ಮತ ಹಾಕಲು ಊರಿಗೆ ತೆರಳುವವರಿಗೆ ಎದುರಾದ ಬಸ್‌ ಕೊರತೆ

Date:

Advertisements
  • ಕೆಎಸ್‌ಆರ್‌ಟಿಸಿ ಬಸ್‌ಗಳ ಕೊರತೆ ಹಿನ್ನೆಲೆ, ಖಾಸಗಿ ಬಸ್‌ಗಳ ದರ ದುಪ್ಪಟ್ಟು
  • ಚುನಾವಣಾ ಕರ್ತವ್ಯಕ್ಕಾಗಿ ಕೆಎಸ್​ಆರ್​ಟಿಸಿಯ 3,500 ಬಸ್‌ಗಳ ನಿಯೋಜನೆ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮತದಾನ ಮಾಡಲು ಮತದಾರರು ತಮ್ಮ ಊರಿಗೆ ತೆರಳುತ್ತಿದ್ದಾರೆ. ಖಾಸಗಿ ಬಸ್‌ಗಳ ದರ ದುಪ್ಪಟ್ಟಾದ ಕಾರಣ ಹಲವಾರು ಮಂದಿ ಮೆಜೆಸ್ಟಿಕ್‌ ಕಡೆ ಮುಖಮಾಡಿದ್ದಾರೆ. ಆದರೆ, ಇಲ್ಲಿ ಕೆಎಸ್​ಆರ್​ಟಿಸಿ ಬಸ್‌ಗಳ ಕೊರತೆ ಎದುರಾಗಿದೆ.  

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್​ಆರ್​ಟಿಸಿ)ದಲ್ಲಿ ಒಟ್ಟು 8,100 ಬಸ್​ಗಳಿದ್ದು, ಈ ಪೈಕಿ ಚುನಾವಣಾ ಕರ್ತವ್ಯಕ್ಕಾಗಿ 3,500 ಬಸ್‌ಗಳನ್ನು ನಿಯೋಜನೆ ಮಾಡಲಾಗಿದೆ. ಉಳಿದ 4,400 ಬಸ್‌ಗಳು ಮಾತ್ರ ಕಾರ್ಯಾಚರಣೆಯಲ್ಲಿವೆ. ಈ ಹಿನ್ನೆಲೆಯಲ್ಲಿ ಸರಿಯಾಗಿ ಬಸ್ ಸಿಗದೆ ಪ್ರಯಾಣಿಕರು ಪರದಾಡುವಂತಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೋಟೆಲ್‌ಗಳಲ್ಲಿ ಉಚಿತ ತಿಂಡಿ ವಿತರಣೆ ; ತಡೆಹಿಡಿದ ಬಿಬಿಎಂಪಿ

Advertisements

ಖಾಸಗಿ ಬಸ್‌ಗಳ ಟಿಕೆಟ್‌ ದರ ಹೆಚ್ಚಳ

ಕೆಎಸ್‌ಆರ್‌ಟಿಸಿ ಬಸ್‌ಗಳ ಕೊರತೆ ಹಿನ್ನೆಲೆ, ಖಾಸಗಿ ಬಸ್‌ಗಳ ದರವೂ ನಿಗದಿತ ಮೊತ್ತಕ್ಕಿಂತ ದುಪ್ಪಟ್ಟಾಗಿದೆ. ‌ಈ ಹಿಂದೆ 900 ರೂಪಾಯಿ ಇದ್ದ ಬಸ್‌ ಟಿಕೆಟ್‌ ದರ ಇದೀಗ 2 ಸಾವಿರದಿಂದ 3 ಸಾವಿರದವರೆಗೂ ಏರಿಕೆ‌ಯಾಗಿದೆ.

“ಮತದಾನ ಮಾಡಲು ಊರಿಗೆ ತೆರಳೋಣ ಎಂದು ಮೆಜೆಸ್ಟಿಕ್ ಬಳಿ ಬಂದರೆ ಇಲ್ಲಿ ಬಸ್‌ಗಳೇ ಇಲ್ಲ. ಊರಿಗೆ ತೆರಳುವ ಬಸ್‌ಗಳೆಲ್ಲವೂ ತುಂಬಿ ಹೋಗಿವೆ. ನಿಂತುಕೊಳ್ಳಲು ಸಹ ಸ್ಥಳಾವಕಾಶ ಇಲ್ಲ. ಹೀಗೆ ಆದರೆ ನಾವು ಊರಿಗೆ ಹೋಗಿ ಮತ ಹಾಕುವುದು ಹೇಗೆ” ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X