ಕೆಎಸ್‌ಆರ್‌ಟಿಸಿ | ಡಿ.22 ರಿಂದ ಡಿ.24 ರವರೆಗೆ ಹೆಚ್ಚುವರಿ 1000 ವಿಶೇಷ ಬಸ್ ಕಾರ್ಯಾಚರಣೆ

Date:

ಕ್ರಿಸ್‌ಮಸ್ ಹಬ್ಬದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಡಿ.22 ರಿಂದ ಡಿ.24 ರವರೆಗೆ ಹೆಚ್ಚುವರಿ 1000 ವಿಶೇಷ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.

- Advertisement -

ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳು ಮತ್ತು ಸುತ್ತ-ಮುತ್ತ ರಾಜ್ಯಗಳಿಗೆ ಈ ವಿಶೇಷ ಬಸ್‌ಗಳು ಡಿ.22 ರಿಂದ ಡಿ.24 ರವರೆಗೆ ಸಂಚರಿಸಲಿವೆ. ಡಿಸೆಂಬರ್ 25ರಂದು ಈ ವಿಶೇಷ ಬಸ್​ಗಳು ನಾನಾ ಸ್ಥಳಗಳಿಂದ ಬೆಂಗಳೂರಿಗೆ ಸಂಚರಿಸಲಿವೆ ಎಂದು ಕೆಎಸ್​ಆರ್​ಟಿಸಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿದೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂ‌ರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮ ಹೇಳಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ನಿಗಮ ಕೋರಿದೆ.

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡಿಸಿಪಿ ಕಚೇರಿ ಬಳಿ ವ್ಹೀಲಿಂಗ್ ಮಾಡಿ ಪುಂಡಾಟ

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ದೊರೆಯಲಿದೆ. ಹೋಗುವ & ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ದೊರೆಯಲಿದೆ ಎಂದು ಹೇಳಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...