ಹೈಕೋರ್ಟ್‌ನಲ್ಲಿ ಹಿನ್ನಡೆ: ಜೂನ್ 16 ರಿಂದ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Date:

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ನಿರಾಕರಿಸಿದೆ. ಇದರಿಂದಾಗಿ ಇದೇ ಜೂನ್ 16 ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ.

- Advertisement -

ಬೈಕ್‌ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ 2 ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್‌ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಏಪ್ರಿಲ್ ಆದೇಶದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿತ್ತು. ಇಲ್ಲದಿದ್ದರೆ ರಾಜ್ಯ ಸರ್ಕಾರವು ಇದಕ್ಕೆ ನಿರ್ದಿಷ್ಟ ನಿಯಮಗಳನ್ನು ರೂಪಿಸಬೇಕು ಎಂದು ಹೇಳಲಾಗಿತ್ತು. ನಂತರ ಈ ಗಡುವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪೋಕ್ಸೊ’ ಶಿಕ್ಷೆಯಿಂದ ನುಣುಚಿಕೊಳ್ಳುವ ದಾಳವಾಗದಿರಲಿ ‘ಮದುವೆ’

ಶುಕ್ರವಾರದ ವಿಚಾರಣೆಯಲ್ಲಿ, ಸರ್ಕಾರ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಲು ಹೊಸ ನಿಯಮಗಳನ್ನು ರೂಪಿಸುತ್ತಿದ್ದರೆ ಮಾತ್ರ ತಡೆಯಾಜ್ಞೆ ನೀಡಲು ಸಾಧ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಆದರೆ, ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ದೃಢಪಡಿಸಿದರು.

ಇದು ಸಾರ್ವಜನಿಕ ಹಿತಾಸಕ್ತಿ ಮತ್ತು ಬೈಕ್ ಟ್ಯಾಕ್ಸಿ ಚಾಲಕರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ವಿಷಯ ಎಂದು ನ್ಯಾಯಾಲಯ ಒಪ್ಪಿಕೊಂಡಿತು. ಆದರೆ ತಡೆ ನೀಡಲು ನಿರಾಕರಿಸಿತು.

ಬೈಕ್ ಟ್ಯಾಕ್ಸಿಗಳಿಗೆ ಹೊಸ ನಿಯಮಗಳ ಅಗತ್ಯವಿಲ್ಲ, ಬದಲಿಗೆ 1988 ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಅವು ಕಾರ್ಯನಿರ್ವಹಿಸಬಹುದು ಎಂದು ಅಗ್ರಿಗೇಟರ್‌ಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಪ್ರತಿಪಾದಿಸಿದರು. ಆದರೆ, ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ರಕ್ಷಣೆಯಲ್ಲಿ ಬೈಕ್ ಟ್ಯಾಕ್ಸಿಗಳು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ವಾದಿಸಿತು.

ಹೀಗಾಗಿ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್‌ ಮುಂದಿನ ವಿಚಾರಣೆಯನ್ನು ಜೂನ್ 24 ರಂದು ನಿಗದಿಪಡಿಸಿತು. ಅಲ್ಲಿಯವರೆಗೆ, ಸದ್ಯಕ್ಕೆ ಬೈಕ್ ಟ್ಯಾಕ್ಸಿ ಸೇವೆಗಳ ಭವಿಷ್ಯ ಅನಿಶ್ಚಿತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...