ಕೆಪಿಎಸ್‌ಸಿ ಮರುಪರೀಕ್ಷೆಗೆ ಸೂಚನೆ; ಸಿಎಂಗೆ ಕರವೇ ಅಭಿನಂದನೆ

Date:

Advertisements

ಆಗಸ್ಟ್‌ 27ರಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಹಾಗೂ ಮರುಪರೀಕ್ಷೆ ನಡೆಸಬೇಕು ಎಂದು ಕೋರಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಹಾಗೂ ಪರೀಕ್ಷಾರ್ಥಿಗಳು ಸೆಪ್ಟೆಂಬರ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಾಪ್ರತಿಭಟನೆ ನಡೆಸುತ್ತಿದ್ದಾರೆ.

ಸುಮಾರು ಒಂದು ಲಕ್ಷದ ಮೂವತ್ತಾರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದು, ಈ ಪೈಕಿ ಬಹುತೇಕರು ಅಂದರೆ, ಸುಮಾರು ಒಂದು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಗ್ರಾಮೀಣ ಹಿನ್ನೆಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಇದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಮಾಧ್ಯಮದ ಮೂಲಕವೇ ಕೆಎಎಸ್‌ ಪರೀಕ್ಷೆಗಾಗಿ ಅಧ್ಯಯನ ನಡೆಸಿದ್ದಾರೆ. ಇಂತವರಿಗೆ ಸರಿಯಾಗಿ ಅರ್ಥವೂ ಆಗದ ಪ್ರಶ್ನೆಗಳುಳ್ಳ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ, ಕೊಡಲಾಗಿದೆ. 120 ಅಂಕಗಳ ಸುಮಾರು 60 ಪ್ರಶ್ನೆಗಳು ತಪ್ಪುಗಳಿಂದ ಕೂಡಿವೆ. ಜತೆಗೆ ಗೊಂದಲವನ್ನೂ ಕೂಡ ಮೂಡಿಸಿವೆ. ಇದು ಅತ್ಯಂತ ಗಂಭೀರ ಪ್ರಮಾದವಾಗಿದೆ. ಹಾಗಾಗಿ, ಈ ಕೂಡಲೇ ಸರ್ಕಾರ ಎಚ್ಚೆತ್ತು ಮರುಪರೀಕ್ಷೆ ನಡೆಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ ಎಂದು ಕರವೇ ಹೇಳಿದೆ.

ಇನ್ನು ಪರೀಕ್ಷೆಗಳಲ್ಲಿ ಹಲವಾರು ಪ್ರಶ್ನೆಗಳು ಲೋಪದೋಷಗಳಿಂದ ಕೂಡಿವೆ. Recently introduced Karnataka Stamp Act ಎಂಬುದನ್ನು ಇತ್ತೀಚೆಗೆ ಜಾರಿಗೆ ಬಂದ ಕರ್ನಾಟಕ ಸ್ಟಾಂಪು ಅಧಿನಿಯಮ ಎಂದು ಮಾಡಲಾಗಿದೆ. ಆದರೆ, Introduced ಎಂದರೆ ಮಂಡಿಸಲಾಗಿರುವ ಎಂಬ ಅರ್ಥವನ್ನು ತಿಳಿಸುತ್ತೆ.

Advertisements

Solar cities are identified by Karnataka ಎಂಬುದನ್ನು ಸೋಲಾರ್ ನಗರಗಳು ಕರ್ನಾಟಕದಲ್ಲಿ ಗುರುತಿಸಲ್ಪಟ್ಟಿದೆ ಎಂದು ಕೊಡಲಾಗಿದೆ ಕರ್ನಾಟಕವು ಗುರುತಿಸಿರುವ ಸೋಲಾರ್ ನಗರಗಳು ಎಂದಾಗಬೇಕು. State Legislatures ಎಂಬುದನ್ನು ರಾಜ್ಯಗಳ ಶಾಸಕಾಂಗ ಎಂಬುದರ ಬದಲಾಗಿ ರಾಜ್ಯ ವಿಧಾನಮಂಡಲ ಎಂದು ಕೊಡಲಾಗಿದೆ. ಬಹುಶಃ ಗೂಗಲ್ ಟ್ರಾನ್ಸ್ ಲೇಟ್ ಬಳಸಿ ಇಷ್ಟು ಕೆಟ್ಟ ಅನುವಾದ ಮಾಡಲಾಗಿದೆ ಎಂದು ಕರವೇ ಆರೋಪಿಸಿದೆ.

