ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸೆರೆ

Date:

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಐದು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಬೆಂಗಳೂರು ಐಟಿ ಹಬ್‌ನ ಹೊರವಲಯದಲ್ಲಿರುವ ನಿರ್ಜನ ಪ್ರದೇಶವಾದ ಹೆಲಿಪ್ಯಾಡ್ ಪ್ರದೇಶದ ಬಳಿ ಇರಿಸಲಾಗಿದ್ದ ಬೋನಿನಲ್ಲಿ ಚಿರತೆ ಸಿಕ್ಕಿಬಿದ್ದಿದೆ.

- Advertisement -

ಅರಣ್ಯ ಇಲಾಖೆ ಸೆರೆ ಸಿಕ್ಕ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಟೆಕ್ ಹಬ್‌ನಲ್ಲಿ ಚಿರತೆ ಇರುವುದು ಬೆಳಕಿಗೆ ಬಂದ ನಂತರ ಅರಣ್ಯಾಧಿಕಾರಿಗಳು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಚಿರತೆಯ ಚಲನವಲನವನ್ನು ಪತ್ತೆಹಚ್ಚಲು ವಿವಿಧ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಮತ್ತು ಥರ್ಮಲ್ ಡ್ರೋನ್‌ಗಳನ್ನು ನಿಯೋಜಿಸಲಾಗಿತ್ತು.

ಇದನ್ನು ಓದಿದ್ದೀರಾ? ರಾಯಚೂರು | ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿ ಮೇಕೆ ತಿಂದ ಚಿರತೆ; ಜನರಲ್ಲಿ ಆತಂಕ

ಮುಂಜಾನೆ 3 ಗಂಟೆಗೆ ಚಿರತೆಯೊಂದು ಟೋಲ್ ಪ್ಲಾಜಾ ಬಳಿ ಫ್ಲೈಓವರ್ ರಸ್ತೆ ದಾಟುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆದ ಒಂದು ವಾರದ ನಂತರ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಇನ್ನು ಚಿರತೆ ಕಾಣಿಸಿಕೊಂಡ ನಂತರ ಟೆಕ್ ಹಬ್‌ನ ನಿವಾಸಿಗಳಿಗೆ ಹೆಚ್ಚಿನ ಎಚ್ಚರಿಕೆ ನೀಡಲಾಗಿತ್ತು.

ಇನ್ನು ಜಿಗಣಿಯಲ್ಲಿ ಈ ತಿಂಗಳ ಆರಂಭದಲ್ಲಿ ಕಾಣಿಸಿಕೊಂಡ ಚಿರತೆಯೇ ಇದು ಆಗಿರಬಹುದು ಎಂದು ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...