ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ತನಿಖೆ ಹೊಣೆ ಸಿಸಿಬಿಗೆ ವರ್ಗಾವಣೆ

Date:

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಕುರಿತು ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ (35) ಆತ್ಮಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಸಿಬಿಗೆ ವಹಿಸಲಾಗಿದೆ. ಜೀವಾ ಆತ್ಮಹತ್ಯೆಯ ಕುರಿತು ಅವರ ಸಹೋದರಿ ಸಂಗೀತಾ ನೀಡಿದ್ದ ದೂರಿನನ್ವಯ ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿಗೆ ವಹಿಸಿ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

- Advertisement -

ಭೋವಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಜೀವಾಳ ಬ್ಯಾಂಕ್ ಖಾತೆಯಲ್ಲಿ ಸಾಕಷ್ಟು ಹಣ ವರ್ಗಾವಣೆಯಾಗಿದೆ ಎಂಬ ಆರೋಪದಡಿ ಅವರನ್ನು ವಿಚಾರಣೆಗೊಳಪಡಿಸಿದ್ದರು. ವಿಚಾರಣೆಯ ನೆಪದಲ್ಲಿ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದ, ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮೆಟೀರಿಯಲ್ಸ್ ಪೂರೈಸುತ್ತಿದ್ದ ಜೀವಾ ನವೆಂಬರ್ 22ರಂದು ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಜೀವಾಗೆ ಸಿಐಡಿಯ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಕಿರುಕುಳ ನೀಡಿದ್ದಾರೆ ಹಾಗೂ 25 ಲಕ್ಷ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಮೃತಳ ಸಹೋದರಿ ಸಂಗೀತಾ ಆರೋಪಿಸಿದ್ದರು. ಡೆತ್ ನೋಟ್‌ ಮತ್ತು ಮೃತಳ ಸಹೋದರಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...