ಕೆಐಎ ಟರ್ಮಿನಲ್ 2| ಚಿನ್ನ, ಸಿಗರೇಟ್ ಹಾಗೂ ನಿಷೇಧಿತ ಸೌಂದರ್ಯವರ್ಧಕ ವಶ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಆರಂಭವಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಚಿನ್ನ, ಸಿಗರೇಟ್ ಹಾಗೂ ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ. ನೂತನ ಟರ್ಮಿನಲ್‌ನಲ್ಲಿ ಬುಕ್ ಮಾಡಲಾದ ಮೊದಲ ಪ್ರಕರಣ ಇದಾಗಿದೆ.

“ಬುಧವಾರ ಶಾರ್ಜಾದಿಂದ ಏರ್ ಅರೇಬಿಯಾ ವಿಮಾನದಲ್ಲಿ (ಜಿ 9 0496) ಆಗಮಿಸಿದ ಮಹಿಳಾ ಪ್ರಯಾಣಿಕರೊಬ್ಬರು ₹22.19 ಲಕ್ಷ ಮೌಲ್ಯದ 376.2 ಗ್ರಾಂ ತೂಕದ ಎರಡು ಚಿನ್ನದ ಸರಗಳನ್ನು ತನ್ನ ಒಳ ಉಡುಪುಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ಕಸ್ಟಮ್ಸ್‌ ಅಧಿಕಾರಿಗಳು ಮಹಿಳೆಯಿಂದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಂಡಿಗೋ ವಿಮಾನದಲ್ಲಿ (6E 1486) ದುಬೈನಿಂದ ಬಂದ ಇಬ್ಬರು ಪುರುಷ ಪ್ರಯಾಣಿಕರಿಂದ ಒಟ್ಟು ₹65,200 ಮೌಲ್ಯದ ವಿದೇಶಿ ಸಿಗರೇಟ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವೈಯಕ್ತಿಕ ತಪಾಸಣೆ ವೇಳೆ ಪ್ರಯಾಣಿಕನೊಬ್ಬನು ತನ್ನ ಚೆಕ್-ಇನ್‌ನಲ್ಲಿ ಸಿಗರೇಟ್‌ಗಳನ್ನು ಸಾಗಿಸಿದ್ದನ್ನು ಬಹಿರಂಗಪಡಿಸಿದ. ಬಾಕ್ಸ್‌ನಲ್ಲಿ ಒಟ್ಟು 57,200 ಸಿಗರೇಟ್ ಕಡ್ಡಿಗಳು ಪತ್ತೆಯಾಗಿವೆ ಎಂದು ಕಸ್ಟ್‌ಮ್ಸ್ ಅಧಿಕಾರಿಗಳು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಕರಾವಳಿಯ ಕ್ರೀಡೆ; ಮೊಟ್ಟ ಮೊದಲ ಬಾರಿಗೆ ಕಂಬಳ ನಡೆಸಲು ಸಿದ್ಧತೆ

ವಿಮಾನದಲ್ಲಿದ್ದ ಮತ್ತೊಬ್ಬ ಪುರುಷ ಪ್ರಯಾಣಿಕ 8,000 ಅಂತಾರಾಷ್ಟ್ರೀಯ ಸಿಗರೇಟ್ ಸ್ಟಿಕ್‌ಗಳು ಮತ್ತು 348 ಬ್ಯೂಟಿ ಕ್ರೀಮ್ ಬಾಕ್ಸ್‌ಗಳೊಂದಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಕಸ್ಟಮ್ಸ್‌ ಮೂಲಗಳಿಂದ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಸ್‌ವೈ ಭೇಟಿಯಾದ ಸೋಮಣ್ಣ- ಚರ್ಚೆಗೆ ಗ್ರಾಸ

ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ...

ಬಿಬಿಎಂಪಿ | ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಹೆಸರು ಪ್ರಕಟ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಸುಸ್ತಿದಾರರ ಪಟ್ಟಿಯನ್ನು ಬೃಹತ್ ಬೆಂಗಳೂರು ಮಹಾನಗರ...

ಅನ್ನ, ಆರೋಗ್ಯ, ಆಶ್ರಯ, ಅಕ್ಷರವೇ ನಮ್ಮ ಸರ್ಕಾರದ ಮೂಲಮಂತ್ರ: ಸಿಎಂ ಸಿದ್ಧರಾಮಯ್ಯ

“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ...

ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ...