ ಪರಿಣಾಮ ಇದ್ದು ಜನರಿಗೆ ಮಾಹಿತಿ ನೀಡುವಂತೆ ತಿಳಿಸಿದರೂ, ಕೇಂದ್ರ ಸರ್ಕಾರ ಮಾತ್ರ ಔಷಧಿಯಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ವಾದಿಸಿತು. ಲೋಕಸಭೆಯಲ್ಲೇ ಅಧಿಕೃತವಾಗಿ ಸರ್ಕಾರ ಘೋಷಣೆ ಮಾಡಿತ್ತು ಎಂದರು.

ಯಾವುದೇ ಲಸಿಕೆಯಾದರೂ ಅಡ್ಡ ಪರಿಣಾಮ ಇರುತ್ತದೆ. ಆದರೆ ಯಾಕೆ ಭಾರತದಲ್ಲಿ 80 ಪ್ರತಿಶತ ಜನಕ್ಕೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಭಾರತದ ಕೋವ್ಯಾಕ್ಸಿನ್ ಅನ್ನು ಯಾಕೆ ಶಿಫಾರಸ್ಸು ಮಾಡಲಿಲ್ಲ, ಅಸ್ಟ್ರಾಜನಿಕಾ ಕಂಪನಿ ಯಾಕೆ ₹50 ಕೋಟಿ ಚುನಾವಣಾ ಬಾಂಡ್ ಖರೀದಿ ಮಾಡಿದೆ ಎಂದು ಪ್ರಶ್ನಿಸಿದರು.

₹35 ಸಾವಿರ ಕೋಟಿ ಜನಗಳ ದುಡ್ಡು ಖರ್ಚು ಮಾಡಿ ಲಸಿಕೆ ನೀಡಲಾಗಿದೆ. ಯಾಕೆ ಇದೇ ಕಂಪನಿಯ ಲಸಿಕೆಯನ್ನು ಕೇಂದ್ರ ಸರ್ಕಾರ ಶಿಫಾರಸ್ಸು ಮಾಡಿದೆ ಎಂದು ಸಮಸ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

 

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ...

ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ...