ಮಹಾಲಕ್ಷ್ಮಿ ಹತ್ಯೆ | ದೇಹ ಕತ್ತರಿಸಿದ ಸ್ಥಳದ ಗುರುತು ಪತ್ತೆಯಾಗದಂತೆ ಮನೆ ಸ್ವಚ್ಛ ಮಾಡಿರುವ ಕೊಲೆ ಆರೋಪಿ

Date:

ಬೆಂಗಳೂರಿನ ವೈಯಾಲಿಕಾವಲ್​ನ ಮುನೇಶ್ವರ ಬ್ಲಾಕ್‌ನ ನಿವಾಸಿಯಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌) ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ.

- Advertisement -

ಕೊಲೆಯಾದ ಮಹಾಲಕ್ಷ್ಮಿ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್​ಎಸ್​​ಎಲ್​ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ ಆರೋಪಿ ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವಚ್ಛಗೊಳಿಸಿ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೊಲೆ ನಡೆದ ಸ್ಥಳದಲ್ಲಿ, ರಕ್ತ ಕಾಣಬಾರದೆಂದು ಸ್ವಚ್ಛ ಮಾಡಿದ ಮೇಲೂ ಕಲೆಗಳನ್ನು ಪತ್ತೆ ಹಚ್ಚಬಹುದು. ಎಫ್​ಎಸ್​ಎಲ್​ ತಜ್ಞರು ಲುಮಿನಾಲ್ ಎಂಬ ಕೆಮಿಕಲ್ ಬಳಸಿ ರಕ್ತದ ಕಲೆಗಳನ್ನು ಪತ್ತೆ ಹಚ್ಚುತ್ತಾರೆ. 200 ದಿನಗಳ ಹಿಂದಿನ ರಕ್ತದ ಕಲೆಗಳನ್ನೂ ಸಹ ಲುಮಿನಾಲ್ ಕೆಮಿಕಲ್ ಬಳಸಿ ಪತ್ತೆ ಮಾಡಬಹುದು.

ಆದರೆ, ಮಹಾಲಕ್ಷ್ಮಿ ಕೊಲೆ ಪ್ರಕರಣದಲ್ಲಿ ಲುಮಿನಾಲ್ ಕೆಮಿಕಲ್ ಬಳಸಿದರೂ ರಕ್ತದ ಕಲೆಗಳು ಪತ್ತೆಯಾಗಿಲ್ಲ. ಹೀಗಾಗಿ ಕೊಲೆ ಆರೋಪಿ ಯಾವುದೋ ಕೆಮಿಕಲ್ ಬಳಸಿ ಮನೆ ಸ್ವಚ್ಛ ಮಾಡಿರುವ ಶಂಕೆ ಪೊಲೀಸರಿಗೆ ಬಂದಿದೆ. ಇನ್ನು, ಆರೋಪಿ ಮಹಾಲಕ್ಷ್ಮಿಯನ್ನು ಕೊಲೆ ಮಾಡಲು, ಪಕ್ಕಾ ಪ್ಲ್ಯಾನ್​ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸಾಕ್ಷ್ಯ ಹೇಗೆ ನಾಶ ಮಾಡಬೇಕು ಎಂಬುವುದನ್ನೂ ಮುಂಚೆಯೇ ಅಧ್ಯಯನ ಮಾಡಿದ್ದಾನೆ ಎಂಬ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ.

ಮಹಾಲಕ್ಷ್ಮಿ ಸಂಪರ್ಕದಲ್ಲಿದ್ದ ಆಶ್ರಫ್​

ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಟಿಂಗ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಎಂಬಾತನನ್ನು, ಕರೆದು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಆಶ್ರಫ್​, ಮಹಾಲಕ್ಷ್ಮಿ ಜೊತೆ ಸಂಪರ್ಕದಲ್ಲಿದ್ದೆ ಎಂದು ಹೇಳಿದ್ದಾನೆ.

“ಮಹಾಲಕ್ಷ್ಮಿ ಜೊತೆ ಸಂಪರ್ಕ ಇದ್ದಿದ್ದು ನಿಜ. ಆದರೆ ನಾನು ಕೊಲೆ ಮಾಡಿಲ್ಲ. ಆರು ತಿಂಗಳ ಹಿಂದೆ ಆಕೆ ಜೊತೆ ಸಂಪರ್ಕ ಇತ್ತು. ಈಗ ದೂರ ಆಗಿದ್ದೆ. ನಮ್ಮ ಇಬ್ಬರ ವಿಚಾರ ಕುಟುಂಬಸ್ಥರಿಗೆ ಗೊತ್ತಾಗಿ ಜಗಳವಾದ ಮೇಲೆ ಆಕೆಯ ತಂಟೆಗೆ ಹೋಗಿಲ್ಲ. ಈ ಕೊಲೆಗೂ, ನನಗೂ ಯಾವುದೇ ಸಂಬಂಧ ಇಲ್ಲ” ಎಂದು ಹೇಳಿದ್ದಾನೆ.

ಇದನ್ನು ಓದಿದ್ದೀರಾ? ಶಿರೂರು ದುರಂತ | ಡ್ರೆಜ್ಜಿಂಗ್ ಕಾರ್ಯಾಚರಣೆಯ ವೇಳೆ ಮೂಳೆ ಪತ್ತೆ: ಡಿಎನ್‌ಎ ಪರೀಕ್ಷೆ ನಡೆಸಲು ರವಾನೆ

ಬಳಿಕ, ಪೊಲೀಸರು ಅಶ್ರಫ್ ಮೊಬೈಲ್​ ಪರಿಶೀಲಿಸಿದಾಗ, ಇಬ್ಬರ ಮಧ್ಯೆ ಕಳೆದ ಆರು ತಿಂಗಳಿಂದ ಸಂಪರ್ಕ ಇಲ್ಲದಿರುವುದು ತಿಳಿದಿದೆ. ಸದ್ಯ ಪೊಲೀಸರು ಅಶ್ರಫ್​ನನ್ನು ಬಿಟ್ಟು ಕಳುಹಿಸಿದ್ದಾರೆ.

ಮಹಾಲಕ್ಷ್ಮಿಯ ಮೊಬೈಲ್ ಪತ್ತೆ

ಮಹಾಲಕ್ಷ್ಮಿ ಮನೆಯಲ್ಲೇ ಆಕೆಯ ಮೊಬೈಲ್​ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಮೊಬೈಲ್​ ವಶಕ್ಕೆ ಪಡೆದ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...