ಪರೀಕ್ಷಾ ಕೇಂದ್ರಕ್ಕೆ ತಲುಪಲು ಪರದಾಡುತ್ತಿದ್ದ ಸಿಇಟಿ ಅಭ್ಯರ್ಥಿ; ನೆರವಾದ ಪೊಲೀಸರು

Date:

ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ನಗರದ ಹಲವೆಡೆ ಶನಿವಾರ ಸಂಚಾರ ದಟ್ಟಣೆ ಉಂಟಾಗಿತ್ತು. ಶನಿವಾರ ಸಿಇಟಿ ಇದ್ದ ಕಾರಣ ಮೆಜೆಸ್ಟಿಕ್‌ನಿಂದ ಪರೀಕ್ಷಾ ಕೇಂದ್ರಕ್ಕೆ ತಲುಪಲು ಪರದಾಡುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಕೋರಮಂಗಲಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ.

ಶರವಣ ಕುಮಾರ್ ಎಂಬ ವಿದ್ಯಾರ್ಥಿಯೊಬ್ಬನಿಗೆ ಪೊಲೀಸರು ಸಹಾಯ ಮಾಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಕೇವಲ 15 ನಿಮೀಷದಲ್ಲಿ ವಿದ್ಯಾರ್ಥಿಯನ್ನು ಬೆಂಗಳೂರು ಪೊಲೀಸರು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ್ದಾರೆ. ಹೊಯ್ಸಳ ಚಾಲಕ ಎಸ್ ಟಿ ಸೋಮಶೇಖರ್, ಹೆಡ್ ಕಾನ್‌ಸ್ಟೆಬಲ್ ಗೌರೀಶ್ ನೇತೃತ್ವದಲ್ಲಿ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ್ದಾರೆ.

ಶರವಣ ಕುಮಾರ್ ಅವರು ಮೆಜೆಸ್ಟಿಕ್‌ನಲ್ಲಿ ಸಿಲುಕಿಕೊಂಡು ಕೋರಮಂಗಲದಲ್ಲಿರುವ ತನ್ನ ಪರೀಕ್ಷಾ ಕೇಂದ್ರಕ್ಕೆ ಹೋಗಲು ಕಷ್ಟಪಡುತ್ತಿದ್ದರು. ಪರೀಕ್ಷಾ ಕೇಂದ್ರ 10-11 ಕಿ.ಮೀ ದೂರದಲ್ಲಿರುವುದನ್ನು ಗಮನಿಸಿದ ಹೊಯ್ಸಳ ಪೊಲೀಸರು ಆತನಿಗೆ ನೆರವಾಗಿದ್ದು, ವಿದ್ಯಾರ್ಥಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿ, ಪರೀಕ್ಷೆ ಬರೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಚೀನಾ ಮೂಲದ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ...

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ...

ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ...