ಕೆಐಎ ಟರ್ಮಿನಲ್ 2 | ತಾಂತ್ರಿಕ ಸಮಸ್ಯೆಯಿಂದಾಗಿ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ

Date:

  • ವಿನೂತನ ಗಾರ್ಡನ್ ಹೊಂದಿರುವ ಕೆಐಎ ಟರ್ಮಿನಲ್ 2
  • ಪ್ರಯಾಣದ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆ ಸಂಪರ್ಕಿಸಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಆ. 31ರಿಂದ ವಿದೇಶಿ ವಿಮಾನ ಹಾರಾಟ ನಡೆಸಬೇಕಿತ್ತು. ಆದರೆ, ತಾಂತ್ರಿಕ ದೋಷ ಸೇರಿದಂತೆ ಇನ್ನಿತರೆ ಕೆಲವು ಸಮಸ್ಯೆಗಳ ಕಾರಣದಿಂದ ವಿದೇಶಿ ವಿಮಾನ ಹಾರಾಟ ಮುಂದೂಡಲಾಗಿದೆ.

- Advertisement -

ಕೆಐಎ ಟರ್ಮಿನಲ್​ 2ನಿಂದ ವಿದೇಶಿ ವಿಮಾನ ಹಾರಾಟಕ್ಕೆ ಆ.31 ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಮುಂದೂಡಿಕೆ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಕೊನೆಯ ಕ್ಷಣದಲ್ಲಿ ಉಂಟಾದ ಈ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಪ್ರಯಾಣಿಕರಿಗೆ ಉತ್ತಮ ಪ್ರಯಾಣವನ್ನು ನೀಡುವ ನಿಟ್ಟಿನಲ್ಲಿ ಕೊನೆಯ ಪರಿಶೀಲನೆಗೆ ಕೊನೆಯ ಕ್ಷಣದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ಆದೇಶದವರೆಗೂ ಟರ್ಮಿನಲ್ 1ರಿಂದ ವಿದೇಶಿ ವಿಮಾನಗಳ ಕಾರ್ಯಾಚರಣೆ ನಡೆಯಲಿದೆ. ಟರ್ಮಿನಲ್ 1ರಲ್ಲಿ ದೇಶೀಯ ವಿಮಾನ ಕಾರ್ಯಾಚರಣೆ ನಡೆಯಲಿದೆ” ಎಂದು ತಿಳಿಸಿದೆ.

“ಅಂತಾರಾಷ್ಟ್ರೀಯ ಪ್ರಯಾಣದ ಕುರಿತಂತೆ ಯಾವುದೇ ಹೆಚ್ಚಿನ ಮಾಹಿತಿ ಪಡೆಯಲು ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ. ಟರ್ಮಿನಲ್‌-2ರಿಂದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಆರಂಭಿಸುವ ದಿನಾಂಕವನ್ನು ಗುರುವಾರ ಪ್ರಕಟಿಸಲಾಗುವುದು” ಎಂದು ಬಿಐಎಎಲ್ ವಕ್ತಾರರು ತಿಳಿಸಿದ್ದಾರೆ.

ಆ. 31ರಂದು ವಿದೇಶಿ ವಿಮಾನ ಹಾರಾಟ ನಡೆಸಬೇಕಿದ್ದ ಟರ್ಮಿನಲ್ 2

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-1ರ ಒತ್ತಡ ಕಡಿಮೆ ಮಾಡಲು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ (ಬಿಐಎಎಲ್‌) ಅಂತಾರಾಷ್ಟ್ರೀಯ ವಿಮಾನಗಳ ಸೇವೆಯನ್ನು ಸಂಪೂರ್ಣವಾಗಿ ಟರ್ಮಿನಲ್‌-2ಗೆ ಸ್ಥಳಾಂತರಿಸಲು ನಿರ್ಧರಿಸಿತ್ತು. ಗುರುವಾರದಿಂದ ಎಲ್ಲ ಅಂತಾರಾಷ್ಟ್ರೀಯ ವಿಮಾನ ಸೇವೆಗಳು ಟರ್ಮಿನಲ್‌-2ರಿಂದ ಕಾರ್ಯಾಚರಣೆಗೊಳ್ಳಲಿದ್ದು, ಉಳಿದಂತೆ ದೇಶೀಯ ಸೇವೆಗಳನ್ನು ಎರಡೂ ಟರ್ಮಿನಲ್‌ಗೆ ಹಂಚಿಕೆ ಮಾಡಲಾಗುತ್ತದೆ ಎಂದು ಬಿಐಎಎಲ್‌ ಈ ಹಿಂದೆ ಪ್ರಕಟಣೆ ಮೂಲಕ ತಿಳಿಸಿತ್ತು. ಆದರೀಗ ಕೊನೆ ಕ್ಷಣದಲ್ಲಿ ಈ ನಿರ್ಧಾರವನ್ನು ಮೂಂದೂಡಲಾಗಿದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 38 ವರ್ಷದ ಹಿಂದೆ ಸೈಕಲ್ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

ಕೆಐಎ ಟರ್ಮಿನಲ್ 2

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವಿನೂತನ ಗಾರ್ಡನ್ ಹೊಂದಿದೆ. ಇದಕ್ಕೆ ₹5 ಸಾವಿರ ಕೋಟಿ ವೆಚ್ಚವಾಗಿದೆ. ಈ ಟರ್ಮಿನಲ್ಲಿ 27 ಏರ್‌ಲೈನ್ಸ್‌ ಕಾರ್ಯನಿರ್ವಹಿಸುತ್ತಿವೆ. ವಾರ್ಷಿಕವಾಗಿ 25 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಈ ಟರ್ಮಿನಲ್ 2 ಹೊಂದಿದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಕಾಮಗಾರಿ 2018ರಲ್ಲಿ ಪ್ರಾರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2022ರ ನವೆಂಬರ್​​ನಲ್ಲಿ ಟರ್ಮಿನಲ್ 2 ಉದ್ಘಾಟಿಸಿದ್ದರು. ದೇಶೀಯ ಕಾರ್ಯಾಚರಣೆಗಳು 2023ರ ಜನವರಿ 15ರಂದು ಪ್ರಾರಂಭವಾಗಿದ್ದವು.

ಈ ಟರ್ಮಿನಲ್‌ ನಾನಾ ಜಾತಿಯ ಸಸ್ಯಗಳು ಹಾಗೂ ಮರಗಳಿಂದ ಸುತ್ತುವರೆದಿದೆ. ಇದನ್ನು ಇನ್​ ದಿ ಗಾರ್ಡನ್ ಎಂದು ಕರೆಯಲಾಗುತ್ತಿದೆ.

ಈ ಟರ್ಮಿನಲ್​ 2ರಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಜಾತಿಯ ಸಸ್ಯಗಳಿವೆ. 3,600ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು, 7,700 ಕಸಿ ಮರಗಳು, 96 ಕಮಲ ಮತ್ತು ಇನ್ನೂ ಹೆಚ್ಚಿನ ಸಸ್ಯಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...