ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಿತ ಹೇಳಿಕೆ: ಕ್ಷಮೆಯಾಚಿಸಿದ ಗೃಹ ಸಚಿವ ಪರಮೇಶ್ವರ್‌

Date:

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

- Advertisement -

“ಲೈಂಗಿಕ ದೌರ್ಜನ್ಯವನ್ನು ಸಹಜಗೊಳಿಸುವುದು ತಮ್ಮ ಹೇಳಿಕೆಯ ಉದ್ದೇಶವಾಗಿರಲಿಲ್ಲ..” ಎಂದು ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿನ್ನೆ ನಾನು ನೀಡಿದ ಹೇಳಿಕೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಲಾಗಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ವ್ಯಕ್ತಿ. ನಿರ್ಭಯಾ ನಿಧಿಯನ್ನು ಮಹಿಳೆಯರ ಸುರಕ್ಷತೆಗಾಗಿ ಚೆನ್ನಾಗಿ ಬಳಸಿಕೊಳ್ಳಲಾಗಿದೆಯೆ ಎಂದು ನಾನು ಖಚಿತಪಡಿಸಿಕೊಂಡಿದ್ದೇನೆ. ನನ್ನ ಹೇಳಿಕೆಯನ್ನು ತಿರುಚುವುದು ನನಗೆ ಇಷ್ಟವಿಲ್ಲ. ಇದರಿಂದ ಯಾವುದೇ ಮಹಿಳೆಯರಿಗೆ ನೋವಾಗಿದ್ದರೆ, ನಾನು ವಿಷಾದ ವ್ಯಕ್ತಪಡಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ..” ಎಂದು ಪರಮೇಶ್ವರ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ಬೆಂಗಳೂರಿನ ತಮ್ಮ ನಿವಾಸದ ಬಳಿ ನಿನ್ನೆ ಮಾತನಾಡಿದ್ದ ಅವರು, ಇಷ್ಟು ದೊಡ್ಡ ಸಿಟಿಯಲ್ಲಿ ಅಲ್ಲಿ ಇಲ್ಲಿ ಇಂತಹ ಒಂದು ಘಟನೆಗಳು ಆಗುತ್ತವೆ. ನಿತ್ಯವೂ ಪೊಲೀಸ್ ಕಮಿಷನರ್​ಗೆ ಎಚ್ಚರಿಕೆಯಿಂದ ಇರಬೇಕು. ಬೀಟ್ ವ್ಯವಸ್ಥೆ ಚೆನ್ನಾಗಿ ಆಗಬೇಕು ಅಂತ ಹೇಳುತ್ತೇನೆ. ಪ್ರತಿ ಏರಿಯಾ ಮಾನಿಟರ್ ಮಾಡಬೇಕು. ಪೆಟ್ರೋಲಿಂಗ್ ಅನ್ನು ಶಿಸ್ತಿನಿಂದ, ಪರಿಣಾಮಕಾರಿಯಾಗಿ ಮಾಡಬೇಕು ಅಂತ ನಿತ್ಯ ಸೂಚನೆ ಕೊಡುತ್ತೇನೆ. ಅಲ್ಲೊಂದು ಇಲ್ಲೊಂದು ಘಟನೆ ಆದಾಗ ಸ್ವಾಭಾವಿಕವಾಗಿ ಜನರ ಗಮನ ಸೆಳೆಯುತ್ತದೆ. ಅಷ್ಟಕ್ಕೇ ನಾವು ಬಿಡೋದಿಲ್ಲ.

ನಿರಂತರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡ್ತಿದೆ. ದಿನವಿಡಿ ಮಳೆ, ಚಳಿ ಅನ್ನದೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಪಟ್ಟಣದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ಆಗುತ್ತದೆ. ಅದಕ್ಕೆ ನಾವು ಕಾನೂ‌ನು ಕ್ರಮ ತೆಗೆದುಕೊಳ್ಳುತ್ತೇವೆ. ಬೆಂಗಳೂರಲ್ಲಿ ಬೀಟ್ ವ್ಯವಸ್ಥೆ ಸುಧಾರಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಾನು ಪೊಲೀಸ್ ಕಮಿಷನರ್ ಜೊತೆಗೆ ಮಾತಾಡಿದ್ದೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...