ಕರವೇ

“120 ಅಂಕಗಳ ಪರೀಕ್ಷೆಯಲ್ಲಿ 60 ಪ್ರಶ್ನೆಗಳಲ್ಲಿ ಕನ್ನಡ ಪದಬಳಕೆ ತಪ್ಪಾಗಿದೆ. ಮರುಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಕರವೇ ವಿದ್ಯಾರ್ಥಿಗಳ ಪರವಾಗಿದೆ. ಇದು ಕನ್ನಡ ನಾಡಿನ ಮಕ್ಕಳ ಭವಿಷ್ಯ ಎಂಬ ಎಚ್ಚರಿಕೆಯನ್ನು ಸರ್ಕಾರ ಮತ್ತು ಆಯೋಗಕ್ಕೆ ಮಾಧ್ಯಮಗಳ ಮುಖಾಂತರ ಹಂಚಿಕೊಂಡಿದ್ದೆ. ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಮುಂದೆ ಆಯೋಗದ ಮುಂದೆ ಹಂಚಿಕೊಂಡಿದ್ದೆ. ಇದೀಗ ಮರುಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇದೀಗ ನಿರ್ಲಕ್ಷ್ಯ ತೋರಿ ಪ್ರಶ್ನೆ ಪತ್ರಿಕೆ ತಯಾರಿಸಿದ್ದ ಕೆಪಿಎಸ್‌ಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ” ಎಂದು ಕರವೇ ಅಧ್ಯಕ್ಷ ನಾರಾಯಣಗೌಡರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಹೈಜಂಪ್; ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟ ನಿಶಾದ್ ಕುಮಾರ್

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕೆಎಎಸ್ ಪರೀಕ್ಷಾರ್ಥಿ ಸಚಿನ್, “ಸುಮಾರು 60 ಪ್ರಶ್ನೆಗಳಲ್ಲಿ ಕನ್ನಡದ ತಪ್ಪು ಬಳಕೆ ಮಾಡಲಾಗಿದೆ. ಕಳೆದ ನಾಲ್ಕೈದು ವರ್ಷದಿಂದ ನಾವು ಕೆಎಎಸ್‌ಗಾಗಿ ಓದುತ್ತಿದ್ದೇನೆ. ನಾನು ಕಲಿತಿದ್ದು ಕನ್ನಡ, ಇಂಗ್ಲಿಷ್ ಬಳಕೆ ಕಡಿಮೆ ಇದೆ. ಇನ್ನು ಸುಮಾರು ವರ್ಷಗಳ ಕಾಲ ಕಷ್ಟಪಟ್ಟು ಓದಿ ಪರೀಕ್ಷೆ ಬರೆಯೋಣ ಎಂದರೆ, ಕೆಪಿಎಸ್‌ಸಿ ಅಧಿಕಾರಿಗಳು ಕನ್ನಡ ಪದಬಳಕೆ ಮಾಡಿರುವುದು ಕಂಡು ನಿಜಕ್ಕೂ ಬೇಜಾರಾಯಿತು. ಈ ರೀತಿ ನಿರ್ಲಕ್ಷ್ಯ ತೋರಿದ ಕೆಪಿಎಸ್‌ಸಿ ಅಧಿಕಾರಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಈಗ ಸರ್ಕಾರ ಮರುಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಸರ್ಕಾರ ಈ ಬಾರಿ ಪ್ರಾಮಾಣಿಕವಾಗಿ ಪ್ರಶ್ನೆಪತ್ರಿಕೆಗಳನ್ನು ತಯಾರು ಮಾಡಬೇಕು. ಎರಡು ತಿಂಗಳಿನಲ್ಲಿ ಪರೀಕ್ಷೆ ನಡೆಸಬೇಕು.  ಇಲ್ಲವಾದರೇ, ಉಗ್ರಹೋರಾಟ ಮಾಡಲಾಗುವದು” ಎಂದು ಆಗ್ರಹಿಸಿದ್ದಾರೆ.  

“ಸರ್ಕಾರದ ನಡೆ ಸ್ವಾಗತಾರ್ಹ. ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕು” ಎಂದು ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕೆಪಿಎಸ್‌ಸಿ ಪರೀಕ್ಷಾರ್ಥಿ ಮೇಘಾ ಹೇಳಿದ್ದಾರೆ.

ಕರವೇ

“ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

“ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X