ಕೆಇಎ ಸೀಟ್‌ ಬ್ಲಾಕಿಂಗ್ ಹಗರಣ; 10 ಮಂದಿ ಆರೋಪಿಗಳ ಬಂಧನ

Date:

ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಡಿಯಲ್ಲಿ ಸರ್ಕಾರಿ ಕೋಟಾದಡಿ ನೀಡಲಾಗುವ ಸೀಟ್‌ಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಹಣ ಪಡೆದು ಸೀಟ್‌ ಬ್ಲಾಕಿಂಗ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಈವರೆಗೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಸೀಟು ಸಿಕ್ಕರೂ ಸುಮಾರು 2,625 ಅಭ್ಯರ್ಥಿಗಳು ಕಾಲೇಜುಗಳಿಗೆ ದಾಖಲಾಗಿರಲಿಲ್ಲ. ಆ ಅಭ್ಯರ್ಥಿಗಳು ಪ್ರವೇಶ ಪಡೆಯದಿದ್ದಾಗ ಅರ್ಹ ಅಭ್ಯರ್ಥಿಗಳಿಗೆ ಸೀಟು ನೀಡದೆ ವಂಚಿಸಲಾಗಿದೆ. ಜೊತೆಗೆ, ಸೀಟು ಅಗತ್ಯವಿಲ್ಲದ ಅಭ್ಯರ್ಥಿಗಳನ್ನು ಸಂಪರ್ಕಿಸಿ ಕೌನ್ಸೆಲಿಂಗ್​ಗೆ ಬರುವಂತೆ ಮಾಡಿದ್ದು, ಉದ್ದೇಶಪೂರ್ವಕವಾಗಿ ಅರ್ಹ ಅಭ್ಯರ್ಥಿಗಳಿಗೆ ಸೀಟು ಸಿಗದಂತೆ ಮಾಡಲಾಗಿದೆ. ಸರ್ಕಾರಿ ಕೋಟಾದ ಸೀಟುಗಳನ್ನು ಮ್ಯಾನೆಜ್‌ಮೆಂಟ್‌ ಕೋಟಾದ ಸೀಟುಗಳಾಗಿ ಪರಿವರ್ತಿಸಿ, ಹೆಚ್ಚು ಶುಲ್ಕ ವಸೂಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸೀಟ್‌ ಬ್ಲಾಕಿಂಗ್‌ ಹಗರಣದ ಬಗ್ಗೆ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ. ಗಾಡಿಯಲ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಿಎಂಎಸ್ ಕಾಲೇಜು, ಆಕಾಶ್ ಇನ್​ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜು ಹಾಗೂ ನ್ಯೂ ಹಾರಿಜನ್ ಇಂಜಿನಿಯರಿಂಗ್ ಕಾಲೇಜುಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಸಿಕೊಂಡಿದ್ದಾರೆ. 10 ಮಂದಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...