ಲೈಫ್ ಟೈಂ ಟ್ಯಾಕ್ಸ್‌ | ಸರ್ಕಾರದ ವಿರುದ್ಧ ಸಿಡಿದೆದ್ದ ಗೂಡ್ಸ್‌ ವಾಹನ ಮಾಲೀಕರು; ಸೆ. 1ರಂದು ಪ್ರತಿಭಟನೆ

Date:

ರಾಜ್ಯ ಸರ್ಕಾರ ಗೂಡ್ಸ್ ವಾಹನಗಳ ತೆರಿಗೆ ಮೊತ್ತವನ್ನು ಅಧಿಕಗೊಳಿಸಿದ್ದು, ಲೈಫ್ ಟೈಂ ಟ್ಯಾಕ್ಸ್‌ ಪಾವತಿಗೆ ಜುಲೈ 28ರಂದು ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಇದೀಗ, ಈ ಕಾಯ್ದೆ ಗೂಡ್ಸ್‌ ವಾಹನ ಮಾಲೀಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯುವಂತೆ ಗೂಡ್ಸ್ ವಾಹನ ಮಾಲೀಕರು ಸೆ. 1ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

- Advertisement -

ಆ. 31 ರಂದು ಶಾಂತಿನಗರ ರಸ್ತೆಯುದ್ದಕ್ಕೂ 250ಕ್ಕೂ ಹೆಚ್ಚು ಎಂಜಿವಿ (ಮೀಡಿಯಂ ಗೂಡ್ಸ್ ವೆಹಿಕಲ್) ಗೂಡ್ಸ್ ವಾಹನ ನಿಲ್ಲಿಸಲಾಗಿದೆ. ನಿಲ್ದಾಣದ ಬಳಿಯ ಬಿಟಿಎಸ್ ರೋಡ್ ಬ್ಲಾಕ್ ಮಾಡಲಾಗಿದೆ. ಪ್ರತಿಭಟನಾನಿರತರು ಈ ವೇಳೆ ಶಾಂತಿನಗರ ಆರ್​ಟಿಒ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಲಾರಿ ಅಸೋಸಿಯೇಷನ್ ಅಧ್ಯಕ್ಷ ಶಣ್ಮುಗಪ್ಪ, “ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯದೇ ಇದ್ದರೆ, ಸೆ.1 ರಂದು ಬೆಂಗಳೂರಿನಾದ್ಯಂತ ಎರಡೂವರೆ ಸಾವಿರ ಎಂಜಿವಿ ಗೂಡ್ಸ್‌ ವಾಹನ ನಿಲ್ಲಿಸಿ ಬೃಹತ್ ಪ್ರತಿಭಟನೆ ಮಾಡುತ್ತೇವೆ” ಎಂದು ತಿಳಿಸಿದರು.

“2 ಸಾವಿರದಿಂದ ಲೈಫ್ ಟ್ಯಾಕ್ಸ್‌ 70 ಸಾವಿರ ಮಾಡಿದ್ದಾರೆ. ನಮಗೆ ಈ ಟ್ಯಾಕ್ಸ್‌ ಕಟ್ಟಲು ಆಗಲ್ಲ. ಇದು ನಮ್ಮ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. ಸರ್ಕಾರ ಕಳೆದ ಜುಲೈ 28ರಂದು ಅಧಿಸೂಚನೆ ಹೊರಡಿಸಿದೆ. ಟ್ಯಾಕ್ಸ್‌ ಪಾವತಿಗೆ ಇವತ್ತು ಕಡೆಯ ದಿನ. ರಾಜ್ಯಾದ್ಯಂತ 28 ಸಾವಿರ ಲಾರಿಗಳಿದ್ದು, ಬೆಂಗಳೂರಿನಲ್ಲಿ 13 ಸಾವಿರ ಲಾರಿಗಳಿವೆ” ಎಂದು ಹೇಳಿದರು.

“ಬೇರೆ ರಾಜ್ಯಗಳಲ್ಲಿ ಇಲ್ಲದ ಕಾಯ್ದೆ ನಮ್ಮ ರಾಜ್ಯದಲ್ಲಿ ಏಕೆ ಜಾರಿಗೆ ತಂದಿದ್ದಾರೆ. ಸೆ.1 ರಂದು ರಾಜ್ಯಾದ್ಯಂತ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ. ಇದರಿಂದ ಲಾ ಅಂಡ್ ಆರ್ಡರ್‌ಗೆ ತೊಂದರೆ ಆದರೆ ಅದಕ್ಕೆ ನಾವು ಹೊಣೆಯಲ್ಲ” ಎಂದರು.

ತ್ರೈಮಾಸಿಕ ತೆರಿಗೆ ಪಾವತಿ ಬದಲಾಗಿ ವಾಹನ ನೋಂದಣಿ ವೇಳೆ ಲೈಫ್​ ಟೈಂ (ಏಕ ಕಾಲಿಕ) ಪಾವತಿ ಮಾಡಲು ರಾಜ್ಯ ಸರ್ಕಾರ ಜುಲೈ 28ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆ.1ರಿಂದಲೇ ಲೈಫ್ ಟೈಮ್ ರೋಡ್ ಟ್ಯಾಕ್ಸ್ ಕಾಯ್ದೆ ಜಾರಿಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಡ್ರಗ್ಸ್‌ ಹಾವಳಿ ತಡೆಗಟ್ಟಲು ವಿದ್ಯಾರ್ಥಿಗಳ ಪಡೆ ನಿರ್ಮಾಣ ಮಾಡಿದ ಬೆಂಗಳೂರು ಪೊಲೀಸರು

ಈ ಹಿಂದೆ ಹಳದಿ ಫಲಕದ ಎಲ್​ಜಿವಿ, ಎಂಜಿವಿ ವಾಹನಗಳ ಮಾಲೀಕರು ಮೂರು ತಿಂಗಳಿಗೊಮ್ಮೆ ₹2,000 ಟ್ಯಾಕ್ಸ್ ಕಟ್ಟುತಿದ್ದರು. ಈ ಕಾಯ್ದೆಯನ್ನು ಸರ್ಕಾರ ಬದಲಾವಣೆ ಮಾಡಿದೆ. ಕಳೆದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ತಿದ್ದುಪಡಿ ಮಾಡಲಾಗಿತ್ತು.

ಎರಡು ಮೂರು ಲಾರಿ ಹೊಂದಿರುವ ಮಾಲೀಕರಿಗೆ ಏಕಕಾಲಕ್ಕೆ ಭಾರೀ ಮೊತ್ತದ ತೆರಿಗೆ ಕಟ್ಟುವುದು ಕಷ್ಟವಾಗಿದೆ. ಈ ನೂತನ ಕಾಯ್ದೆಯಿಂದ ಗೂಡ್ಸ್‌ ವಾಹನ ಮಾಲೀಕರು ಕಂಗಾಲಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...