ಕೆಂಗೇರಿ ಕೆರೆ ದುರಂತ | ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಲು ಸಿಪಿಐ(ಎಂ) ಆಗ್ರಹ

Date:

ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದ್ದು, ಈ ಪೈಕಿ ಮಂಗಳವಾರ ಎರಡು ಮೃತದೇಹ ಪತ್ತೆಯಾಗಿವೆ. ಶೋಧ ಕಾರ್ಯ ಮುಂದುವರಿದಿದೆ.

- Advertisement -

ಸೋಮವಾರ ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮಿ (13)‌ ಎಂದು‌ ಗುರುತಿಸಲಾಗಿದೆ. ಈ ಘಟನೆಯನ್ನು ಸಿಪಿಐ(ಎಂ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ತೀವ್ರವಾಗಿದೆ ಖಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೃತ ಮಕ್ಕಳ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡಬೇಕು ಎಂದು ಸಿಪಿಐ(ಎಂ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವನ್ನು ಇದೇ ಸಂದರ್ಭದಲ್ಲಿ ಆಗ್ರಹಿಸಿದೆ.

ಮೃತ ಮಕ್ಕಳ ತಾಯಿಯನ್ನು ಸಿಪಿಐ(ಎಂ) ಕೆಂಗೇರಿ ವಲಯ ಸಮಿತಿಯ ನಿಯೋಗ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದೆ. ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಎಸ್.ಲಕ್ಷ್ಮಿ, ಮುಖಂಡರಾದ ಎನ್.ಬಿ.ಮಹಂತೇಶ್, ಬಿ.ಕಪನಿಗೌಡ, ಕೆ.ಗುರುಪ್ರಸಾದ್ ಇದ್ದರು.

“ಅಕ್ಟೋಬರ್ 21 ರಂದು ಸುರಿದ ತೀವ್ರ ಮಳೆಯಿಂದ ಕೆಂಗೇರಿ ಅಂಗಳದಲ್ಲಿ ಮಣ್ಣು ಮೃದುವಾಗಿ ಆಟವಾಡುತ್ತಿದ್ದ ಮಕ್ಕಳು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಇದು ಬಿಬಿಎಂಪಿಯ ತೀವ್ರ ನಿರ್ಲಕ್ಷ್ಯವಾಗಿದ್ದು ಕೆರೆ ಅಂಗಳದಲ್ಲಿ ತಂತಿ ಬೇಲಿ ಇಲ್ಲದಿರುವುದೇ ಈ ಅನಾಹುತಕ್ಕೆ ಕಾರಣ” ಎಂದು ಸಿಪಿಐ ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಸತತ ಮಳೆ, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಬುಧವಾರ ಶಾಲೆಗಳಿಗೆ ರಜೆ: ಡಿಸಿ ಜಗದೀಶ್ ಆದೇಶ

“ನಾಗರತ್ನರವರು ಬಿಬಿಎಂಪಿಯಲ್ಲಿ ಒಣ ತ್ಯಾಜ್ಯ ವಿಲೇವಾರಿಯ ವಿಭಾಗದಲ್ಲಿ ಕೆಲಸ ಮಾಡುವ ದಿನಗೂಲಿ ಕಾರ್ಮಿಕಳು. ದಲಿತ ಕುಟುಂಬಕ್ಕೆ ಸೇರಿದ ಈಕೆ ಒಂಟಿ ಮಹಿಳೆ ಕೆಲಸಕ್ಕೆ ಹೋದಾಗ ಈ ಅವಘಡ ನಡೆದಿದೆ. ತನ್ನ ಸಂಸ್ಥೆಯ ದಿನಗೂಲಿ ನೌಕರಳ ಕುರಿತು ಈವರೆಗೆ ಬಿಬಿಎಂಪಿ ಉನ್ನತ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ. ಇದು ಅತ್ಯಂತ ಅಮಾನವೀಯ ನಡೆಯಾಗಿದೆ” ಎಂದು ಸಮಿತಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ಥಳೀಯ ಶಾಸಕರಾದ ಸೋಮಶೇಖರ್ ಆಗಲೀ, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆಯವರಾಗಲೀ ಕನಿಷ್ಠ ಭೇಟಿ ನೀಡಿ ಸಾಂತ್ವನ ಹೇಳಲು ಬಂದಿಲ್ಲ. ಇದು ಬಡವರು ಮತ್ತು ದಲಿತ ಮಕ್ಕಳ ಕುರಿತ ನಿರ್ಲಕ್ಷ್ಯ” ಎಂದು ಸಿಪಿಐ(ಎಂ) ಕೆಂಗೇರಿ ವಲಯ ಸಮಿತಿ ದೂರಿದೆ.

“ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕೂಡಲೇ ಮಧ್ಯಪ್ರವೇಶಿಸಬೇಕು. ಮೃತ ಮಕ್ಕಳ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿಯನ್ನು ನೀಡಬೇಕು. ಕುಟುಂಬದ ನಿರ್ವಹಣೆಗೆ ಕನಿಷ್ಠ 50 ಲಕ್ಷ ಪರಿಹಾರ ಘೋಷಿಸಬೇಕು. ನಿರ್ಲಕ್ಷ್ಯ ಮಾಡಿದ ಬಿ.ಬಿ.ಎಂ.ಪಿ ಅಧಿಕಾರಿಗಳ ವಿರುದ್ಧವು ಕ್ರಮಜರುಗಿಸಬೇಕು” ಎಂದು ಆಗ್ರಹಿಸಿದೆ.

“ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಬೆಂಗಳೂರಿನ ಕೆರೆಗಳಿಗೆ ಮುಳ್ಳುತಂತಿ ಮತ್ತು ಗೇಟ್ ವ್ಯವಸ್ಥೆ ಮಾಡಬೇಕು. ಎಚ್ಚರಿಕೆಯ ಫಲಕಗಳನ್ನು ಹಾಕಬೇಕು” ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ...

ಶಾಲಾ ಸಮಯ ಬೆಳಗಿನ ಜಾವಕ್ಕೆ ಶಿಫ್ಟ್‌? ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಕಾರಣ – ಸರ್ಕಾರ ಚಿಂತನೆ

​ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶೀಘ್ರವೇ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ...

ಬೆಂಗಳೂರು ವಿ.ವಿ ಯಡವಟ್ಟು: ರಾಮನಗರ ಸರ್ಕಾರಿ ಕಾಲೇಜಿನ 46 ಉತ್ತರ ಪತ್ರಿಕೆಗಳು ನಾಪತ್ತೆ

ಪರೀಕ್ಷೆ ಬರೆದು ಒಂದೂವರೆ ವರ್ಷ ಕಳೆದರೂ ಫಲಿತಾಂಶ ಬಾರದೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ...