ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

Date:

  • ತಪಾಸಣೆ ವೇಳೆ ಮಹಿಳೆಯ ಹ್ಯಾಂಡ್‌ ಬ್ಯಾಗ್‌ನಲ್ಲಿ ಕೊಕೇನ್ ಪತ್ತೆ
  • ಬೆಂಗಳೂರಿಗೆ ಆಫ್ರಿಕಾದಿಂದ ದೊಡ್ಡ ಪ್ರಮಾಣದಲ್ಲಿ ಕೊಕೇನ್ ಕಳ್ಳಸಾಗಣೆ

ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಲೈಬೀರಿಯನ್ ಮಹಿಳೆ ಮೇ 27ರಂದು ಬೆಳಿಗ್ಗೆ ಆಫ್ರಿಕಾ ಖಂಡದ ಅಡಿಸ್ ಅಬಾಬಾ ಇಥಿಯೋಪಿಯಾ ದೇಶದಿಂದ ಬೆಂಗಳೂರಿಗೆ ಇಥಿಯೋಪಿಯನ್ ಏರ್‌ಲೈನ್ಸ್ ಮೂಲಕ ಬಂದಿದ್ದಾರೆ. ಅವರು ಪ್ರವಾಸಿ ವೀಸಾವನ್ನು ಹೊಂದಿದ್ದರು.

ನಿಲ್ದಾಣಕ್ಕೆ ಬಂದಿಳಿದ ವೇಳೆ ಮಹಿಳೆ ಅನುಮಾನಾಸ್ಪಾದವಾಗಿ ವರ್ತಿಸುತ್ತಿರುವುದನ್ನು ಕಂಡ ಅಧಿಕಾರಿಗಳು ಆಕೆಯನ್ನು ತಪಾಸಣೆಗೆ ಒಳಪಡಿಸಿದ್ದು, ಮಹಿಳೆಯ ಹ್ಯಾಂಡ್‌ ಬ್ಯಾಗ್‌ನಲ್ಲಿ ಕೊಕೇನ್ ಪತ್ತೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸದ್ಯ ಮಹಿಳೆಯನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

ಬಂಧಿತ ಮಹಿಳೆ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದು, ಬೆಂಗಳೂರಿನಿಂದ ನಾನಾ ನಗರಗಳಿಗೆ ತೆರಳಲು ಇಚ್ಛಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...