ಕಳಪೆ ಕಾಮಗಾರಿ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಠಿಣ ಕ್ರಮ; ಅಧಿಕಾರಿ ಅಮಾನತು

Date:

ಬೆಂಗಳೂರು ನಗರದಲ್ಲಿ ಕಳಪೆ ರಸ್ತೆ ಕಾಮಗಾರಿಗಳ ವಿರುದ್ಧ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದ ಸಚಿವರು, ಇದೀಗ ಸಂಪಂಗಿರಾಮನಗರ ವಿಭಾಗದ ಬಿಬಿಎಂಪಿ ಸಹಾಯಕ ಎಂಜಿನಿಯರ್‌ ಒಬ್ಬರನ್ನು ಅಮಾನತು ಮಾಡಿದ್ದಾರೆ.

- Advertisement -

ಶನಿವಾರ, ಸಂಪಂಗಿರಾಮನಗರ ಪ್ರದೇಶದಲ್ಲಿ ಕೃಷ್ಣ ಬೈರೇಗೌಡ ಅವರು ರಸ್ತೆ ಡಾಂಬರೀಕರಣದ ಗುಣಮಟ್ಟದ ಕುರಿತು ತೀವ್ರ ಅನುಮಾನ ವ್ಯಕ್ತಪಡಿಸಿದ್ದರು. ತಕ್ಷಣವೇ ಪರಿಶೀಲನೆ ನಡೆಸುವಂತೆ ಬೆಂಗಳೂರು ಕೇಂದ್ರ ನಗರ ನಿಗಮದ (BCCC) ಆಯುಕ್ತರಿಗೆ ಆದೇಶಿಸಿದ್ದರು. ಅಧಿಕಾರಿಗಳು ನಡೆಸಿದ ಈ ತ್ವರಿತ ತನಿಖೆಯ ವೇಳೆ, ಸದರಿ ರಸ್ತೆ ಕಾಮಗಾರಿಯು ನಿಗದಿತ ಗುಣಮಟ್ಟದ ಮಾನದಂಡಗಳನ್ನು ತಲುಪದೇ ಇರುವುದು ಸ್ಪಷ್ಟವಾಗಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ, ಕಾಮಗಾರಿಯ ನೇರ ಮೇಲ್ವಿಚಾರಣೆಯ ಹೊಣೆ ಹೊತ್ತಿದ್ದ ಬಿಬಿಎಂಪಿಯ ಸಹಾಯಕ ಎಂಜಿನಿಯರ್ ಪೂಜಾರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಮಾನತು ಆದೇಶದ ಪ್ರಕಾರ, ಪೂಜಾರಪ್ಪ ಅವರು ಗುತ್ತಿಗೆದಾರರೊಂದಿಗೆ ಶಾಮೀಲಾಗಿ, ಡಾಂಬರು ಮಿಶ್ರಣದ ಸರಿಯಾದ ಪ್ರಮಾಣ ಹಾಗೂ ರಸ್ತೆಯ ಅಗತ್ಯ ದಪ್ಪವನ್ನು ಖಚಿತಪಡಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದಾಗಿ ನಿಗಮಕ್ಕೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ಪ್ರಾಥಮಿಕವಾಗಿ ಆರೋಪಿಸಲಾಗಿದೆ.

ಅಮಾನತು ಆದೇಶದ ಕುರಿತು ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, “ಇಂತಹ ಅಮಾನತು ಕ್ರಮಗಳನ್ನು ಪದೇ ಪದೇ ಕೈಗೊಳ್ಳುವ ಪರಿಸ್ಥಿತಿ ಬಾರದಿರಲಿ ಎಂದು ಆಶಿಸುತ್ತೇನೆ. ಆದರೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಹಾಗೂ ಜವಾಬ್ದಾರಿಯಿಂದ ನಿರ್ವಹಿಸದಿದ್ದರೆ ಇಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಗನಕ್ಕೇರಿದ ದಿನಬಳಕೆ ವಸ್ತುಗಳ ದರ: ‘ಕ್ಯಾ ಹುವಾ ತೇರಾ ವಾದಾ’ – ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ಪ್ರಮುಖ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿರುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...