ಬೆಂಗಳೂರು ನಗರ ನಿವೃತ್ತ ಪೊಲೀಸ್ ಆಯುಕ್ತ ಬಿ ಎನ್ ಗರುಡಾಚಾರ್ ನಿಧನ

Date:

Advertisements

ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ ಎನ್ ಗರುಡಾಚಾರ್ ಅವರು ಇಂದು(ಶುಕ್ರವಾರ) ಮುಂಜಾನೆ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಮೃತರು ಶಾಸಕ ಉದಯ್‌ ಗರುಡಾಚಾರ್‌ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶನಿವಾರ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು, ಬಿಂಡಿಗೇನವಿಲೆ ಗ್ರಾಮದಲ್ಲಿ ಜನಿಸಿದ ಗರುಡಾಚಾರ್‌ ಅವರು ಎಂಎ ಸ್ನಾತಕೋತ್ತರ ಪದವಿ ಪಡೆದ ನಂತರ 1953ರಲ್ಲಿ ಐಪಿಎಸ್ ಪಾಸ್ ಮಾಡಿ ಕೊಪ್ಪಳ, ಹುಮ್ನಾಬಾದ್, ತುಮಕೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎಸ್‌ಪಿ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಹಾಗೂ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯತ್ನಾಳ್, ಬಾಳೆ ಎಲೆ ಮತ್ತು ವಸಿಷ್ಠ-ವಾಲ್ಮೀಕಿಯರು

1963ರಲ್ಲಿ ಬೆಂಗಳೂರು ನಗರದ ಸಂಚಾರ ಪೊಲೀಸ್ ಉಪ ಆಯುಕ್ತರಾಗಿದ್ದ ಸಮಯದಲ್ಲಿ ಬೆಂಗಳೂರಿನ ಕಾರ್ಪೊರೇಷನ್ ವೃತ್ತದಲ್ಲಿ ಬೆಂಗಳೂರು ನಗರದ ಮೊದಲ ಟ್ರಾಫಿಕ್ ಸಿಗ್ನಲ್ ಪ್ರಾರಂಭಿಸಿದ್ದರು. ಈ ಐತಿಹಾಸಿಕ ಘಟನೆಯ ಸವಿನೆನಪಿಗಾಗಿ, ಈ ಘಟನೆಯನ್ನು ಹೆಸರಿಸುವ ಕಲ್ಲನ್ನು 2021ರ ಮಾರ್ಚ್‌ನಲ್ಲಿ ಖುದ್ದು ಗರುಡಾಚಾರ್ ಅವರೇ ಅಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂತ್, ಬೆಂಗಳೂರು ನಗರದ ಸಂಚಾರ ಜಂಟಿ ಪೊಲೀಸ್ ಆಯುಕ್ತ ಬಿ ಆರ್ ರವಿಕಾಂತೇಗೌಡ ಜತೆಗೂಡಿ ಉದ್ಘಾಟಿಸಿದ್ದರು.

1975ರ ತುರ್ತು ಪರಿಸ್ಥಿತಿಯಲ್ಲಿ ಇಂಟಲಿಜೆನ್ಸ್ ಐಜಿಯಾಗಿ, ಎಬಿ ವಾಜಪೇಯಿ, ಎಲ್‌ ಕೆ ಅಡ್ವಾನಿ ಮುಂತಾದ ರಾಷ್ಟ್ರಮಟ್ಟದ ರಾಜಕೀಯ ನಾಯಕರನ್ನು ಬಂಧಿಸಿ, ಜೈಲಿಗೆ ಹಾಕುವ ಮೂಲಕ ದೇಶವ್ಯಾಪಿ ಸುದ್ದಿಯಾಗಿದ್ದರು. 60ರ ದಶಕದಲ್ಲಿ ಹೈದರಾಬಾದ್‌ನಲ್ಲಿ ಉರ್ದು ವ್ಯಾಸಂಗ ಮಾಡಿದ್ದ ನಂತರ ಕೊನೆಯವರೆಗೂ ಪ್ರತಿನಿತ್ಯ ‘ಡೈಲಿ ಸಾಲಾರ್’ ಉರ್ದು ಪತ್ರಿಕೆಯನ್ನು ತಪ್ಪದೆ ಓದುವ ಹವ್ಯಾಸ ರೂಢಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X