ಪರಿಸರ ಸ್ನೇಹಿ ಗಣಪತಿ ಇಟ್ಟು ಪೂಜಿಸಿ; ಸಾರ್ವಜನಿಕರಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಮನವಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ಬಣ್ಣದ/ಪಿಒಪಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ, ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

- Advertisement -

ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಚೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ‌ ಕುರಿತು ನಾನಾ ಇಲಾಖೆಗಳ ಜೊತೆ ನಡೆದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು” ಎಂದರು.

“ಕೆಲ ಪ್ರದೇಶಗಳಲ್ಲಿ ಕೆರೆಗಳು ವಸತಿ ಪ್ರದೇಶದಿಂದ ದೂರವಿರುವುದರಿಂದ ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್‌ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ಈ ವರ್ಷವೂ ವ್ಯವಸ್ಥೆ ಮಾಡಬೇಕು” ಎಂದು ತಿಳಿಸಿದರು.

“ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡ್ ಅಳವಡಿಸಬೇಕು. ಎಲ್ಲ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಬೇಕು” ಎಂದು ಹೇಳಿದರು.

“ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು(ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು) ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಆಗಿಂದಾಗೆ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಬೇಕು” ಎಂದು ತಿಳಿಸಿದರು.

“ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು‌‌. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆಯನ್ನು ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮವಹಿಸಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಮಳೆಗಾಲ | ಹೇಳಿಕೆಯಲ್ಲಷ್ಟೇ ಸನ್ನದ್ಧ ಬಿಬಿಎಂಪಿ; ನಗರ ಜೀವನ ಅಸ್ತವ್ಯಸ್ತ

ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು ಸಾರ್ವಜನಿಕರು ಸಹಕರಿಸಲು ಕೋರಿದೆ.

ಸಭೆಯಲ್ಲಿ ಬಿಬಿಎಂಪಿಯ ಎಲ್ಲಾ ವಿಶೇಷ/ವಲಯ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಉಪ ಆಯುಕ್ತರು(ಆಡಳಿತ), ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...