ಕೋಗಿಲು ಬಡಾವಣೆ ಪ್ರಕರಣ: ಜ.8ರೊಳಗೆ 30 ಮಂದಿಗೆ ಮನೆ, ಕನ್ನಡಿಗರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನ

Date:

ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ಹಾಗೆಯೇ ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್ನಾಟಕದಲ್ಲೇ ನೆಲೆಸಿದ್ದವರಾದರೆ ಮನೆ ನೀಡಬೇಕು. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ತೀರ್ಮಾನಿಸಲಾಗಿದೆ.

- Advertisement -

ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು ಮಾಡುವ ವಿಚಾರದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಕೋಗಿಲು ಗೆ ‘ಸರ್ಕಾರಿ ಬೇಲಿ’ : ನಿವಾಸಿಗಳೊಡನೆ ಮಾತಿನ ಚಕಮಕಿ

ಮಾತೃ ಭಾಷೆ ಬೇರೆಯಾಗಿದ್ದರೂ ಹಲವು ತಲೆಮಾರಿನಿಂದ ಕರ್ನಾಟಕದಲ್ಲಿ ವಾಸವಿದ್ದರೂ, ಮೂಲ ತಾಲೂಕು-ಊರು ಯಾವುದೆಂದು ತಿಳಿದು ಅಲ್ಲಿನ ವಿಎ ಹಾಗೂ ದಫೇದಾರ್ ಮೂಲಕ ಪರಿಶೀಲಿಸಿ ಅದಾದ ಬಳಿಕ ನಿರಾಶ್ರಿತರಿಗೆ ಮನೆ ನೀಡಬೇಕು. ಬಡವರು ಬಡವರೇ ಭಾರತೀಯರು ಭಾರತೀಯರೇ. ಆದರೆ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಐದು ವರ್ಷ ಕರ್ನಾಟಕದಲ್ಲಿ ನೆಲೆಸಿದ್ದರೆ ಅಂತಹ ಬಡವರಿಗೆ 1 ಲಕ್ಷ ಮನೆ ನೀಡುವ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿ ಮನೆ ಪಡೆಯಬಹುದು. ಒಂದೇ ಕುಟುಂಬದವರು ಮನೆಗಾಗಿ ಎರಡು ಅರ್ಜಿ ಹಾಕಿದರೆ ಒಂದು ರೇಷನ್ ಕಾರ್ಡ್ ಆಧಾರದಲ್ಲಿ ಒಂದು ಮನೆ ನೀಡಬೇಕು. ಹೊರ ರಾಜ್ಯದವರು ಯಾರೆಂದು ಪತ್ತೆಹಚ್ಚುವ ನಿಟ್ಟಿನಲ್ಲಿ ಕನ್ನಡಿಗರಿಗೆ ಮನೆ ನೀಡಲು ತಡ ಮಾಡುವುದು ಸರಿಯಲ್ಲ. ಮೊದಲು ಅರ್ಹರಿಗೆ ಮನೆ ನೀಡಲು ಆರಂಭಿಸಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ? ಕೋಗಿಲು ಬಡಾವಣೆ ಮನೆಗಳ ಧ್ವಂಸ: ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದ ಕೇರಳ ಸಿಎಂ ಪಿಣರಾಯಿ

ಸರ್ಕಾರಿ ಜಮೀನಿನಲ್ಲಿ ಯಾರಿಗೋ ಹಣ ನೀಡಿ ಒತ್ತುವರಿ ಮಾಡಲಾಗುತ್ತಿದೆ. ಅಲೆಮಾರಿಗಳಿಗೆ ಭೂ ಒತ್ತುವರಿ ಅಗತ್ಯ ಇಲ್ಲ. ಅವರು ಒಂದೆಡೆ ನೆಲೆಸುವವರಲ್ಲ. ಆದರೆ ಭೂ ಒತ್ತುವರಿದಾರರನ್ನು ಸಹಿಸಲಾಗದು. ಈ ರೀತಿ ಸರ್ಕಾರಿ ಜಮೀನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ಈ ರೀತಿ ಸರ್ಕಾರಿ ಜಮೀನಿನಲ್ಲಿ ಶೆಡ್ ಹಾಕಿದ ಮಾತ್ರಕ್ಕೆ ಅವರಿಗೆ ಮನೆ ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. ಆದರೆ ಕೋಗಿಲು ಕ್ರಾಸ್ ಪ್ರಕರಣದಲ್ಲಿ ಬಡವರಿಗೆ ಮಾನವೀಯತೆ ಅಡಿ ಮನೆ ನೀಡಬೇಕಾಗುತ್ತದೆ. ಆದರೆ ಆ ಕೆಲಸ ಕಾನೂನುಬದ್ಧವಾಗಿಯೇ ನಡೆಯಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...